ಉಡುಪಿ : ಕಳೆದು ಐದು ದಿನಗಳಿಂದ ಉಡುಪಿ ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ನೆರೆಯ ಭೀತಿ ಉಂಟಾಗಿದೆ. ಹವಾಮಾನ ಇಲಾಖೆ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಮುಂಜಾಗೃತ ಕ್ರಮವಾಗಿ ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ನಾಳೆ (ಜುಲೈ 20) ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಆದೇಶ ನೀಡಿದ್ದಾರೆ. ಉಳಿದಂತೆ ಎಲ್ಲಾ ಪದವಿ, ಸ್ನಾತಕೊತ್ತರ ಪದವಿ. ಡಿಪ್ಲೋಮ, ಇಂಜಿನಿಯರಿಂಗ್, ಐ.ಟಿ.ಐ ಗಳಿಗೆ ರಜೆ ಘೋಷಿಸಿರುವುದಿಲ್ಲ.
Tag:
Weather Disruption
ಭಾರಿ ಮಳೆ ಹಿನ್ನೆಲೆ – ದ.ಕ ಜಿಲ್ಲೆಯ ಬೆಳ್ತಂಗಡಿ, ಬಂಟ್ವಾಳ ತಾಲೂಕಿನ ಶಾಲೆಗಳಿಗೆ ರಜೆ
by NewsDesk
written by NewsDesk
ಮಂಗಳೂರು : ಭಾರಿ ಮಳೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಮತ್ತು ಬಂಟ್ವಾಳ ತಾಲೂಕಿನ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ನಿನ್ನೆಯಿಂದ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಬೆಳ್ತಂಗಡಿ ಮತ್ತು ಬಂಟ್ವಾಳದಲ್ಲಿ ಮಳೆಯ ಅಬ್ಬರ ಹೆಚ್ಚಿದೆ. ಈ ಹಿನ್ನೆಲೆಯಲ್ಲಿ ಎರಡು ತಾಲೂಕಿನ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ತೋಡು ಹಳ್ಳ ಕೈಸೇತುವೆಗಳನ್ನು ದಾಟಿ ಶಾಲೆಗೆ ಹಲವಾರು ವಿದ್ಯಾರ್ಥಿಗಳು ಬರುತ್ತಿರುವ ಕಾರಣ ಬೆಳ್ತಂಗಡಿ ತಾಲೂಕಿನ ಎಲ್ಲಾ ಸರಕಾರಿ, ಅನುದಾನಿತ, ಅನುದಾನ ರಹಿತ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಪೋಷಕರು ಮಕ್ಕಳನ್ನು ನೀರಿಗೆ ಇಳಿಯದಂತೆ, ನೀರಲ್ಲಿ ಆಟವಾಡದಂತೆ ಜಾಗೃತೆ ವಹಿಸಬೇಕೆಂದು ಬೆಳ್ತಂಗಡಿ ತಹಶೀಲ್ದಾರ್ ಮತ್ತು ಬಿ.ಇ.ಒ ತಿಳಿಸಿದ್ದಾರೆ.