Udupi

ನವಜಾತ ಶಿಶುಗಳಿಗೆ ಕಾಲಕಾಲಕ್ಕೆ ಲಸಿಕೆ ಹಾಕಿಸಿ : ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಸೂಚನೆ

ಉಡುಪಿ : ನವಜಾತ ಶಿಶುಗಳಿಗೆ ಕಾಲಕಾಲಕ್ಕೆ ನೀಡುವ ಸಾರ್ವತ್ರಿಕ ಲಸಿಕೆಗಳನ್ನು ತಪ್ಪದೇ ಹಾಕಿಸಲು ತಾಯಂದಿರಿಗೆ ಹಾಗೂ ಸಾರ್ವಜನಿಕರಿಗೆ ಮಾಹಿತಿ ನೀಡಿ. ಅವರು ತಮ್ಮ ಮಕ್ಕಳಿಗೆ ಎಲ್ಲಾ ನಿಗದಿತ ಲಸಿಕೆಗಳನ್ನು ತಪ್ಪದೇ ಪಡೆಯುವಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಹೇಳಿದ್ದಾರೆ.…

Read more

ಡಿಸೆಂಬರ್ 6ರಂದು ವಿಪಕ್ಷ ನಾಯಕ ಆರ್. ಅಶೋಕ್ ಉಡುಪಿಗೆ

ಉಡುಪಿ : ರಾಜ್ಯ ವಿಧಾನಸಭೆಯ ವಿಪಕ್ಷ ನಾಯಕ ಆರ್.ಅಶೋಕ್ ಅವರು ಡಿಸೆಂಬರ್ 6 ಶುಕ್ರವಾರ ಬೆಳಿಗ್ಗೆ ಗಂಟೆ 10.30ಕ್ಕೆ ಉಡುಪಿ ಜಿಲ್ಲಾಧಿಕಾರಿಗಳ ಕಛೇರಿಗೆ ಭೇಟಿ ನೀಡಿ, ವಕ್ಫ್ ಬೋರ್ಡ್ ಕಾನೂನಿನಡಿಯಲ್ಲಿ ರೈತರು ಹಾಗೂ ಸಾರ್ವಜನಿಕರಿಗೆ ಉದ್ಭವಿಸಬಹುದಾದ ಸಂಕಷ್ಟಗಳ ಕುರಿತು ಸಂಬಂಧಿತ ದಾಖಲೆಗಳ…

Read more

ಶ್ರೀ ಚಂದ್ರಮೌಳೇಶ್ವರ ದೇವಸ್ಥಾನದಲ್ಲಿ ಅದ್ದೂರಿಯಾಗಿ ನಡೆದ ವಾರ್ಷಿಕ ರಥೋತ್ಸವ

ಉಡುಪಿ : ರಥಬೀದಿಯ ಶ್ರೀ ಚಂದ್ರಮೌಳೀಶ್ವರ ದೇವಸ್ಥಾನದಲ್ಲಿ ವಾರ್ಷಿಕ ರಥೋತ್ಸವದ ರಥಾರೋಹಣ ಕಾರ್ಯಕ್ರಮ ಪರ್ಯಾಯ ಪುತ್ತಿಗೆ ಮಠಾಧೀಶರಾದ ಸುಗುಣೇಂದ್ರತೀರ್ಥ ಶ್ರೀಪಾದರು, ಕಿರಿಯ ಯತಿ ಶ್ರೀ ಸುಶ್ರೀಂದ್ರತೀರ್ಥ ಶ್ರೀಪಾದರು, ಭಂಡಾರಕೇರಿ ಮಠಾಧೀಶರಾದ ಶ್ರೀ ವಿದ್ಯೇಶತೀರ್ಥ ಶ್ರೀಪಾದರ ಉಪಸ್ಥಿತಿಯಲ್ಲಿ ಸಂಪನ್ನಗೊಂಡಿತು. ದೇವಾಲಯವನ್ನು ವಿಶೇಷವಾಗಿ ಹೂಗಳಿಂದ…

Read more

ಮಂಗಳೂರು ಪೊಲೀಸ್ ಕಮೀಷನ‌ರ್ ಅನುಪಮ್ ಅಗರ್ವಾಲ್‌ ವರ್ಗಾವಣೆಗೆ ಆಗ್ರಹಿಸಿ ಪ್ರತಿಭಟನೆ

ಉಡುಪಿ : ಜನ ವಿರೋಧಿ, ಸರ್ವಾಧಿಕಾರಿ ಧೋರಣೆಯ ಮಂಗಳೂರು ಪೋಲಿಸ್ ಕಮೀಷನ‌ರ್ ಅನುಪಮ್ ಅಗರ್ವಾಲ್‌ ವರ್ಗಾವಣೆಗೊಳಿಸುವಂತೆ ಒತ್ತಾಯಿಸಿ ಸಿಪಿಐಎಂ, ದಲಿತ ಸಂಘರ್ಷ ಸಮಿತಿ ಹಾಗೂ ಸಮಾನ ಮನಸ್ಕ ಸಂಘಟನೆಗಳಿಂದ ಅಜ್ಜರಕಾಡಿನ ಹುತಾತ್ಮ ಸ್ಮಾರಕದ ಎದುರು ಪ್ರತಿಭಟನೆ ನಡೆಯಿತು. ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಸಿಪಿಐಎಂ…

Read more

ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ ಇಂದು ಉಡುಪಿಯಲ್ಲಿ ಪ್ರತಿಭಟನೆ

ಉಡುಪಿ : ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾಕ ಹಿಂದೂಗಳ ಮೇಲೆ ನಡೆಯುತ್ತಿರುವ ದೌರ್ಜನ್ಯ ಹಾಗೂ ಇಸ್ಕಾನ್‌ ಮುಖಂಡರನ್ನು ಬಂಧಿಸಿರುವುದನ್ನು ಖಂಡಿಸಿ ಇಂದು ಉಡುಪಿಯಲ್ಲಿ ಬೃಹತ್‌ ಜಾಥಾ ಹಾಗೂ ಪ್ರತಿಭಟನಾ ಸಭೆಯನ್ನು ಹಿಂದೂ ಹಿತರಕ್ಷಣ ಸಮಿತಿಯಿಂದ ಹಮ್ಮಿಕೊಳ್ಳಲಾಗಿದೆ ಎಂದು ಸಮಿತಿಯ ಸಂಚಾಲಕ ರಾಧಾಕೃಷ್ಣ ಮೆಂಡನ್‌ ಪತ್ರಿಕಾಗೋಷ್ಠಿಯಲ್ಲಿ…

Read more

ಶ್ರೀಕೃಷ್ಣ ಮಠಕ್ಕೆ ಅಂತಾರಾಷ್ಟ್ರೀಯ ಪ್ರವಚನಕಾರ ಗೋಪಾಲದಾಸ್‌ ಗೌರ್‌ ಭೇಟಿ

ಉಡುಪಿ : ಅಂತಾರಾಷ್ಟ್ರೀಯ ಪ್ರವಚನಕಾರ, ಲೇಖಕ, ಅಧ್ಯಾತ್ಮಗುರು ಗೋಪಾಲದಾಸ್‌ ಗೌರ್‌ ಅವರು ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ಪರ್ಯಾಯ ಶ್ರೀ ಪುತ್ತಿಗೆ ಮಠಾಧೀಶರಾದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾ‌ದರಿಂದ ಅನುಗ್ರಹ ಮಂತ್ರಾಕ್ಷತೆ ಪಡೆದುಕೊಂಡರು. ಅನಂತರ ಪುತ್ತಿಗೆ ಶ್ರೀಪಾದರ ಪ್ರಧಾನ…

Read more

ಚಂಡಮಾರುತ ಎಫೆಕ್ಟ್: ಉಡುಪಿಯಲ್ಲಿ ಗುಡುಗು ಮಿಂಚು ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ

ಉಡುಪಿ : ಉಡುಪಿಗೆ ತಮಿಳುನಾಡು ಚಂಡಮಾರುತದ ಪರಿಣಾಮ ಬೀರಿದ್ದು ಭಾರೀ ಮಳೆಯಾಗುತ್ತಿದೆ. ಸಂಜೆ ಬಳಿಕ ಸುಮಾರು ಎರಡು ತಾಸು ಗುಡುಗು ಮಿಂಚು ಸಹಿತ ಭಾರೀ ಮಳೆಯಾಯಿತು. ಮಳೆಗೆ ಉಡುಪಿ ನಗರದ ಕೆಲ ಮುಖ್ಯರಸ್ತೆಗಳು ಜಲಾವೃತಗೊಂಡವು. ಜಲಾವೃತಗೊಂಡ ರಸ್ತೆಗಳಲ್ಲಿ ಸಂಚರಿಸಲು ವಾಹನ ಸವಾರರು…

Read more

ಯಕ್ಷಗಾನ ಕಲಾವಿದ ಎಚ್. ಕೆ ವಸಂತ ಭಟ್ ಅಲ್ಪಕಾಲದ ಅಸೌಖ್ಯದಿಂದ ನಿಧನ

ಉಡುಪಿ : ಯಕ್ಷಗಾನ ಕಲಾವಿದ ವಸಂತ ಭಟ್ (64) ಅಲ್ಪಕಾಲದ ಅಸೌಖ್ಯದಿಂದ ನಿಧನ ಹೊಂದಿದರು. ಮೂಲತಃ ಚಿಕ್ಕಮಗಳೂರು ಜಿಲ್ಲೆಯ ಹಳುವಳ್ಳಿಯ ಪ್ರಸಿದ್ಧ ಸ್ತ್ರೀವೇಷಧಾರಿ ಕೃಷ್ಣಯ್ಯರ ಪುತ್ರರಾದ ಇವರು ಅಮೃತೇಶ್ವರೀ, ಬಾಳೆಹೊಳೆ ಹಾಗೂ ದೀರ್ಘಕಾಲ ಗುತ್ಯಮ್ಮ ಮೇಳದಲ್ಲಿ ವೇಷಧಾರಿಯಾಗಿ ಕಲಾಸೇವೆಗೈದಿದ್ದಾರೆ. ದೇವೇಂದ್ರ, ಶತ್ರುಘ್ನ,…

Read more

ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ : ಆರೋಪಿ ಪೊಲೀಸ್ ವಶಕ್ಕೆ…!

ಉಡುಪಿ : ಮೂಡನಿಡಂಬೂರು ಗ್ರಾಮದ ಬನ್ನಂಜೆಯ ಹೊಸ ಕೆ.ಎಸ್.‌ಆರ್‌.ಟಿ.ಸಿ ಬಸ್‌ ನಿಲ್ದಾಣದ ಬಳಿ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಮಾಡಿದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಇಕ್ಬಾಲ್‌ (33) ಎಂದು ಗುರುತಿಸಲಾಗಿದೆ. ಇಕ್ಬಾಲ್ ಮಾದಕ ದ್ರವ್ಯ ಸೇವನೆ ಮಾಡಿ ಅಮಲಿನಲ್ಲಿರುವುದು…

Read more