ಉಡುಪಿ : ಉಚ್ಚಾಟನೆಗೊಂಡರೂ ಮಾಜಿ ಶಾಸಕ ರಘುಪತಿ ಭಟ್ಗೆ ಬಿಜೆಪಿ ಪಕ್ಷದ ಮೇಲಿನ ಪ್ರೀತಿ ಕಡಿಮೆಯಾಗಿಲ್ಲ. ವಿಧಾನ ಪರಿಷತ್ ಚುನಾವಣೆಯಲ್ಲಿ ಬಂಡಾಯ ಎದ್ದಿರುವ ಭಟ್ ಅವರನ್ನು ಇತ್ತೀಚೆಗಷ್ಟೆ ಬಿಜೆಪಿಯಿಂದ ಉಚ್ಚಾಟನೆ ಮಾಡಲಾಗಿತ್ತು. ಇದೀಗ ಕರಾವಳಿಯಲ್ಲಿ ಮತ್ತೊಮ್ಮೆ ಬಿಜೆಪಿ ಜಯಭೇರಿ ಬಾರಿಸುತ್ತಿದ್ದಂತೆ ಮಾಜಿ ಶಾಸಕ ಕೆ. ರಘುಪತಿ ಭಟ್ ಅವರು ಸಾಮಾಜಿಕ ಜಾಲತಾಣದ ಮೂಲಕ ಬಿಜೆಪಿ ವಿಜಯೀ ಅಭ್ಯರ್ಥಿಗಳಿಗೆ ಅಭಿನಂದನೆ ಸಲ್ಲಿಸುವ ಮೂಲಕ ಗಮನ ಸೆಳೆದಿದ್ದಾರೆ. ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಕೋಟ ಶ್ರೀನಿವಾಸ ಪೂಜಾರಿ, ದ.ಕ. ಕ್ಷೇತ್ರದ ಕ್ಯಾ. ಬ್ರಜೇಶ್ ಚೌಟ, ಶಿವಮೊಗ್ಗ ಕ್ಷೇತ್ರದ ಬಿ.ವೈ. ರಾಘವೇಂದ್ರ ಹಾಗೂ ಉತ್ತರ ಕನ್ನಡ ಕ್ಷೇತ್ರದ ವಿಶ್ವೇಶ್ವರ ಹೆಗಡೆ ಕಾಗೇರಿ, ಹಾವೇರಿ ಕ್ಷೇತ್ರದ ಬೊಮ್ಮಾಯಿ, ಬೆಳಗಾವಿ ಕ್ಷೇತ್ರದ ಜಗದೀಶ್ ಶೆಟ್ಟರ್ ಅವರಿಗೆ ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿರುವುದಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ. ಇದೇ ವೇಳೆ ರಘುಪತಿ ಭಟ್ ಅವರ ಪತ್ನಿ ಕೋಟ ಶ್ರೀನಿವಾಸ ಪೂಜಾರಿ ಅವರ ವಿಜಯದ ಬಳಿಕ ನಡೆದ ಸಂಭ್ರಮಾಚರಣೆಯಲ್ಲಿ ಮಹಿಳಾ ಕಾರ್ಯಕರ್ತೆಯರ ಜೊತೆ ಕಾಣಿಸಿಕೊಂಡು ಗಮನ ಸೆಳೆದಿದ್ದಾರೆ.
Udupi
ಯಕ್ಷದ್ರುವ ಪಟ್ಲ ಫೌಂಡೇಶನ್ ವತಿಯಿಂದ ಯಕ್ಷಗುರು ಕಾಂತಾವರ ಮಹಾವೀರ ಪಾಂಡಿಯವರಿಗೆ ಕಲಾಗೌರವ ಪುರಸ್ಕಾರ
ಕಾರ್ಕಳ : ಮಂಗಳೂರಿನ ಯಕ್ಷದ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ನವರು ಕೊಡಮಾಡಿದ ಪಟ್ಲ ಸಂಭ್ರಮದ 2024ರ ಸಾಲಿನ ಕಲಾ ಗೌರವ ಪುರಸ್ಕಾರವನ್ನು ಕಳೆದ ಮೇ 26ರಂದು ಅಡ್ಯಾರ್ ಗಾರ್ಡನ್ನಲ್ಲಿ ಪುತ್ತೂರು ಡಾ. ಶ್ರೀಧರ ಭಂಡಾರಿಯವರ ಸ್ಮರಣಾರ್ಥ ಗಣ್ಯರ ಸಮಕ್ಷಮ ಯಕ್ಷಗಾನ ಗುರು ಕಾಂತಾವರ ಮಹಾವೀರ ಪಾಂಡಿಯವರಿಗೆ ನೀಡಲಾಯಿತು.
ಟ್ರಸ್ಟ್ನ ಸ್ಥಾಪಕಾಧ್ಯಕ್ಷರು ಪಟ್ಲ ಸತೀಶ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ ಭಂಡಾರಿ, ಶ್ರೀಮತಿ ಉಷಾ ಶ್ರೀಧರ ಭಂಡಾರಿ, ದೇವಿಪ್ರಸಾದ್ ಇತರರು ಉಪಸ್ಥಿತರಿದ್ದರು.
ಉಡುಪಿ : ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣಾ ಅಧಿಕಾರಿ ಹಾಗೂ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಕೆ ಅವರು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ ಚುನಾವಣೆಯಲ್ಲಿ ವಿಜೇತರಾದ ಬಿಜೆಪಿ ಪಕ್ಷದ ಅಭ್ಯರ್ಥಿ ಕೋಟ ಶ್ರೀನಿವಾಸ್ ಪೂಜಾರಿ ಅವರಿಗೆ ಪ್ರಮಾಣ ಪತ್ರ ನೀಡಿ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ, ಅಪರ ಜಿಲ್ಲಾಧಿಕಾರಿ ಮಮತಾದೇವಿ, ಸಹಾಯಕ ಚುನಾವಣಾ ಅಧಿಕಾರಿಗಳಾದ ರಶ್ಮಿ ಎಸ್. ಆರ್, ಜಯಮಾದು, ಶಿವಪ್ರಸಾದ್ ಗಾವಂಕರ್ ಕಾಂತರಾಜು, ದಲಿಜತ್ ಕುಮಾರ್, ಜಯಲಕ್ಷ್ಮಮ್ಮ ಹಾಗೂ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.
ಕರಾವಳಿ ಹಿಂದುತ್ವದ ಭದ್ರಕೋಟೆ ಎಂಬುದನ್ನು ಸಾಬೀತುಪಡಿಸಿದ ಕೋಟ ಗೆಲುವು : ಯಶ್ಪಾಲ್ ಸುವರ್ಣ
ಉಡುಪಿ : ಕರ್ನಾಟಕ ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಪ್ರಚಂಡ ಬಹುಮತದಿಂದ ಗೆಲ್ಲಿಸುವ ಮೂಲಕ ಕರಾವಳಿ ಜಿಲ್ಲೆ ಹಿಂದುತ್ವದ ಭದ್ರಕೋಟೆ ಎಂಬುದನ್ನು ಜನತೆ ಸಾಬೀತು ಮಾಡಿದ್ದಾರೆ ಎಂದು ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಸಂತೋಷ ವ್ಯಕ್ತಪಡಿಸಿದ್ದಾರೆ.
ಕೋಟ ಶ್ರೀನಿವಾಸ ಪೂಜಾರಿಯವರನ್ನು 2,58,903 ಮತಗಳ ಅಂತರದಿಂದ ಗೆಲ್ಲಿಸುವ ಮೂಲಕ ಕ್ಷೇತ್ರದ ಜನತೆ ಕಾಂಗ್ರೆಸ್ ಸರಕಾರದ ಅವೈಜ್ಞಾನಿಕ ಗ್ಯಾರಂಟಿ ಭಾಗ್ಯಗಳನ್ನು ವಿರೋಧಿಸಿ, ಹಿಂದೂ ವಿರೋಧಿ ನೀತಿಗೆ ದಿಟ್ಟ ಉತ್ತರ ನೀಡಿ ಸಿದ್ಧರಾಮಯ್ಯ ಸರಕಾರಕ್ಕೆ ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ.
ಉಡುಪಿ ವಿಧಾನಸಭಾ ಕ್ಷೇತ್ರದಲ್ಲಿ ಸುಮಾರು 45,000 ಅಂತರದ ಮುನ್ನಡೆ ನೀಡಿದ್ದು, ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಹತ್ತು ವರ್ಷಗಳ ಸಾಧನೆಗೆ ಜನ ಮನ್ನಣೆ ನೀಡಿದ್ದಾರೆ . ಮುಂದಿನ ದಿನಗಳಲ್ಲಿ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಕೋಟ ಶ್ರೀನಿವಾಸ ಪೂಜಾರಿಯವರು ಸಮರ್ಥ ಸಂಸದರಾಗಿ ಕಾರ್ಯನಿರ್ವಹಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೋಟ ಶ್ರೀನಿವಾಸ ಪೂಜಾರಿ ಭರ್ಜರಿ ಗೆಲುವು : ಉಡುಪಿ ಜಿಲ್ಲಾ ಬಿಜೆಪಿ ಸಂಭ್ರಮಾಚಾರಣೆ
ಉಡುಪಿ : ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಪ್ರಚಂಡ ಗೆಲುವು ಸಾಧಿಸಿದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿಯವರನ್ನು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಇವರ ಅಧ್ಯಕ್ಷತೆಯಲ್ಲಿ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಸಂಭ್ರಮಾಚರಣೆಯಲ್ಲಿ ಶಾಲು ಹೊದೆಸಿ ಸನ್ಮಾನಿಸಲಾಯಿತು.
ಬಳಿಕ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ಪಟಾಕಿ ಸಿಡಿಸಿ ಸಂಭ್ರಮಿಸಲಾಯಿತು.
ಈ ಸಂದರ್ಭದಲ್ಲಿ ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ, ಉಡುಪಿ ಶಾಸಕ ಯಶ್ಪಾಲ್ ಎ. ಸುವರ್ಣ, ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣಾ ಸಂಚಾಲಕ ಕುತ್ಯಾರು ನವೀನ್ ಶೆಟ್ಟಿ, ನಿಕಟಪೂರ್ವ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಮಾಜಿ ಜಿಲ್ಲಾಧ್ಯಕ್ಷರಾದ ಮಟ್ಟಾರ್ ರತ್ನಾಕರ ಹೆಗ್ಡೆ, ತಿಂಗಳೆ ವಿಕ್ರಮಾರ್ಜುನ ಹೆಗ್ಡೆ, ಮಹಿಳಾ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಿನಕರ ಶೆಟ್ಟಿ ಹೆರ್ಗ, ರೇಷ್ಮಾ ಉದಯ ಶೆಟ್ಟಿ, ನಿಕಟಪೂರ್ವ ರಾಜ್ಯ ಉಪಾಧ್ಯಕ್ಷೆ ನಯನಾ ಗಣೇಶ್, ಪ್ರಮುಖರಾದ ಬೈಕಾಡಿ ಸುಪ್ರಸಾದ್ ಶೆಟ್ಟಿ, ಹರಿಮಕ್ಕಿ ರತ್ನಾಕರ್ ಶೆಟ್ಟಿ, ಗೀತಾಂಜಲಿ ಎಮ್. ಸುವರ್ಣ, ಶ್ರೀಕಾಂತ್ ನಾಯಕ್, ರಾಘವೇಂದ್ರ ಕುಂದರ್, ಶಿವಕುಮಾರ್ ಅಂಬಲಪಾಡಿ, ವಿಜಯ ಕುಮಾರ್ ಉದ್ಯಾವರ, ಪ್ರಥ್ವಿರಾಜ್ ಶೆಟ್ಟಿ, ಸಶಾಂಕ್ ಶಿವತ್ತಾಯ, ರಾಘವೇಂದ್ರ ಉಪ್ಪೂರು, ದಿಲೇಶ್ ಶೆಟ್ಟಿ, ನಳಿನಿ ಪ್ರದೀಪ್ ರಾವ್, ರಶ್ಮಿತಾ ಬಿ. ಶೆಟ್ಟಿ, ಪವಿತ್ರಾ ಶೆಟ್ಟಿ, ಭಾರತೀ ಚಂದ್ರಶೇಖರ್, ವೀಣಾ ಎಸ್. ಶೆಟ್ಟಿ, ಸಚಿನ್ ಪಿತ್ರೋಡಿ, ಸತೀಶ್ ಪೂಜಾರಿ, ದಾವೂದ್ ಅಬೂಬಕರ್, ಲಕ್ಷ್ಮೀಶ ಬಂಗೇರ, ರಘುನಾಥ್, ಸುಭಾಷಿತ್, ವಿಜಯಲಕ್ಷ್ಮಿ, ಮಂಜುಳಾ ಪ್ರಸಾದ್, ಪ್ರೀತಿ ಹಾಗೂ ಪಕ್ಷದ ಪ್ರಮುಖರು, ವಿವಿಧ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.
ಉಡುಪಿ : ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಮತ ಎಣಿಕೆ ಕಾರ್ಯಕ್ಕಾಗಿ ಸೈಂಟ್ ಸಿಸಿಲಿಸ್ ಶಾಲಾ ಆವರಣದಲ್ಲಿ ಎಲ್ಲಾ ಸಿದ್ಧತೆಗಳನ್ನು ಪೂರ್ಣಗೊಳಿಸಲಾಗಿದೆ.
ಮತದಾರರ ವಿವರಗಳು :
- ಒಟ್ಟು ಮತದಾರರು: 15,85,162
- ಮತದಾನ ಮಾಡಿದವರು: 12,22,888
- ಶೇ. ಮತದಾನ: 77.15% (2019ರೊಂದಿಗೆ ಹೋಲಿಸಿದರೆ 1.08% ಹೆಚ್ಚಳ)
- ಪುರುಷ ಮತದಾರರು: 7,68,215
- ಮಹಿಳಾ ಮತದಾರರು: 8,16,910
- ಮತದಾನ ಮಾಡಿದ ಪುರುಷರು: 5,94,565
- ಮತದಾನ ಮಾಡಿದ ಮಹಿಳೆಯರು: 6,28,316
- ಇತರರು: 37
- ಒಟ್ಟು ಮತಗಟ್ಟೆ ಸಂಖ್ಯೆ: 1,842
ಮತ ಎಣಿಕೆ ವಿವರಗಳು :
- ಮಿನಿಮಮ್ 15 – ಮ್ಯಾಕ್ಸಿಮಮ್ 19 ರೌಂಡ್
- ಒಟ್ಟು ಮತ ಎಣಿಕೆ ಟೇಬಲ್: 112
- ಮತ ಎಣಿಕೆ ಸುತ್ತ: 135
- ಒಟ್ಟು ಎಣಿಕೆ ಪ್ರಕ್ರಿಯೆ ನಡೆಯುವ ಕೊಠಡಿಗಳು: 12
ಮತ ಎಣಿಕೆಯ ಕೋಣೆಗಳು :
- ಕುಂದಾಪುರ: ಟೇಬಲ್ 14-16, ರೌಂಡ್ 1 ಕೊಠಡಿ
- ಉಡುಪಿ: ಟೇಬಲ್ 14-17, ರೌಂಡ್ 2 ಕೊಠಡಿ
- ಕಾಪು: ಟೇಬಲ್ 14-15, ರೌಂಡ್ 2 ಕೊಠಡಿ
- ಕಾರ್ಕಳ: ಟೇಬಲ್ 14-15, ರೌಂಡ್ 1 ಕೊಠಡಿ
- ಶೃಂಗೇರಿ: ಟೇಬಲ್ 14-19, ರೌಂಡ್ 1 ಕೊಠಡಿ
- ಮೂಡಿಗೆರೆ: ಟೇಬಲ್ 14-17, ರೌಂಡ್ 2 ಕೊಠಡಿ
- ಚಿಕ್ಕಮಗಳೂರು: ಟೇಬಲ್ 14-19, ರೌಂಡ್ 2 ಕೊಠಡಿ
- ತರೀಕೆರೆ: ಟೇಬಲ್ 14-17, ರೌಂಡ್ 1 ಕೊಠಡಿ
ಪೋಸ್ಟಲ್ ಮತದಾನ :
- ಪೋಸ್ಟಲ್ ಮತಗಳು: 7,853
- ಹಿರಿಯ ನಾಗರಿಕರ ಮನೆಮನೆ ಮತದಾನ: 264
- ಒಟ್ಟು: 8,117
- ಮತದಾನ ಕೇಂದ್ರದ 1 ಕೊಠಡಿಯಲ್ಲಿ 16 ಟೇಬಲ್ನಲ್ಲಿ ಎಣಿಕೆ ಪ್ರಕ್ರಿಯೆ
2019ರ ಲೋಕಸಭಾ ಚುನಾವಣಾ ಫಲಿತಾಂಶ :
- ಶೇ. 76.07 ಮತದಾನ
- ಶೋಭಾ ಕರಂದ್ಲಾಜೆ: 7,18,916
- ಪ್ರಮೋದ್ ಮಧ್ವರಾಜ್: 3,69,317
- ಶೋಭಾ ಕರಂದ್ಲಾಜೆ 3,49,599 ಮತಗಳ ಅಂತರದಿಂದ ಗೆಲುವು ಸಾಧಿಸಿದರು.
ಮತ ಎಣಿಕೆಗಾಗಿ ಏರ್ಪಾಡು :
ಮತ ಎಣಿಕೆಯ ಪ್ರಕ್ರಿಯೆ ಶಾಂತಿಯುತವಾಗಿ ಮತ್ತು ಪಾರದರ್ಶಕವಾಗಿ ನಡೆಯಲು ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಮಣಿಪಾಲದಲ್ಲಿ ನಿನ್ನೆ ರಾತ್ರಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದು, ಯಾವುದೇ ರೀತಿಯ ಅಕ್ರಮ ಚಟುವಟಿಕೆಗಳಿಗೆ ತಡೆ ನೀಡಲು ಕ್ರಮಕೈಗೊಳ್ಳಲಾಗಿದೆ.
ಎಚ್ಚರಿಕೆ:
ಅಕ್ರಮ ಚಟುವಟಿಕೆ, ಮಾದಕ ದ್ರವ್ಯಗಳ ಬಳಕೆ ಮತ್ತು ಅವ್ಯವಸ್ಥೆಯನ್ನು ತಡೆಯಲು ಸರ್ಕಾರದ ಮತ್ತು ಪೊಲೀಸರ ಕಾರ್ಯಾಚರಣೆಗಳು ನಿರಂತರವಾಗಿವೆ.
ಉಡುಪಿ : ಕಳೆದ ಆರು ವರ್ಷಗಳಿಂದ ಉಡುಪಿ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸಿ ಇದೀಗ ಚಾಮರಾಜನಗಕ್ಕೆ ವರ್ಗಾವಣೆ ಗೊಂಡಿರುವ ಬಾಲಚಂದ್ರ ಎಚ್. ಅವರಿಗೆ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಬೀಳ್ಕೊಡುಗೆ ಸಮಾರಂಭವನ್ನು ಇಂದು ಉಡುಪಿ ಪತ್ರಿಕಾ ಭವನದಲ್ಲಿ ಹಮ್ಮಿಕೊಳ್ಳಲಾಗಿತ್ತು.
ಉಡುಪಿ ವಾರ್ತಾ ಇಲಾಖೆಯ ಸಹಾಯಕ ನಿರ್ದೇಶಕ ಮಂಜುನಾಥ್ ಬಾಲಚಂದ್ರ ಎಚ್. ಅವರನ್ನು ಸನ್ಮಾನಿಸಿದರು.
ಸನ್ಮಾನ ಸ್ವೀಕರಿಸಿ ಮಾತನಾಡಿದ ಬಾಲಚಂದ್ರ ಎಚ್. ನಮ್ಮ ಯಾವುದೇ ಸಿದ್ಧಾಂತಗಳಿದ್ದರೂ ಪೆನ್ ಹಿಡಿದು ಕೆಲಸ ಮಾಡುವಾಗ ಕೇವಲ ಪತ್ರಕರ್ತರಾಗಿ ಇರಬೇಕು. ಆಗ ಮಾತ್ರ ನಾವು ನಿಜವಾದ ಪತ್ರಕರ್ತರಾಗಲು ಸಾಧ್ಯ ಎಂದರು. ಕಳೆದ ಆರು ವರ್ಷಗಳ ಕಾಲ ಉಡುಪಿಯಲ್ಲಿ ಕರ್ತವ್ಯ ನಿರ್ವಹಿಸಿದ ಅನುಭವ, ಕರಾವಳಿ ಸಂಸ್ಕೃತಿ, ಆಚಾರ ವಿಚಾರಗಳ ಸವಿ ನೆನಪುಗಳನ್ನು ಹಂಚಿಕೊಂಡರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು ವಹಿಸಿದ್ದರು. ಸಂಘದ ರಾಜ್ಯ ಸಮಿತಿ ಸದಸ್ಯ ಕಿರಣ್ ಮಂಜನಬೈಲು ಉಪಸ್ಥಿತರಿದ್ದರು. ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ ಸ್ವಾಗತಿಸಿದರು. ಕಾರ್ಯದರ್ಶಿ ಪ್ರಮೋದ್ ಸುವರ್ಣ ವಂದಿಸಿದರು. ಪತ್ರಕರ್ತ ದೀಪಕ್ ಜೈನ್ ಕಾರ್ಯಕ್ರಮ ನಿರೂಪಿಸಿದರು.
Renowned reproductive medicine and surgeon Dr. Pratap Kumar is now available for consultation at Kasturba Hospitals Manipal’s Dr Ramdas Pai Block for full time
Manipal : Kasturba Hospital, Manipal, is delighted to announce that the esteemed Reproductive Medicine specialist and surgeon, Dr. Pratap Kumar N, will now be available for consultation at Dr Ramdas Pai block for the full time. Starting from 3rd June 2024, Dr. Pratap Kumar will offer his expert services in the Department of Reproductive Medicine & Surgery at the Dr. Ramdas Pai Block on appointment basis.
Recognized for his exceptional expertise and compassionate care, Dr. Pratap Kumar has a remarkable track record, having facilitated the birth of over 10,000 babies through his specialized skills in IVF procedures. His presence at Kasturba Hospital is expected to bring immense joy and hope to numerous couples seeking reproductive assistance.
Dr. Avinash Shetty, the Medical Superintendent of Kasturba Hospital, expressed his enthusiasm about Dr. Kumar’s full-time availability: “Dr. Pratap is a renowned reproductive medicine and surgeon whose expertise has brought smiles to countless faces. He is now fully available at the Dr. Ramdas Pai Block of Kasturba Hospital.”
Dr. Pratap Kumar will be available for consultations by appointment from Monday to Friday, between 9:00 AM to 12:00 PM and 3:00 PM to 4:00 PM.
For scheduling appointments or further information, please contact:
Phone: 6364469750
Website: www.khmanipal.com
ಖ್ಯಾತಸಂತಾನೋತ್ಪತ್ತಿ ಔಷಧ ಮತ್ತು ಶಸ್ತ್ರಚಿಕಿತ್ಸಕ ಡಾ. ಪ್ರತಾಪ್ ಕುಮಾರ್ ಅವರು ಈಗ ಸಮಾಲೋಚನೆಗಾಗಿ ಲಭ್ಯ
ಮಣಿಪಾಲ : ಖ್ಯಾತ ಸಂತಾನೋತ್ಪತ್ತಿ ಔಷಧಿ ತಜ್ಞ ಮತ್ತು ಶಸ್ತ್ರಚಿಕಿತ್ಸಕ ಡಾ. ಪ್ರತಾಪ್ ಕುಮಾರ್ ಎನ್, ಈಗ ಪೂರ್ಣ ಸಮಯಕ್ಕೆ ಕಸ್ತೂರ್ಬಾ ಆಸ್ಪತ್ರೆ, ಮಣಿಪಾಲದ, ಡಾ ರಾಮದಾಸ್ ಪೈ ಬ್ಲಾಕ್ನಲ್ಲಿ ಸಮಾಲೋಚನೆಗಾಗಿ ಲಭ್ಯವಿರುತ್ತಾರೆ. 3ನೇ ಜೂನ್ 2024ರಿಂದ ಜಾರಿಗೆ ಬರುವಂತೆ ಅವರು ಡಾ. ರಾಮದಾಸ್ ಪೈ ಬ್ಲಾಕ್ನಲ್ಲಿ ಪೂರ್ವ ನಿಗದಿ (ಅಪ್ಪೋಯಿಂಟ್ಮೆಂಟ್) ಮೂಲಕ ತಮ್ಮ ಪರಿಣಿತ ಸೇವೆಗಳನ್ನು ನೀಡಲಿದ್ದಾರೆ.
ತಮ್ಮ ಅಸಾಧಾರಣ ಪರಿಣತಿ ಮತ್ತು ಸಹಾನುಭೂತಿಯ ಆರೈಕೆಗಾಗಿ ಗುರುತಿಸಲ್ಪಟ್ಟಿರುವ ಡಾ. ಪ್ರತಾಪ್ ಕುಮಾರ್ ಅವರು ಟೆಸ್ಟ್ ಟ್ಯೂಬ್ ಬೇಬಿ (ಐ ವಿ ಎಫ್) ಕಾರ್ಯವಿಧಾನಗಳಲ್ಲಿ ತಮ್ಮ ವಿಶೇಷ ಕೌಶಲ್ಯಗಳ ಮೂಲಕ 10,000 ಕ್ಕೂ ಹೆಚ್ಚು ಶಿಶುಗಳ ಜನನವನ್ನು ಸುಗಮಗೊಳಿಸಿರುವ ಗಮನಾರ್ಹ ದಾಖಲೆಯನ್ನು ಹೊಂದಿದ್ದಾರೆ. ಕಸ್ತೂರ್ಬಾ ಆಸ್ಪತ್ರೆಯಲ್ಲಿ ಅವರ ಉಪಸ್ಥಿತಿಯು ಸಂತಾನೋತ್ಪತ್ತಿ (ಬಂಜೆತನಕ್ಕೆ ಚಿಕಿತ್ಸೆ) ಸಹಾಯವನ್ನು ಬಯಸುವ ಹಲವಾರು ದಂಪತಿಗಳಿಗೆ ಅಪಾರ ಸಂತೋಷ ಮತ್ತು ಭರವಸೆಯನ್ನು ತರುತ್ತದೆ ಎಂದು ನಿರೀಕ್ಷಿಸಲಾಗಿದೆ.
ಕಸ್ತೂರ್ಬಾ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅವಿನಾಶ್ ಶೆಟ್ಟಿ ಅವರು ಡಾ. ಪ್ರತಾಪ್ ಕುಮಾರ್ ಅವರ ಪೂರ್ಣ ಸಮಯದ ಲಭ್ಯತೆಯ ಬಗ್ಗೆ ತಮ್ಮ ಉತ್ಸಾಹವನ್ನು ವ್ಯಕ್ತಪಡಿಸಿದರು : “ಡಾ. ಪ್ರತಾಪ್ ಅವರು ಪ್ರಖ್ಯಾತ ಸಂತಾನೋತ್ಪತ್ತಿ ಔಷಧಿ ಮತ್ತು ಶಸ್ತ್ರಚಿಕಿತ್ಸಕರಾಗಿದ್ದಾರೆ, ಅವರ ಪರಿಣತಿಯು ಮಕ್ಕಳನ್ನು ಬಯಸುವ ಅಸಂಖ್ಯಾತ ದಂಪತಿಗಳಿಗೆ ನಗುವನ್ನು ತಂದಿದೆ. ಅವರು ಈಗ ಕಸ್ತೂರ್ಬಾ ಆಸ್ಪತ್ರೆಯ ಡಾ. ರಾಮದಾಸ್ ಪೈ ಬ್ಲಾಕ್ ಸಂಪೂರ್ಣವಾಗಿ ಲಭ್ಯವಿದ್ದಾರೆ ಎಂದು ಹೇಳಿದ್ದಾರೆ.”
ಸೋಮವಾರದಿಂದ ಶುಕ್ರವಾರದವರೆಗೆ, 9:00 AM ನಿಂದ 12:00 PM ಮತ್ತು 3:00 PM ರಿಂದ 4:00 PM ವರೆಗೆ ಪೂರ್ವ ನಿಗದಿ (ಅಪ್ಪೋಯಿಂಟ್ಮೆಂಟ್) ಮೂಲಕ ಡಾ. ಪ್ರತಾಪ್ ಕುಮಾರ್ ಸಮಾಲೋಚನೆಗಳಿಗೆ ಲಭ್ಯವಿರುತ್ತಾರೆ.
ಸಮಯ ನಿಗದಿಪಡಿಸಲು ಅಥವಾ ಹೆಚ್ಚಿನ ಮಾಹಿತಿಗಾಗಿ, ದಯವಿಟ್ಟು ಸಂಪರ್ಕಿಸಿ:
ದೂರವಾಣಿ: 6364469750
ವೆಬ್ಸೈಟ್: www.khmanipal.com
ಉಡುಪಿ : ಮಂಗಳವಾರ ಸೈಂಟ್ ಸಿಸಿಲೀಸ್ ಶಾಲೆಯಲ್ಲಿ ನಡೆಯಲಿರುವ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಮತ ಎಣಿಕೆ ಕಾರ್ಯಕ್ಕೆ ಎಲ್ಲಾ ಸಿದ್ದತೆಗಳನ್ನು ಪೂರ್ಣಗೊಳಿಸಲಾಗಿದ್ದು, ಸರ್ವ ಸನ್ನದ್ಧವಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ತಿಳಿಸಿದ್ದಾರೆ.
ಚುನಾವಣಾ ಆಯೋಗದ ನಿರ್ದೇಶನದಂತೆ, ನಿಗದಿತ ಸಮಯಕ್ಕೆ ಸರಿಯಾಗಿ ಎಲ್ಲಾ ರೀತಿಯ ಪ್ರಕ್ರಿಯೆಗಳನ್ನು ಪ್ರಾರಂಭಿಸಲಾಗುವುದು. ಇವಿಎಂಗಳ ಎಣಿಕೆ ನಂತರ ವಿವಿಪ್ಯಾಟ್ನ ಸ್ಲಿಪ್ಗಳ ಎಣಿಕೆ ಮಾಡಲಾಗುವುದು. ಮತ ಎಣಿಕೆಗೆ ನಿಯೋಜಿಸಿರುವ ಎಲ್ಲಾ ಅಧಿಕಾರಿಗಳು, ಸಿಬ್ಬಂದಿಗಳು, ಪಕ್ಷಗಳ ಎಜೆಂಟರು ಸೇರಿದಂತೆ ಎಲ್ಲರಿಗೂ ಮತದಾನ ಕೇಂದ್ರದಲ್ಲಿಯೇ ಊಟ-ಉಪಹಾರ ಸೇರಿದಂತೆ ಎಲ್ಲಾ ಮೂಲಭೂತ ವ್ಯವಸ್ಥೆಗಳನ್ನು ಮಾಡಲಾಗಿದೆ ಎಂದು ಅವರು ತಿಳಿಸಿದರು.
ವಿವಿಪ್ಯಾಟ್ ಸ್ಲಿಪ್ಗಳ ಎಣಿಕೆ ನಂತರ ಅಂತಿಮ ಫಲಿತಾಂಶವನ್ನು ಘೋಷಿಸಲಾಗುವುದು. ಇದಕ್ಕಾಗಿ ಪ್ರತಿ ವಿಧಾನಸಭಾ ಕ್ಷೇತ್ರದ ತಲಾ ಐದರಂತೆ ಒಟ್ಟು 40 ವಿವಿ ಪ್ಯಾಟ್ಗಳನ್ನು ಲಾಟ್ಸ್ ಮೂಲಕ ಆಯ್ಕೆ ಮಾಡಲಾಗುವುದು ಎಂದು ಅವರು ಹೇಳಿದರು.