Udupi Police

ಉಡುಪಿ ಜಿಲ್ಲೆಯ ಜನರೊಂದಿಗೆ ಸದಾ ಇರುವೆ, ಟೋಲ್‌ಗೇಟ್ ರದ್ದತಿ ಕುರಿತಂತೆ ಕ್ರಮ : ಲಕ್ಷ್ಮೀ ಹೆಬ್ಬಾಳಕರ್ ಭರವಸೆ

ಪಡುಬಿದ್ರಿ : ಪಡುಬಿದ್ರಿ-ಬೆಳ್ಳಣ್ಣು-ಕಾರ್ಕಳ ರಾಜ್ಯ ಹೆದ್ದಾರಿಯಲ್ಲಿ ನಿರ್ಮಿಸಲು ಮುಂದಾಗಿರುವ ಟೋಲ್‌ಗೇಟ್ ವಿರುದ್ಧ ಸ್ಥಳೀಯರು ಪ್ರತಿಭಟನೆ ನಡೆಸುತ್ತಿರುವ ಸ್ಥಳಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಭೇಟಿ ನೀಡಿ ಮನವಿ ಸ್ವೀಕರಿಸಿದರು.…

Read more

ಹೆಮ್ಮಾಡಿ ಶ್ರೀ ಲಕ್ಷ್ಮೀನಾರಾಯಣ ದೇವಸ್ಥಾನದಲ್ಲಿ ಕಳ್ಳತನ; 40 ಸಾವಿರಕ್ಕೂ ಅಧಿಕ ನಗದು ಕಳವು

ಉಡುಪಿ : ಹೆಮ್ಮಾಡಿ ಶ್ರೀ ಲಕ್ಷ್ಮೀನಾರಾಯಣ ದೇವಸ್ಥಾನದಲ್ಲಿ ಕಳ್ಳತನದ ಘಟನೆ ನಡೆದಿದೆ. ಈ ದೇಗುಲವು ಇತ್ತೀಚಿಗೆ 7 ಕೋಟಿ ವೆಚ್ಚದಲ್ಲಿ ಜೀರ್ಣೋದ್ದಾರಗೊಂಡಿತ್ತು. ಕಳ್ಳನು ಬಾಗಿಲ ಚಿಲಕದ ಸ್ಕ್ರೂಗಳನ್ನು ತೆಗೆದು, ಸುತ್ತು ಪೌಳಿ ಮೂಲಕ ದೇವಸ್ಥಾನದ ಒಳಕ್ಕೆ ಪ್ರವೇಶಿಸಿದ್ದಾನೆ. ಚಪ್ಪಲಿ ಹಾಕಿಕೊಂಡಿದ್ದ ಕಳ್ಳನು…

Read more

ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ 78ನೇ ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ

ಉಡುಪಿ : ಉಡುಪಿಯ ಅಜ್ಜರಕಾಡುವಿನಲ್ಲಿರುವ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಗುರುವಾರ ನಡೆದ 78ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಧ್ವಜಾರೋಹಣ ನೆರವೇರಿಸಿದರು. ಈ ವೇಳೆ…

Read more

ಸಿಂಗಂ ಸಂದೇಶ್ ಅವರಿಗೆ ಮುಖ್ಯಮಂತ್ರಿ ಪದಕ ಗೌರವ

ಮೂಡಬಿದಿರೆಯ ಸಿಂಗಂ ಎಂದೇ ಪ್ರಖ್ಯಾತಿ ಪಡೆದಿರುವ ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ ಅವರು ಮುಖ್ಯಮಂತ್ರಿ ಪದಕಕ್ಕೆ ಭಾಜನರಾಗಿದ್ದಾರೆ. ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ ಕರ್ತವ್ಯ ನಿರ್ವಹಿಸಿದ ಕಡೆಗಳಲ್ಲಿ ದಕ್ಷ, ಪ್ರಾಮಾಣಿಕ ಅಧಿಕಾರಿ ಎಂಬ ಖ್ಯಾತಿಗೆ ಪಾತ್ರರಾಗಿದ್ದು, ಡೇರಿಂಗ್ ಇಮೇಜಿನಿಂದ ಸಾರ್ವಜನಿಕ ವಲಯದಲ್ಲಿ ಅಪಾರ ಪ್ರಸಿದ್ಧಿ…

Read more

ಹೆಡ್ ಕಾನ್‌ಸ್ಟೇಬಲ್ ಬಿ. ವಿಜಯ್ ಕುಮಾರ್ ಅವರಿಗೆ ರಾಷ್ಟ್ರಪತಿಗಳ ಶ್ಲಾಘನೀಯ ಸೇವಾ ಪದಕ

ಉಡುಪಿ : ಉಡುಪಿ ಜಿಲ್ಲಾ ಪೊಲೀಸ್ ಕಚೇರಿಯ ಡಿಸಿಆರ್‌ಬಿ ವಿಭಾಗದಲ್ಲಿ ಸಿವಿಲ್ ಹೆಡ್ ಕಾನ್‌ಸ್ಟೇಬಲ್ ಆಗಿ ಸೇವೆ ಸಲ್ಲಿಸುತ್ತಿರುವ ಬಿ. ವಿಜಯ್ ಕುಮಾರ್ ಅವರಿಗೆ ರಾಷ್ಟ್ರಪತಿಗಳ ಶ್ಲಾಘನೀಯ ಸೇವಾ ಪದಕ ಲಭಿಸಿದೆ. ಇವರು 1993‌ರಲ್ಲಿ ಪೊಲೀಸ್ ಇಲಾಖೆಗೆ ಸೇರ್ಪಡೆಗೊಂಡಿದ್ದರು. ಈತನಕ ಪಣಂಬೂರು,…

Read more

ಹರ್ಷ ಶೋರೂಮ್ ಮ್ಯಾನೇಜರ್‌ಗೆ ಚೂರಿಯಿಂದ ಇರಿದು ಸೆಕ್ಯೂರಿಟಿ ಗಾರ್ಡ್ ಪರಾರಿ

ಉಡುಪಿ : ಭದ್ರತಾ ಸಿಬ್ಬಂದಿಯೋರ್ವ ಮ್ಯಾನೇಜರ್‌ಗೆ ಚೂರಿಯಿಂದ ಇರಿದು ಪರಾರಿಯಾದ ಘಟನೆ ಉಡುಪಿಯ ಸಿಟಿ ಬಸ್ ನಿಲ್ದಾಣದ ಬಳಿ‌ ಹರ್ಷ ಶೋರೂಮ್‌ನಲ್ಲಿ ಸಂಭವಿಸಿದೆ. ಸಂತೆಕಟ್ಟೆಯ ರೋನ್ಸನ್ ಎವರೆಸ್ಟ್ ಡಿ’ಸೋಜಾ(36) ಚೂರಿ ಇರಿತಕ್ಕೊಳಗಾದ ವ್ಯಕ್ತಿ. ಇವರು ಹರ್ಷ ಶೋರೂಂ‌ನಲ್ಲಿ ಕ್ಲಸ್ಟರ್ ಮ್ಯಾನೇಜ‌ರ್ ಆಗಿ…

Read more

ಬಾಂಗ್ಲಾ ಮುಸ್ಲಿಂ ನುಸುಳುಕೋರರನ್ನು ಗಡಿಪಾರು ಮಾಡಿ – ಶ್ರೀರಾಮಸೇನೆ ಮನವಿ

ಉಡುಪಿ : ನೆರೆಯ ದೇಶ ಬಾಂಗ್ಲಾದಲ್ಲಿ ಇತ್ತೀಚಿಗೆ ರಾಜಕೀಯ ಕ್ಷಿಪ್ರ ಕ್ರಾಂತಿಯಾಗಿ ಅರಾಜಕತೆ ಸೃಷ್ಟಿಯಾಗಿದೆ. ಅಲ್ಲಿ ಅಲ್ಪ ಸಂಖ್ಯಾತರಾದ ಹಿಂದೂಗಳ ಮೇಲೆ ನಿರಂತರ ದೌರ್ಜನ್ಯ ಹಾಗೂ ದಬ್ಬಾಳಿಕೆ ಮಾಡುತ್ತಿರುವುದನ್ನು ಮನಗಂಡ ಉಡುಪಿ ಜಿಲ್ಲಾ ಶ್ರೀರಾಮಸೇನೆಯು ಉಡುಪಿ ಜಿಲ್ಲೆಯಿಂದ ಬಾಂಗ್ಲಾ ವಲಸಿಗರು ಹಾಗೂ…

Read more

ಕೋಳಿ ಅಂಕ ಅಡ್ಡೆಗೆ ಖಾಕಿ ರೇಡ್ : 9 ಕೋಳಿಗಳ ವಶ : ಜೂಜುಕೋರರು ಎಸ್ಕೇಪ್

ಉಡುಪಿ : ಅಂಬಲಪಾಡಿಯಲ್ಲಿ ಅನುಮತಿ ಇಲ್ಲದೆ ನಡೆಯುತ್ತಿದ್ದ ಕೋಳಿ ಅಂಕಕ್ಕೆ ಉಡುಪಿ ನಗರ ಠಾಣೆಯ ಪೊಲೀಸರು ದಾಳಿ ನಡೆಸಿ 9 ಕೋಳಿಗಳನ್ನು ವಶಪಡಿಸಿಕೊಂಡಿದ್ದಾರೆ. ಪೊಲೀಸರನ್ನು ಕಂಡ ಸ್ಥಳೀಯರು ಹಾಗೂ ಜೂಜುಕೋರರು ಅಲ್ಲಿಂದ ಕಾಲ್ಕಿತ್ತಿದ್ದಾರೆ. ಮಾರಿ‌ ಹಬ್ಬದ ಹಿನ್ನೆಲೆಯಲ್ಲಿ ಕೋಳಿ ಅಂಕ ನಡೆಯುತ್ತಿತ್ತು.…

Read more

ರಿಕ್ಷಾದಲ್ಲಿದ್ದ ಲಕ್ಷಾಂತರ ರೂ. ಮೌಲ್ಯದ ಯಂತ್ರ ಕಳವು : ಪ್ರಕರಣ ದಾಖಲು

ಉಡುಪಿ : ಕರಾವಳಿ ಬೈಪಾಸ್ ಬಳಿಯ ಇಸೀ ಲೈಫ್ ಕೃಷಿ ಯಂತ್ರೋಪಕರಣಗಳ ಮಾರಾಟ ಸಂಸ್ಥೆಯ ಗೂಡ್ಸ್ ರಿಕ್ಷಾದಲ್ಲಿ ಇರಿಸಿದ್ದ ಲಕ್ಷಾಂತರ ರೂ. ಮೌಲ್ಯದ ಯಂತ್ರವನ್ನು ಕಳ್ಳರು ಆ.4ರಂದು ರಾತ್ರಿ ವೇಳೆ ಕಳವು ಮಾಡಿರುವ ಘಟನೆ ನಡೆದಿದೆ. ತೀರ್ಥಹಳ್ಳಿಯಲ್ಲಿರುವ ಇನ್ನೊಂದು ಶಾಖೆಯಿಂದ ನಾಲ್ಕು…

Read more

ಉಪ್ಪೂರು ಶ್ರೀಗದ್ದಿಗೆ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಕಳ್ಳತನ…!!

ಬ್ರಹ್ಮಾವರ : ಉಪ್ಪೂರು ಶ್ರೀಗದ್ದಿಗೆ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಆಗಸ್ಟ್ 2 ರಂದು ಬೆಳಗಿನ ಜಾವ ಇಬ್ಬರು ಕಳ್ಳರು ದೇವಸ್ಥಾನದ ಎದುರಿನ ಬಾಗಿಲಿನ ಚಿಲಕವನ್ನು ಮುರಿದು ಒಳಗೆ ಪ್ರವೇಶಿಸಿ ದೇವಸ್ಥಾನದ ಗರ್ಭಗುಡಿಯ ಬಾಗಿಲಿನ ಬೀಗ ಮುರಿದು ಒಳಪ್ರವೇಶಿಸಿ ದೇವರ ಚಿನ್ನದ ದೃಷ್ಟಿ ಹಾಗೂ…

Read more