ಉಡುಪಿ : ಹರ್ ಘರ್ ತಿರಂಗಾ ಅಭಿಯಾನದ ಅಂಗವಾಗಿ ಉಡುಪಿಯ ಅಂಚೆ ವಿಭಾಗದ ಅಧೀಕ್ಷಕ ರಮೇಶ್ ಪ್ರಭು, ಸಹಾಯಕ ಅಂಚೆ ಅಧೀಕ್ಷಕರಾದ ಕೃಷ್ಣರಾಜ ವಿಠ್ಠಲ ಭಟ್, ವಸಂತ ಹಾಗೂ ಉಪ ಅಂಚೆ ಪಾಲಕಿ ಪೂರ್ಣಿಮಾ ಜನಾರ್ದನ್, ಅಂಚೆ ಸಿಬ್ಬಂದಿ ಪ್ರಜ್ವಲ್ರವರು ಉಡುಪಿ ವಿಧಾನಸಭಾ ಶಾಸಕ ಯಶ್ಪಾಲ್ ಸುವರ್ಣರನ್ನು ಭೇಟಿಯಾಗಿ ಮುಖ್ಯಮಂತ್ರಿ, ಸಂಸ್ಕ್ರತಿ ಮತ್ತು ಪ್ರವಾಸೋದ್ಯಮ ಇಲಾಖೆ, ಭಾರತ ಸರಕಾರ ಇವರ ಪತ್ರವನ್ನು ಭಾರತೀಯ ಅಂಚೆ ಇಲಾಖೆಯಲ್ಲಿ ಲಭ್ಯವಿರುವ ತಿರಂಗಾ ರಾಷ್ಟ್ರಧ್ವಜದೊಂದಿಗೆ ಹಸ್ತಾಂತರಿಸಿದರು.
Yashpal Suvarna
ಉಡುಪಿ: ಶೀರೂರು ಮಠ ಉಡುಪಿ ಹಾಗೂ ಹಿಂದೂ ಯುವಸೇನೆ ಉಡುಪಿ ಜಿಲ್ಲೆ ಇದರ ವತಿಯಿಂದ ಕೀರ್ತಿಶೇಷ ಲಕ್ಷ್ಮೀವರ ತೀರ್ಥ ಶ್ರೀಪಾದರ 6ನೇ ಆರಾಧಾನ ಮಹೋತ್ಸವ ಅಂಗವಾಗಿ ಆಯೋಜಿಸಿದ್ದ ಸ್ಥಳೀಯ ಮತ್ತು ರಾಜ್ಯಮಟ್ಟದ ಕುಣಿತ ಭಜನಾ ಸ್ಪರ್ಧೆ, ಮುದ್ದುಕೃಷ್ಣ ಸ್ಪರ್ಧೆ ಹಾಗೂ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ವಿದ್ಯಾ ಪ್ರೋತ್ಸಾಹ ಧನ ವಿತರಣಾ ಸಮಾರಂಭವನ್ನು ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಯಶ್ಪಾಲ್ ಸುವರ್ಣ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಯಶ್ಪಾಲ್ ಸುವರ್ಣ ಪರಮ ಪೂಜ್ಯ ಶ್ರೀ ಲಕ್ಷ್ಮೀವರ ತೀರ್ಥ ಶ್ರೀಪಾದರು ಧಾರ್ಮಿಕ ಕಾರ್ಯಕ್ರಮಗಳ ಜೊತೆ ಜೊತೆಗೆ ಸಮಾಜ ಸೇವೆ, ಸಾಂಸ್ಕೃತಿಕ ಚಟುವಟಿಕೆಗಳಿಗೆ ವಿಶೇಷ ಪ್ರೋತ್ಸಾಹ ನೀಡುತ್ತಾ ಹಿಂದುತ್ವದ ಪ್ರಬಲ ಪ್ರತಿಪಾದಕರಾಗಿ ಸಂಘಟನೆಯ ಕಾರ್ಯಕರ್ತರಿಗೆ ಮಾರ್ಗದರ್ಶನ ನೀಡುವ ಮೂಲಕ ಹಿಂದೂ ಸಮಾಜಕ್ಕೆ ಪ್ರೇರಕ ಶಕ್ತಿಯಾಗಿದ್ದರು ಎಂದರು.
ಕಾಪು ಶಾಸಕ ಸುರೇಶ್ ಶೆಟ್ಟಿ ಗುರ್ಮೆ ಶ್ರೀಗಳ ಸಮಾಜಮುಖಿ ಸೇವಾ ಚಿಂತನೆ ನಮಗೆಲ್ಲ ಸದಾ ಆದರ್ಶವಾಗಿರಲಿದೆ ಎಂದರು. ಸಮಾರಂಭದಲ್ಲಿ ಹಿಂದೂ ಯುವ ಸೇನೆ ಜಿಲ್ಲಾಧ್ಯಕ್ಷರಾದ ಅಜಿತ್ ಕೊಡವೂರು, ಶೀರೂರು ಮಠದ ದಿವಾನರಾದ ಉದಯ ಕುಮಾರ್ ಸರಳತ್ತಾಯ, ಹಿಂದೂ ಯುವಸೇನೆಯ ಪ್ರಮುಖರಾದ ಶೇಖರ್ ಶೆಟ್ಟಿ ಹಿರಿಯಡ್ಕ, ಕಾರ್ಯದರ್ಶಿ ಅರುಣ್, ಉಡುಪಿ ನಗರ ಅಧ್ಯಕ್ಷ ಸುನೀಲ್ ನೇಜಾರ್, ಪ್ರದೀಪ್ ಶೆಟ್ಟಿ ಶೀರೂರು, ರೋಹಿತ್ ಶೆಟ್ಟಿ ಬೆಳ್ಳರ್ಪಾಡಿ, ಸುರೇಶ್ ಸಾಲ್ಯಾನ್, ಮೋಹನ್ ಭಟ್, ಬೆಳ್ಳರ್ಪಾಡಿ ಘಟಕದ ಅಧ್ಯಕ್ಷರಾದ ಸದಾಶಿವ ಪೂಜಾರಿ, ಪವನ್ ಹೆರ್ಗ, ನವೀನ್ ಪುತ್ರನ್, ಉದಯ ಕುಮಾರ್ ಮೊದಲಾದವರು ಉಪಸ್ಥಿತರಿದ್ದರು.
ಶೀಂಬ್ರ ದೇವಸ್ಥಾನದ ಸ್ನಾನಘಟ್ಟ ಹಾಗೂ ನದಿ ದಂಡೆ ಸಂರಕ್ಷಣೆ ಕಾಮಗಾರಿ ಸ್ಥಳಕ್ಕೆ ಶಾಸಕರ ಭೇಟಿ, ಪರಿಶೀಲನೆ
ಶೀಂಬ್ರ ದೇವಸ್ಥಾನ ಸ್ನಾನಘಟ್ಟ ಹಾಗೂ ನದಿ ದಂಡೆ ಸಂರಕ್ಷಣೆ ಕಾಮಗಾರಿ ಪ್ರದೇಶಕ್ಕೆ ಅಧಿಕಾರಿಗಳೊಡನೆ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಸಣ್ಣ ನೀರಾವರಿ ಇಲಾಖೆ ಮೂಲಕ ಕಾಮಗಾರಿಗೆ ₹2.25 ಕೋಟಿ ಅನುದಾನ ಮಂಜೂರುಗೊಳಿಸಲಾಗಿದ್ದು, ದೇವಸ್ಥಾನದ ಆಡಳಿತ ಮಂಡಳಿಯ ಜೊತೆ ಸಮಾಲೋಚನೆ ನಡೆಸಿ ಅತೀ ಶೀಘ್ರದಲ್ಲೇ ಕಾಮಗಾರಿಯನ್ನು ಅತ್ಯಂತ ಶೀಘ್ರವಾಗಿ ಪ್ರಾರಂಭಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ನಗರ ಸಭಾ ಸದಸ್ಯರಾದ ಶ್ರೀಮತಿ ಅನಿತಾ, ಹಿರಿಯ ಇಂಜಿನಿಯರ್ ಶ್ರೀ ರಮೇಶ್ ರಾವ್, ಶ್ರೀ ರಾಜೇಂದ್ರ ಮಯ್ಯ, ಸ್ಥಳೀಯ ಮುಖಂಡರಾದ ಶ್ರೀ ಪ್ರಶಾಂತ್ ಭಟ್, ಶ್ರೀ ಶಂಕರ ಕುಲಾಲ್, ಶ್ರೀ ಡೆನೀಸ್ ಪೆರಂಪಳ್ಳಿ, ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ಮೂಡುಸಗ್ರಿ ಹಾನಿಯಾದ ಕಿರುಸೇತುವೆ 9.50 ಲಕ್ಷ ವೆಚ್ಚದಲ್ಲಿ ಶೀಘ್ರ ಮರು ನಿರ್ಮಾಣ : ಯಶ್ಪಾಲ್ ಸುವರ್ಣ
ಉಡುಪಿ : ಮೂಡುಸಗ್ರಿ ವಾರ್ಡಿನ ಇಂದ್ರಾಳಿ ಸಗ್ರಿ ಶಾಲೆ ಸಂಪರ್ಕ ರಸ್ತೆಯ ಕಿರು ಸೇತುವೆ ಕುಸಿತಗೊಂಡಿರುವ ಸ್ಥಳಕ್ಕೆ ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಯಶ್ಪಾಲ್ ಸುವರ್ಣ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಕಿರು ಸೇತುವೆಗೆ ಹಾನಿಯಾಗಿ ವಾಹನ ಸಂಚಾರ ನಿಷೇಧವಾದ ಹಿನ್ನೆಲೆಯಲ್ಲಿ ಈ ಭಾಗದ ಸಾರ್ವಜನಿಕರು ತೊಂದರೆ ಅನುಭವಿಸುತ್ತಿದ್ದು, ಈಗಾಗಲೇ ನಗರಸಭೆಯ ಮೂಲಕ ಹೊಸ ಕಿರು ಸೇತುವೆಗೆ 9.50 ಲಕ್ಷ ಅನುದಾನ ಒದಗಿಸಿದ್ದು ತಕ್ಷಣ ಕಾಮಗಾರಿ ಆರಂಭಕ್ಕೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ನಗರಸಭೆ ಸದಸ್ಯರಾದ ಭಾರತಿ ಪ್ರಶಾಂತ್, ನಗರ ಬಿಜೆಪಿ ಅಧ್ಯಕ್ಷರಾದ ದಿನೇಶ್ ಅಮೀನ್, ಪಕ್ಷದ ಪ್ರಮುಖರಾದ ಪ್ರಶಾಂತ್, ಹೇಮಂತ, ಸದಾನಂದ ನಾಯಕ್, ಸುಮಾ ನಾಯ್ಕ್, ನಗರಸಭೆಯ ಎ ಇ ಇ ದುರ್ಗಾಪ್ರಸಾದ್, ಇಂಜಿನಿಯರ್ ಚೇತನ್ ಮೊದಲಾದವರು ಉಪಸ್ಥಿತರಿದ್ದರು.
ಬಾಂಗ್ಲಾ ಹಿಂದೂಗಳ ಮೇಲಿನ ಮುಸ್ಲಿಂ ಮೂಲಭೂತವಾದಿಗಳ ದೌರ್ಜನ್ಯವನ್ನು ಒಕ್ಕೊರಲಿನಿಂದ ಖಂಡಿಸೋಣ : ಯಶ್ಪಾಲ್ ಸುವರ್ಣ
ಬಾಂಗ್ಲಾದೇಶದಲ್ಲಿ ರಾಜಕೀಯ ಅಸ್ಥಿರತೆಯಿಂದ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ಮುಸ್ಲಿಂ ಮತೀಯವಾದಿಗಳು ಬಾಂಗ್ಲಾದ ಅಲ್ಪಸಂಖ್ಯಾತ ಹಿಂದೂಗಳ ಮೇಲೆ ನಡೆಸುತ್ತಿರುವ ದೌರ್ಜನ್ಯವನ್ನು ರಾಷ್ಟೀಯವಾದಿ ಭಾರತೀಯರು ಒಕ್ಕೊರಲಿನಿಂದ ಖಂಡಿಸುವಂತೆ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಆಗ್ರಹಿಸಿದ್ದಾರೆ.
ಹಿಂದೂ ದೇವಸ್ಥಾನ, ಆರಾಧನಾ ಕೇಂದ್ರಗಳ ಮೇಲೆ ದಾಳಿ, ಹಿಂದೂ ಧರ್ಮೀಯರ ಮೇಲೆ ಮಾರಣಾಂತಿಕ ಹಲ್ಲೆ ನಡೆಸುತ್ತಾ ಹಿಂದೂ ವಿರೋಧಿ ನೀತಿ ನಡೆಸುತ್ತಿರುವ ಮತಾಂಧ ಶಕ್ತಿಗಳ ವಿರುದ್ಧ ಬಾಂಗ್ಲಾ ಸರಕಾರ ತಕ್ಷಣ ಕಠಿಣ ಕ್ರಮಕೈಗೊಂಡು ಹಿಂದೂಗಳ ರಕ್ಷಣೆಗೆ ಕಾರ್ಯಪ್ರವೃತ್ತರಾಗಬೇಕು.
ಭಾರತದಲ್ಲಿ ಅಲ್ಪಸಂಖ್ಯಾತರ ಮೇಲೆ ಚಿಕ್ಕ ಘಟನೆ ನಡೆದ ಕೂಡಲೇ ಬೀದಿಗಿಳಿಯುವ ಎಡಪಂಥೀಯ, ಜಾತ್ಯತೀತ ಮುಖವಾಡ ತೊಟ್ಟ ಬುದ್ಧಿಜೀವಿಗಳು, ಬಾಂಗ್ಲಾ ಹಿಂದೂಗಳ ಮೇಲಿನ ದೌರ್ಜನ್ಯದ ಬಗ್ಗೆ ಚಕಾರ ಎತ್ತುತ್ತಿಲ್ಲ. ಹಿಂದೂಗಳ ಮೇಲಿನ ದಾಳಿಯ ಬಗ್ಗೆ ದಿವ್ಯ ಮೌನ ವಹಿಸುವ ಮೂಲಕ ಪ್ರಗತಿಪರರು ಐಸಿಸ್ ಮನಸ್ಥಿತಿಯ ಮತೀಯ ಶಕ್ತಿಗಳಿಗೆ ಪರೋಕ್ಷ ಬೆಂಬಲ ನೀಡುತ್ತಿದ್ದಾರೆ.
ಬಾಂಗ್ಲಾ ಹಿಂದೂಗಳ ರಕ್ಷಣೆಗೆ ಕೇಂದ್ರ ಸರ್ಕಾರ ಈಗಾಗಲೇ ಕಾರ್ಯಪ್ರವೃತ್ತವಾಗಿದ್ದು, ಹಿಂದೂಗಳ ವಿರುದ್ದ ದಾಳಿ ಮಾಡುತ್ತಿರುವ ಮತೀಯ ಶಕ್ತಿಗಳಿಗೆ ತಕ್ಕ ಉತ್ತರ ನೀಡಬೇಕಾದ ಅನಿವಾರ್ಯ ಸನ್ನಿವೇಶ ನಿರ್ಮಾಣವಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಲ್ಪೆ ಪಡುಕರೆ ಕಡಲ್ಕೊರೆತ ಪ್ರದೇಶಗಳಿಗೆ ಶಾಸಕ ಯಶ್ಪಾಲ್ ಸುವರ್ಣ ಅಧಿಕಾರಿಗಳೊಂದಿಗೆ ಭೇಟಿ
ಮಲ್ಪೆ : ಮಲ್ಪೆ, ಶಾಂತಿ ನಗರ, ಅಂಬಲಪಾಡಿ ಕಿದಿಯೂರು ಪಡುಕರೆ ಮತ್ತು ಕಡೆಕಾರ್ ಗ್ರಾಮ ಪಂಚಾಯತ್ ವ್ಯಾಪ್ತಿಯ ಕುತ್ಪಾಡಿ ಪಡುಕರೆಯ ಕಡಲ್ಕೊರೆತ ಪ್ರದೇಶಗಳಿಗೆ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು ಉಡುಪಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕಡಲ್ಕೊರೆತ ಸಮಸ್ಯೆಯ ಗಂಭೀರತೆಯ ಬಗ್ಗೆ ಈಗಾಗಲೇ ಮೀನುಗಾರಿಕೆ ಸಚಿವರಾದ ಮಾಂಕಾಳ ವೈದ್ಯರ ಗಮನಕ್ಕೆ ತಂದಿದ್ದು, ಕಡಲ್ಕೊರೆತ ತಡೆಗೆ ತಕ್ಷಣ ಅನುದಾನ ಮಂಜೂರು ಮಾಡುವಂತೆ ಮನವಿ ಮಾಡಲಾಗಿದೆ.
ಇಲಾಖೆಯ ಅಧಿಕಾರಿಗಳ ಮೂಲಕ ತುರ್ತು ಕಾಮಗಾರಿಯ ಬಗ್ಗೆ ಅಂದಾಜು ಪಟ್ಟಿ ತಯಾರಿಸಿ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಸದಸ್ಯರಾದ ಪ್ರಮೋದ್ ಸಾಲ್ಯಾನ್, ಪ್ರವೀಣ್, ಸ್ಥಳೀಯ ಪ್ರಮುಖರು ಹಾಗೂ ಬಂದರು ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ಉಡುಪಿ : ಟೀಮ್ ನೆಷನ್ ಫಸ್ಟ್ ಇದರ ವತಿಯಿಂದ ಆಯೋಜಿಸಲಾಗಿದ್ದ ರಕ್ತದಾನ ಶಿಬಿರವು ಅಜ್ಜರಕಾಡಿನ ಜಿ ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ಯಶಸ್ವಿಯಾಗಿ ನಡೆಯಿತು. ಉಡುಪಿಯ ಶಾಸಕರಾದ ಯಶಪಾಲ್ ಎ ಸುವರ್ಣರವರು ಕಾರ್ಯಕ್ರಮ ಉದ್ಘಾಟಿಸಿ ಶುಭ ಹಾರೈಸಿದರು.
ಟೀಮ್ ನೇಷನ್ ಫಸ್ಟ್ನ ಅಧ್ಯಕ್ಷರಾದ ಸೂರಜ್ ಕಿದಿಯೂರ್ ಮಾತನಾಡಿ ರಕ್ತದಾನ ಮಹಾದಾನ, ಚಿಕಿತ್ಸೆಯ ಮೂಲಕ ವೈದ್ಯರು ರೋಗಿಯನ್ನು ಗುಣಪಡಿಸಬಹುದು. ಆದರೆ ಒಬ್ಬ ಸಾಮಾನ್ಯ ಮನುಷ್ಯ ರಕ್ತದಾನದ ಮೂಲಕ ಒಬ್ಬರ ಜೀವವನ್ನು ಉಳಿಸಬಹುದು ಎಂದು ಹೇಳಿದರು. ಈ ಸಂದರ್ಭದಲ್ಲಿ ನಮ್ಮ ತಂಡದ ತರಬೇತಿ ಶಿಬಿರದಲ್ಲಿ ತರಬೇತಿ ಪಡೆದುಕೊಂಡು ಅಗ್ನಿವೀರ್ ಸ್ಕೀಮ್ನ ಮೂಲಕ ಭಾರತೀಯ ನೌಕಾಪಡೆಗೆ ಸೇರ್ಪಡೆಗೊಂಡ ಶಮಂತ್ ಕೆ ಸುಳ್ಯ ಇವರಿಗೆ ಸನ್ಮಾನಿಸಿ ಅಭಿನಂದಿಸಲಾಯಿತು. ಡಾ. ರಾಜೇಂದ್ರ ಕೆ ಅಸೋಸಿಯೇಟ್ ಪ್ರೊಫೆಸರ್ ಹಾಗೂ ಡಾ. ರಾಮಚಂದ್ರ ಪಾಟ್ಕರ್ ದೈಹಿಕಶಿಕ್ಷಣ ನಿರ್ದೇಶಕರು ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಉಡುಪಿ, ತಂಡದ ಉಪಾಧ್ಯಕ್ಷರಾದ ಡಾ. ಅತುಲ್ ಹಾಗೂ ಕೆಎಂಸಿಯ ಡಾ. ದೀಪ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ತಂಡದ ಕಾರ್ಯದರ್ಶಿ ಸಾತ್ವಿಕ್ ಗಡಿಯಾರ್, ಸದಸ್ಯರಾದ ಸಂತೋಷ್ ಕರ್ಕೇರ, ಪೂಜಾ ಸೂರಜ್ ಉಪಸ್ಥಿತರಿದ್ದರು.
ಉಡುಪಿ : ಬಿಜೆಪಿ ಉಡುಪಿ ನಗರ ಮಂಡಲದ ವಿಶೇಷ ಕಾರ್ಯಕಾರಿಣಿಯು ಜು.31ರಂದು ಬಿಜೆಪಿ ಉಡುಪಿ ನಗರ ಮಂಡಲಾಧ್ಯಕ್ಷ ದಿನೇಶ್ ಅಮೀನ್ ಅವರ ಅಧ್ಯಕ್ಷತೆಯಲ್ಲಿ ಬಿಜೆಪಿ ಜಿಲ್ಲಾ ಕಛೇರಿಯ ಸಭಾಂಗಣದಲ್ಲಿ ನಡೆಯಿತು.

ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಅವರು ವಿಶೇಷ ಕಾರ್ಯಕಾರಿಣಿ ಸಭೆಯನ್ನು ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು.
ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ, ಶಾಸಕ ಯಶ್ಪಾಲ್ ಸುವರ್ಣ, ಜಿಲ್ಲಾ ಉಪಾಧ್ಯಕ್ಷ ಕಿರಣ್ ಕುಮಾರ್ ಬೈಲೂರು, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರೇಷ್ಮಾ ಉದಯ ಶೆಟ್ಟಿ, ಎಸ್. ಸಿ. ಮೋರ್ಚಾ ರಾಜ್ಯ ಉಪಾಧ್ಯಕ್ಷ ದಿನಕರ ಬಾಬು, ಉಡುಪಿ ನಗರ ಪ್ರಧಾನ ಕಾರ್ಯದರ್ಶಿಗಳಾದ ಜಗದೀಶ್ ಆಚಾರ್ಯ ಕಪ್ಪೆಟ್ಟು, ರಶ್ಮಿತಾ ಬಿ. ಶೆಟ್ಟಿ ಹಾಗೂ ಮಂಡಲ ವಿಶೇಷ ಕಾರ್ಯಕಾರಿಣಿ ಸಭೆಯ ಅಪೇಕ್ಷಿತರು ಉಪಸ್ಥಿತರಿದ್ದರು.
ಉಡುಪಿ ನಗರಸಭೆ ವ್ಯಾಪ್ತಿಯ ಚಕ್ರತೀರ್ಥ ಮಾರ್ಗದ ಕಿರು ಸೇತುವೆ ಹಾನಿ : ಶಾಸಕ ಯಶ್ಪಾಲ್ ಸುವರ್ಣ ಭೇಟಿ ನೀಡಿ ಪರಿಶೀಲನೆ
ಉಡುಪಿ ನಗರಸಭೆ ವ್ಯಾಪ್ತಿಯ ಮೂಡುಸಗ್ರಿ ವಾರ್ಡಿನಲ್ಲಿ ಮಳೆಯಿಂದಾಗಿ ಹಾನಿಗೀಡಾದ ಚಕ್ರತೀರ್ಥ ಮಾರ್ಗದ ಕಿರುಸೇತುವೆ ವಾಹನ ಸಂಚಾರಕ್ಕೆ ಅಪಾಯ ಸ್ಥಿತಿಯಲ್ಲಿರುವ ಹಿನ್ನಲೆಯಲ್ಲಿ ಉಡುಪಿ ಶಾಸಕರಾದ ಶ್ರೀ ಯಶ್ಪಾಲ್ ಸುವರ್ಣ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಮುಂಜಾಗ್ರತಾ ಕ್ರಮವಾಗಿ ಈಗಾಗಲೇ ಈ ಮಾರ್ಗದಲ್ಲಿ ವಾಹನ ಸಂಚಾರ ನಿರ್ಬಂಧಿಸಿದ್ದು, ಈಗಾಗಲೇ ಸುಮಾರು ರೂ. 13 ಲಕ್ಷ ಅನುದಾನವನ್ನು ಕಿರು ಸೇತುವೆಯ ಮರು ನಿರ್ಮಾಣಕ್ಕೆ ಮಂಜೂರು ಮಾಡಿದ್ದು ಅತೀ ಶೀಘ್ರದಲ್ಲಿ ಕಾಮಗಾರಿ ಆರಂಭಿಸಲು ನಗರಸಭೆಯ ಅಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ಸ್ಥಳೀಯ ನಗರಸಭಾ ಸದಸ್ಯರಾದ ಶ್ರೀಮತಿ ಭಾರತಿ ಪ್ರಶಾಂತ್, ನಗರ ಬಿಜೆಪಿ ಅಧ್ಯಕ್ಷರಾದ ಶ್ರೀ ದಿನೇಶ್ ಅಮೀನ್, ನಗರ ಸಭಾ ಸದಸ್ಯರಾದ ಗಿರೀಶ್ ಅಂಚನ್, ಸ್ಥಳೀಯ ಮುಖಂಡರಾದ ಶ್ರೀ ಈಶ್ವರ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು.
ಶಾಸಕ ಯಶ್ಪಾಲ್ ಸುವರ್ಣ ನೇತೃತ್ವದಲ್ಲಿ ಕೊರಗ ಸಮುದಾಯದ ಮುಖಂಡರೊಂದಿಗೆ ಜಿಲ್ಲಾಧಿಕಾರಿಗಳ ಭೇಟಿ
ಕಳೆದ 8 ದಿನಗಳಿಂದ ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟ ರಿ. ಕರ್ನಾಟಕ ಕೇರಳ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಕೊರಗ ಸಮುದಾಯದ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಹೋರಾತ್ರಿ ಪ್ರತಿಭಟನೆ ನಡೆಸುತ್ತಿರುವ ಕೊರಗ ಸಮುದಾಯದ ಮುಖಂಡರು ಉಡುಪಿ ಶಾಸಕ ಯಶ್ಪಾಲ್ ಸುವರ್ಣ ನೇತೃತ್ವದಲ್ಲಿ ಉಡುಪಿ ಜಿಲ್ಲಾಧಿಕಾರಿ ಡಾ. ವಿದ್ಯಾ ಕುಮಾರಿ ಕೆ. ಯವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದರು.
ಶಾಸಕ ಯಶ್ಪಾಲ್ ಸುವರ್ಣ ಮಾತನಾಡಿ ಕೊರಗ ಸಮುದಾಯದ ನ್ಯಾಯ ಸಮ್ಮತ ಬೇಡಿಕೆಗಳಾದ ಭೂಮಿ ಹಕ್ಕು ಹಾಗೂ ವಿದ್ಯಾವಂತ ಕೊರಗ ಸಮುದಾಯದ ಯುವ ಜನತೆಗೆ ಅರ್ಹ ಸರಕಾರಿ ಉದ್ಯೋಗದ ಒದಗಿಸುವ ಬಗ್ಗೆ ಈಗಾಗಲೇ ರಾಜ್ಯ ಸರಕಾರದ ಗಮನಕ್ಕೆ ತರಲಾಗಿದ್ದು, ಶೀಘ್ರದಲ್ಲಿಯೇ ಕೊರಗ ಸಮುದಾಯದ ಮುಖಂಡರೊಂದಿಗೆ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಬೇಡಿಕೆ ಈಡೇರಿಕೆಗೆ ಆಗ್ರಹಿಸುವುದಾಗಿ ತಿಳಿಸಿದರು.
ಜಿಲ್ಲಾಧಿಕಾರಿಗಳು ಜಿಲ್ಲೆಯ ಕೊರಗ ಸಮುದಾಯದ ಗಂಭೀರ ಸಮಸ್ಯೆ ಹಾಗೂ ಬೇಡಿಕೆಗಳ ಬಗ್ಗೆ ಉಸ್ತುವಾರಿ ಸಚಿವರು ಹಾಗೂ ಸಂಬಂಧಿತ ಇಲಾಖೆಗೆ ಸೂಕ್ತ ವರದಿ ನೀಡುವಂತೆ ಶಾಸಕರು ಕೊರಗ ಸಮುದಾಯದ ಪರವಾಗಿ ಹೇಳಿದರು.
ಕೊರಗ ಸಮುದಾಯದ ಮುಖಂಡರು ತಮ್ಮ ಬೇಡಿಕೆ ಹಾಗೂ ಸಮಸ್ಯೆಗಳ ಬಗ್ಗೆ ಜಿಲ್ಲಾಧಿಕಾರಿಗಳೊಂದಿಗೆ ಸುದೀರ್ಘ ಚರ್ಚೆ ನಡೆಸಿದರು.
ಈ ಸಂದರ್ಭದಲ್ಲಿ ಕೊರಗ ಸಮುದಾಯದ ಮುಖಂಡರಾದ ಸುಶೀಲ, ಸಂಜೀವ, ಶೇಖರ್, ಬೊಗ್ರ, ಪವಿತ್ರ, ಐ. ಟಿ. ಡಿ. ಪಿ. ಯೋಜನಾಧಿಕಾರಿ ನಾರಾಯಣ ಸ್ವಾಮಿ ಉಪಸ್ಥಿತರಿದ್ದರು.