Udupi News

ಲಯನ್ಸ್ ಕ್ಲಬ್ ಪರ್ಕಳ ವತಿಯಿಂದ ಸಹಾಯಧನ ವಿತರಣೆ…!

ಉಡುಪಿ : ಆತ್ರಾಡಿ ಮದಗದಲ್ಲಿ ಕಳೆದ ಜುಲೈ ತಿಂಗಳಲ್ಲಿ ಸುರಿದ ಭೀಕರ ಮಳೆಗೆ ಪೂರ್ಣ ಕುಸಿತಗೊಂಡ ಮನೆಯನ್ನು ಪುನರ್ ನಿರ್ಮಾಣ ಮಾಡಲು ಲಯನ್ಸ್ ಕ್ಲಬ್ ಪರ್ಕಳ ವತಿಯಿಂದ ಲಯನ್ಸ್ ಕ್ಲಬ್ ಇಂಟರ್ನ್ಯಾಷನಲ್’ನ ಒಂದು ಪ್ರಮುಖ ಕಾರ್ಯಕ್ರಮವಾದ “ಹೋಮ್ ಫಾರ್ ಹೋಂ ಲೆಸ್”…

Read more

ಹಿರಿಯ ಭಾಗವತ ಬಾಳೆಹದ್ದ ಕೃಷ್ಣ ಹೆಗಡೆ ನಿಧನ

ಉಡುಪಿ : ರಾಗ ತಪಸ್ವಿ, ಗಾನ ಯೋಗಿ ಎಂದೇ ಪ್ರಸಿದ್ಧರಾಗಿದ್ದ ಹಿರಿಯ ಭಾಗವತ ಬಾಳೆಹದ್ದ ಕೃಷ್ಣ ತಿಮ್ಮಯ್ಯ ಹೆಗಡೆ (94) ನಿಧನರಾದರು. ಶಿರಸಿ ಸಮೀಪದ ಬಾಳೆಹದ್ದದಲ್ಲಿ ಜನಿಸಿದ ಕೃಷ್ಣ ಭಾಗವತರು ಏಳು ದಶಕಗಳಿಗೂ ಅಧಿಕ ಕಾಲ ಯಕ್ಷಗಾನ ಪದ್ಯ ಹಾಡುತ್ತಾ ಹೊಸ…

Read more

ಫೆಂಗಲ್ ಚಂಡಮಾರುತ : ಡಿ.3ರಂದು ಉಡುಪಿ ಜಿಲ್ಲೆಯಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಉಡುಪಿ : ಫೆಂಗಲ್‌ ಚಂಡಮಾರುತ ಪರಿಣಾಮ ಉಡುಪಿ ಜಿಲ್ಲೆಯಾದ್ಯಂತ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗೃತ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಉಡುಪಿ ಜಿಲ್ಲೆಯ ಎಲ್ಲ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ಪದವಿ ಪೂರ್ವ ಕಾಲೇಜು (1-12ನೇ…

Read more

ಗ್ರಾಮೀಣ ಶಾಲೆಗಳ ಅಭಿವೃದ್ಧಿಗೆ ವಿಶೇಷ ಆದ್ಯತೆ : ಯಶ್‌ಪಾಲ್ ಸುವರ್ಣ

ಉಡುಪಿ : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹೇರೂರಿನಲ್ಲಿ ಸುಮಾರು 20 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ತರಗತಿ ಕೊಠಡಿಗಳ ಶಿಲಾನ್ಯಾಸ ಕಾರ್ಯಕ್ರಮವನ್ನು ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಯಶ್‌ಪಾಲ್ ಸುವರ್ಣ ನೆರವೇರಿಸಿದರು. ಶಿಲಾನ್ಯಾಸ ನೆರವೇರಿಸಿ ಮಾತನಾಡಿದ ಶಾಸಕ ಯಶ್‌ಪಾಲ್ ಸುವರ್ಣ, ಶತಮಾನೋತ್ಸವ…

Read more

“ಸಂವಿಧಾನ ಬದಲಿಸಬೇಕು ಎನ್ನುವ ಮಾತನ್ನು ನಾನು ಆಡಿಯೇ ಇಲ್ಲ” – ಪೇಜಾವರ ಶ್ರೀ ಸ್ಪಷ್ಟನೆ

ಉಡುಪಿ : ಸಂವಿಧಾನ ಕುರಿತು ಪೇಜಾವರ ಶ್ರೀಗಳು ನೀಡಿದ್ದಾರೆ ಎನ್ನಲಾದ ಹೇಳಿಕೆ ರಾಜ್ಯದಲ್ಲಿ ತೀವ್ರ ಸಂಚಲನ ಉಂಟು ಮಾಡಿದೆ. ಇದಕ್ಕೆ ತೀವ್ರ ವಿರೋಧಗಳೂ ವ್ತಕ್ತವಾಗುತ್ತಿವೆ. ಈ ಕುರಿತು ಮೌನ ಮುರಿದಿರುವ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥರು, ಸಂವಿಧಾನ ಬದಲಿಸಬೇಕು ಎನ್ನುವ…

Read more

ಕುಡಿಯುವ ನೀರಿನ ದರದಲ್ಲಿ ಶೇ. 18ರಿಂದ ಶೇ. 25‌ರ ವರೆಗೆ ಕಡಿತ ಇಂದಿನಿಂದ ಜಾರಿ

ಉಡುಪಿ : ಉಡುಪಿ ನಗರಸಭೆ ಗೃಹ ಬಳಕೆ, ವಾಣಿಜ್ಯ, ಕೈಗಾರಿಕಾ ಸಂಪರ್ಕದ ಕುಡಿಯುವ ನೀರಿನ ದರದಲ್ಲಿ ಕಡಿತಗೊಳಿಸಲಾಗಿದ್ದು, ಡಿಸೆಂಬರ್ 1 ರಿಂದ ಜಾರಿಯಾಗಲಿದೆ ಎಂದು ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಹಾಗೂ ನಗರಸಭೆ ಅಧ್ಯಕ್ಷರಾದ ಪ್ರಭಾಕರ ಪೂಜಾರಿ ತಿಳಿಸಿದ್ದಾರೆ. ನಗರಸಭೆ ಆಡಳಿತಾಧಿಕಾರಿ…

Read more

ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ‌ ಕಚೇರಿ ಉದ್ಘಾಟಿಸಿದ ಸಚಿವೆ

ಉಡುಪಿ : ಕರ್ನಾಟಕದಲ್ಲಿ ಜಾರಿಗೆ ತರಲಾಗಿರುವ ಪಂಚ ಗ್ಯಾರಂಟಿ ಯೋಜನೆಗಳನ್ನು ಬೇರೆ ರಾಜ್ಯಗಳು ಕೂಡ ಅನುಸರಿಸುತ್ತಿವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ತಾಲೂಕು ಪಂಚಾಯತ್ ಕಟ್ಟಡದಲ್ಲಿ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ…

Read more

ಕುಲಾಧಿಪತಿ ಹುದ್ದೆ ರಾಜ್ಯಪಾಲರ ಬದಲು ಮುಖ್ಯಮಂತ್ರಿಗಳಿಗೆ – ಎಬಿವಿಪಿ ಖಂಡನೆ

ಉಡುಪಿ : ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಉಡುಪಿ ನಗರ ವತಿಯಿಂದ ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯದ ಕುಲಾಧಿಪತಿ ಹುದ್ದೆಯನ್ನು ರಾಜ್ಯಪಾಲರ ಬದಲು ಮುಖ್ಯಮಂತ್ರಿಗಳಿಗೆ ನೀಡುತ್ತಿರುವ ಸರ್ಕಾರದ ನಡೆಯನ್ನು ಖಂಡಿಸಿ ಅಜ್ಜರಕಾಡು ಯುದ್ಧ ಸ್ಮಾರಕದ ಬಳಿ ಪ್ರತಿಭಟನೆಯನ್ನು…

Read more

ಜಿಲ್ಲೆಯ ಸಮಸ್ಯೆಗಳಿಗೆ ಮನವಿ ಸಲ್ಲಿಸಲು ಸಿಎಂ ಬಳಿ ನಿಯೋಗ : ಲಕ್ಷ್ಮೀ ಹೆಬ್ಬಾಳ್ಕರ್

ಉಡುಪಿ : ಜಿಲ್ಲೆಯ ಜ್ವಲಂತ ಸಮಸ್ಯೆಗಳಿಗೆ ಬೆಳಕು ಚೆಲ್ಲುವ ಸಲುವಾಗಿ ಮುಂಬರುವ ಅಧಿವೇಶನದ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಳಿ ಜಿಲ್ಲೆಯ ಶಾಸಕರನ್ನೊಳಗೊಂಡ ನಿಯೋಗ ತೆರಳಿ ಮನವಿ ಸಲ್ಲಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಜಿಲ್ಲಾ…

Read more

ಮಲೆಕುಡಿಯ ಸಮುದಾಯದ ಸಮಗ್ರ ಅಭಿವೃದ್ಧಿಗಾಗಿ 100 ಕೋಟಿ ರೂ. ವಿಶೇಷ ಅನುದಾನ ಬಿಡುಗಡೆಗೊಳಿಸಿ; ಉಡುಪಿ ಜಿಲ್ಲಾ ಮಲೆಕುಡಿಯ ಸಂಘ ಒತ್ತಾಯ

ಉಡುಪಿ : ಉಡುಪಿ ಜಿಲ್ಲೆಯ ಪಶ್ಚಿಮಘಟ್ಟ ತಪ್ಪಲಿನ ಪ್ರದೇಶಗಳಲ್ಲಿ ವಾಸವಾಗಿರುವ ಅರಣ್ಯ ಬುಡಕಟ್ಟು ಪರಿಶಿಷ್ಟ ಪಂಗಡದ ಜನಾಂಗವಾದ ‘ಮಲೆಕುಡಿಯ ಸಮುದಾಯದ ಸಮಗ್ರ ಅಭಿವೃದ್ಧಿಗಾಗಿ 100 ಕೋಟಿ ರೂ. ವಿಶೇಷ ಅನುದಾನ ಬಿಡುಗಡೆ ಮಾಡಬೇಕೆಂದು ಉಡುಪಿ ಜಿಲ್ಲಾ ಮಲೆಕುಡಿಯ ಸಂಘ ಒತ್ತಾಯ ಮಾಡಿದೆ.…

Read more