Yashpal Suvarna

ಎಸ್‌ಎಸ್‌ಎಲ್‌ಸಿ ಫಲಿತಾಂಶ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆ ಅಗ್ರಸ್ಥಾನ : ಯಶ್‌ಪಾಲ್ ಸುವರ್ಣ ಅಭಿನಂದನೆ

ಉಡುಪಿ : ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶದಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಶೇ. 91.12, ಉಡುಪಿ ಜಿಲ್ಲೆ ಶೇ. 89.96 ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ರಾಜ್ಯಕ್ಕೆ ಪ್ರಥಮ ಹಾಗೂ ದ್ವಿತೀಯ ಸ್ಥಾನವನ್ನು ಪಡೆಯುವ ಮೂಲಕ ಶೈಕ್ಷಣಿಕವಾಗಿ ಅತ್ಯುತ್ತಮ ಸಾಧನೆ ಮಾಡಿರುವ ವಿದ್ಯಾರ್ಥಿಗಳು ಹಾಗೂ…

Read more

ಭವಿಷ್ಯದ ಇಂಜಿನಿಯರ್, ವೈದ್ಯಕೀಯ ಸೇವೆಯ ಕನಸು ಹೊತ್ತು ಸಿಇಟಿ ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿಗಳ ಜನಿವಾರ ಕತ್ತರಿಸಿದ ಸಿಬ್ಬಂದಿ : ಯಶ್‌ಪಾಲ್ ಸುವರ್ಣ ಆಕ್ರೋಶ

ಉಡುಪಿ : ವಿದ್ಯಾರ್ಥಿ ಜೀವನದಲ್ಲಿ ಕಠಿಣ ಪರಿಶ್ರಮ, ಪೂರ್ವ ಸಿದ್ಧತೆ ನಡೆಸಿ ಭವಿಷ್ಯದಲ್ಲಿ ಇಂಜಿನಿಯರ್, ವೈದ್ಯರಾಗ‌ಬೇಕೆಂಬ ಮಹತ್ವಾಕಾಂಕ್ಷೆಯಿಂದ ಸಿಇಟಿ ಪರೀಕ್ಷೆ ಬರೆಯಲು ಪರೀಕ್ಷಾ ಕೇಂದ್ರಕ್ಕೆ ಆಗಮಿಸಿದ ಜನಿವಾರ ಧರಿಸಿದ ಬ್ರಾಹ್ಮಣ ಹಾಗೂ ವಿವಿಧ ಸಮಾಜದ ವಿದ್ಯಾರ್ಥಿಗಳಿಗೆ ಅವಕಾಶ ನೀಡದೆ ವಿದ್ಯಾರ್ಥಿಗಳಿಂದ ಜನಿವಾರವನ್ನು…

Read more

ಮಣ್ಣಪಳ್ಳ ಕೆರೆ ಸಮಗ್ರ ಅಭಿವೃದ್ಧಿ ಹಾಗೂ ನಿರ್ವಹಣೆ ನಗರಸಭೆಗೆ ಹಸ್ತಾಂತರಿಸಿ : ಶಾಸಕ ಯಶ್‌ಪಾಲ್ ಸುವರ್ಣ ಆಗ್ರಹ

ಉಡುಪಿ : ಮಣಿಪಾಲದ ಮಣ್ಣಪಳ್ಳ ಕೆರೆಯ ಅಸಮರ್ಕಪ ನಿರ್ವಹಣೆಯ ಬಗ್ಗೆ ಸಾರ್ವಜನಿಕರಿಂದ ದೂರುಗಳು ಕೇಳಿಬರುತ್ತಿದ್ದು, ಖಾಸಗಿ ವ್ಯಕ್ತಿಗಳ ಮೂಲಕ ಜಿಲ್ಲಾಡಳಿತ ಮಣ್ಣಪಳ್ಳ ಕೆರೆಯನ್ನು ನಿರ್ವಹಣೆಗೆ ನೀಡಲು ಮುಂದಾಗಿರುವ ಬಗ್ಗೆ ವಿರೋಧ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಉಡುಪಿ ನಗರಸಭಾ ವ್ಯಾಪ್ತಿಯಲ್ಲಿರುವ ಮಣ್ಣಪಳ್ಳ ಕೆರೆಯ ಸಮಗ್ರ…

Read more

₹ 5 ಲಕ್ಷ ವೆಚ್ಚದಲ್ಲಿ ನವೀಕೃತ ಅಂಬಾಗಿಲು ಮೀನು ಮಾರುಕಟ್ಟೆ ಉದ್ಘಾಟನೆ

ಉಡುಪಿ : ಉಡುಪಿ ನಗರಸಭೆ ವ್ಯಾಪ್ತಿಯ ಮಹಿಳಾ ಮೀನುಗಾರರ ಬೇಡಿಕೆಯಂತೆ ನಗರಸಭೆಯ ಮೂಲಕ ₹ 5 ಲಕ್ಷ ವೆಚ್ಚದಲ್ಲಿ ನವೀಕೃತ ಅಂಬಾಗಿಲು ಮೀನು ಮಾರುಕಟ್ಟೆಯನ್ನು ಉಡುಪಿ ಶಾಸಕರಾದ ಶ್ರೀ ಯಶ್‌‌ಪಾಲ್ ಸುವರ್ಣ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಯಶ್‌ಪಾಲ್ ಸುವರ್ಣ…

Read more

ಪಕ್ಷ ಕಟ್ಟುವಲ್ಲಿ ಹಿರಿಯರ ತ್ಯಾಗ ಪರಿಶ್ರಮ ಸದಾ ಸ್ಮರಣೀಯ : ಎಂ.ಕೆ. ವಿಜಯಕುಮಾರ್; ಬಿಜೆಪಿ ಉಡುಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಬಿಜೆಪಿ ಸಂಸ್ಥಾಪನಾ ದಿನಾಚರಣೆ

ಉಡುಪಿ : ಸೋಲು, ಅವಮಾನಗಳನ್ನು ಸಹಿಸಿಕೊಂಡು ಪಕ್ಷವನ್ನು ಇಷ್ಟು ಎತ್ತರಕ್ಕೆ ಬೆಳೆಸಿದ ಹಿರಿಯರ ತ್ಯಾಗ ಮತ್ತು ಪರಿಶ್ರಮ ಸದಾ ಸ್ಮರಣೀಯ ಎಂದು ಬಿಜೆಪಿ ಹಿರಿಯ ಮುಖಂಡ, ನ್ಯಾಯವಾದಿ ಎಂ.ಕೆ. ವಿಜಯಕುಮಾ‌ರ್ ಹೇಳಿದರು. ಅವರು ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಬಿಜೆಪಿ ಸಂಸ್ಥಾಪನಾ…

Read more

ಕರಾವಳಿ ಜಿಲ್ಲೆಗಳಿಗೆ ಶೀಘ್ರವೇ ತಜ್ಞ ಪಶುವೈದ್ಯರ ನಿಯೋಜನೆ : ಸಚಿವ ಕೆ.ವೆಂಕಟೇಶ್ ಭರವಸೆ

ಉಡುಪಿ : ಕರಾವಳಿ ಜಿಲ್ಲೆಗಳಲ್ಲಿ ತಜ್ಞ ಪಶುವೈದ್ಯರ ಹುದ್ದೆಗಳು ಸಾಕಷ್ಟು ಖಾಲಿ ಇವೆ. ಕರಾವಳಿಗೆ ನಿಯೋಜನೆಗೊಳ್ಳುವ ಪಶುವೈದ್ಯರು ಇಲ್ಲಿ ಕರ್ತವ್ಯ ನಿರ್ವಹಿಸಲು ಹೆಚ್ಚಿನ ಆಸಕ್ತಿ ತೋರಿಸುತ್ತಿಲ್ಲ. ಹೀಗಾಗಿ ಇಲಾಖೆಯಲ್ಲಿ ಖಾಯಂ ನೇಮಕಾತಿಗೊಂಡ ತಜ್ಞ ವೈದ್ಯರನ್ನು ಶೀಘ್ರವೇ ಕರಾವಳಿ ಭಾಗಕ್ಕೆ ನಿಯೋಜಿಸುವ ಆಲೋಚನೆ…

Read more

60 ಲಕ್ಷ ವೆಚ್ಚದಲ್ಲಿ ಹೆರ್ಗ ಮಾರುತಿ ನಗರ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಯಶ್‌ಪಾಲ್ ಸುವರ್ಣ ಚಾಲನೆ

ಉಡುಪಿ : ಉಡುಪಿ ನಗರಸಭೆ ವ್ಯಾಪ್ತಿಯ ಶೆಟ್ಟಿಬೆಟ್ಟು ವಾರ್ಡಿನ ಮಾರುತಿ ನಗರ ರಸ್ತೆಯ ಅಭಿವೃದ್ಧಿ ಕಾಮಗಾರಿಗೆ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಗುದ್ದಲಿ ಪೂಜೆ ನೆರವೇರಿಸಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಯಶ್‌ಪಾಲ್ ಸುವರ್ಣ ಮಾರುತಿ ನಗರ ನಾಗರಿಕರ…

Read more

ವಕ್ಫ್ ತಿದ್ದುಪಡಿ ಮಸೂದೆ ಅಂಗೀಕಾರ : ಯಶ್‌‌ಪಾಲ್ ಸುವರ್ಣ ಹರ್ಷ

ಉಡುಪಿ : ಕೇಂದ್ರ ಸರ್ಕಾರ ದೇಶದ ಜನತೆಯ ಬಹು ದಶಕಗಳ ಬೇಡಿಕೆಯಾಗಿದ್ದ ವಕ್ಫ್ ತಿದ್ದುಪಡಿ ಮಸೂದೆಯನ್ನು ಲೋಕಸಭೆಯಲ್ಲಿ ಮಂಡಿಸಿ ಅಂಗೀಕಾರ ಪಡೆಯುವಲ್ಲಿ ಯಶಸ್ವಿಯಾಗಿದ್ದು, ನರೇಂದ್ರ ಮೋದಿ ದೇಶದ ರಾಷ್ಟ್ರ ಭಕ್ತ ಜನತೆಗೆ ಹೊಸ ಚೈತನ್ಯ ತುಂಬಿದ್ದಾರೆ ಎಂದು ಉಡುಪಿ ಶಾಸಕ ಯಶ್‌ಪಾಲ್…

Read more

ಕೋಳಿ ಅಂಕದ ವಿಚಾರ ಮತ್ತೆ ಮುನ್ನೆಲೆಗೆ; ಉಡುಪಿ ಶಾಸಕರಿಗೆ ಕಾಂಗ್ರೆಸ್ ಟಾಂಗ್!

ಉಡುಪಿ : ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಾದ ಯಕ್ಷಗಾನ ಮತ್ತು ಕೋಳಿ ಅಂಕಗಳಿಗೆ ಅನುಮತಿ ನೀಡಬೇಕೆಂದು ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಅವರು ವಿಧಾನಸಭೆಯಲ್ಲಿ ಧ್ವನಿ ಎತ್ತಿದ ಬಳಿಕ ಈ ವಿಷಯವು ತೀವ್ರ ಚರ್ಚೆಗೆ ಗ್ರಾಸವಾಗಿದೆ. ಜಿಲ್ಲೆಯ ಪ್ರಮುಖ ಸಮಸ್ಯೆಗಳ ಬಗ್ಗೆ ಗಮನಹರಿಸುವುದನ್ನು…

Read more

ರಾಜ್ಯ ಸರಕಾರದ ವಿರುದ್ಧ ಬೃಹತ್ ಪ್ರತಿಭಟನೆ – ಜಿಲ್ಲೆಯ ಬಿಜೆಪಿ ಶಾಸಕರು ಭಾಗಿ

ಉಡುಪಿ : ಕಾಂಗ್ರೆಸ್ ಸರಕಾರದ ಅವಧಿಯಲ್ಲಿ ಕಾರ್ಯಕರ್ತರು ಸರಕಾರಿ ಸೇವೆಗಾಗಿ ಅಧಿಕಾರಿಗಳ ಬಳಿಗೆ ಹೋದರೆ ಅವರನ್ನು ಕಡೆಗಣಿಸಲಾಗುತ್ತಿದೆ. ಮಣಿಪಾಲ ಠಾಣೆಯ ಸಿಬ್ಬಂದಿ ಕಾರ್ಯಕರ್ತನ ಮೇಲೆ ಹಲ್ಲೆ ಮಾಡಿದ್ದು, ಇದನ್ನು ಪ್ರಶ್ನಿಸಿದ್ದಕ್ಕೆ ಪಿಎಸ್ಐ ಗಾಂಜಾ ಪ್ರಕರಣ ದಾಖಲಿಸುವುದಾಗಿ ಬೆದರಿಸಿದ್ದಾನೆ. ಖಾಕಿ ರೌಡಿಸಂ ಇಲ್ಲಿ…

Read more