ಉಡುಪಿ : ಜಿಲ್ಲೆಯಲ್ಲಿ ಶಾಲಾ ಹಾಗೂ ಕಾಲೇಜು ಮಕ್ಕಳು ಕೆರೆ, ನದಿ ಹಾಗೂ ಕಿಂಡಿ ಆಣೆಕಟ್ಟಿನ ಹಿನ್ನೀರು ಪ್ರದೇಶಗಳಲ್ಲಿ ಆಟ ಆಡಲು ಅಥವಾ ಈಜಲು ಹೋಗಿ ನೀರಿನಲ್ಲಿ ಮುಳುಗಿ ಪ್ರಾಣ ಬಿಡುವ ಪ್ರಕರಣಗಳು ಇತ್ತೀಚೆಗೆ ಉಡುಪಿ ಜಿಲ್ಲೆಯಲ್ಲಿ ಹೆಚ್ಚು ಹೆಚ್ಚು ವರದಿಯಾಗುತ್ತಿವೆ.
ಈ ಹಿನ್ನೆಲೆಯಲ್ಲಿ ಮಕ್ಕಳ ಪೋಷಕರು ಇಂತಹ ವಿಷಯಗಳನ್ನು ನಿರ್ಲಕ್ಷಿಸದೇ, ಗಂಭೀರವಾಗಿ ತೆಗೆದುಕೊಂಡು ಮಕ್ಕಳ ಚಲನವಲನಗಳನ್ನು ಗಮನಿಸಿ, ಸೂಕ್ತ ಎಚ್ಚರಿಕೆ ವಹಿಸಿದಾಗ ಇಂತಹ ಪ್ರಕರಣಗಳನ್ನು ತಡೆಗಟ್ಟಲು ಸಾಧ್ಯ ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.