ಅಪಾಯಕಾರಿ ಸ್ಥಿತಿಯಲ್ಲಿರುವ ಮರಗಳ ತೆರುವುಗೊಳಿಸಲು ಕ್ರಮವಹಿಸಿ : ಕುಂದಾಪುರ ಶಾಸಕ ಎ.ಕಿರಣ್ ಕುಮಾರ್ ಕೊಡ್ಗಿ ಸೂಚನೆ

ಕುಂದಾಪುರ : ಮಳೆಗಾಲ ಆರಂಭವಾಗಿದ್ದು ಮಳೆಗಾಲದ ಸಿದ್ಧತೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ ವಿವಿಧ ಇಲಾಖಾ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಕರಾವಳಿಗೆ ಈಗಾಗಲೇ ಮುಂಗಾರು ಪ್ರವೇಶಗೊಂಡಿದ್ದು ಪ್ರಸ್ತಕ ಸಾಲಿನಲ್ಲಿ ಗಾಳಿ ಮಳೆ ಜೋರಾಗಿ ಸುರಿಯುವ ಬಗ್ಗೆ ಹವಾಮಾನ ಇಲಾಖೆ ವರದಿ ನೀಡಿದೆ. ಈ ಹಿನ್ನಲೆಯಲ್ಲಿ ಮುಂಗಾರು ಮಳೆಯಿಂದಾಗಿ ಉಂಟಾಗುವ ಹಾನಿ, ಸಮಸ್ಯೆಗಳನ್ನು ಎದುರಿಸಲು ಸಜ್ಜಾಗಿರುವಂತೆ ಕುಂದಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ, ಮೆಸ್ಕಾಂ ಇಲಾಖೆ, ಪುರಸಭೆ ಕುಂದಾಪುರ, ವಲಯ ಅರಣ್ಯ ಇಲಾಖೆ, ಲೋಕೋಪಯೋಗಿ ಇಲಾಖೆ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಇಲಾಖೆಗಳಿಗೆ ಸೂಚನೆ ನೀಡಿದ್ದಾರೆ.

ನಿರಂತರ ವಿದ್ಯುತ್ ಪೂರೈಕೆ, ವಿದ್ಯುತ್ ಅವಘಡ ಮತ್ತು ಹಾನಿ ತಪ್ಪಿಸಲು ರಸ್ತೆಯ ಇಕ್ಕಲುಗಳಲ್ಲಿ ಅಪಾಯಕಾರಿ ಸ್ಥಿತಿಯಲ್ಲಿರುವ ಮರಗಳು ಹಾಗೂ ಮರಗಳ ಗೆಲ್ಲುಗಳನ್ನು ತೆರವುಗೊಳಿಸುವಂತೆ ಹಾಗೂ ಅಪಾಯಕಾರಿ ಹಳೆಯ ವಿದ್ಯುತ್ ಕಂಬಗಳನ್ನು ತೆರವುಗೊಳಿಸುವುದು, ಮಳೆ ನೀರು ಹರಿಯುವ ಚರಂಡಿಗಳಲ್ಲಿ ಹೂಳು ತುಂಬಿದ ರಸ್ತೆಯ ಮೇಲೆ ನೀರು ಹರಿದು ಜನ ವಾಹನ ಸಂಚಾರಕ್ಕೆ ಅನಾನುಕೂಲವಾಗಿರುತ್ತದೆ.

ಪುರಸಭೆ ವ್ಯಾಪ್ತಿಯ ಮುಖ್ಯ ರಸ್ತೆಗಳಲ್ಲಿ ನೀರು ಹರಿಯುವ ಚರಂಡಿಗಳಲ್ಲಿರುವ ಹೂಳುಗಳನ್ನು ತೆರುವುಗೊಳಿಸಿ ಸರಾಗವಾಗಿ ಹರಿಯುವಂತೆ ಮಾಡಲು ಕ್ರಮ ಕೈಗೊಳ್ಳುವುದು, ಸಾರ್ವಜನಿಕರಿಂದ ದೂರುಗಳು ಬಂದಲ್ಲಿ ಸೂಕ್ತ ಕ್ರಮ ಮುಖ್ಯಧಿಕಾರಿಗಳಿಗೆ ಪತ್ರ ಮುಖೇನ ಸೂಚಿಸಿದ್ದಾರೆ.

Related posts

ಅಲೈನ್ಸ್ ಕ್ಲಬ್ ಉಡುಪಿಯಿಂದ ವೈದ್ಯರ ದಿನಾಚರಣೆ : ಪ್ರಸಿದ್ಧ ವೈದ್ಯ ಡಾ.ಆರ್.ಎನ್.ಭಟ್ ಅವರಿಗೆ ಸನ್ಮಾನ

ಶತಾವಧಾನಿ ಡಾ. ಆರ್. ಗಣೇಶ್ ಅವರಿಗೆ ತಲ್ಲೂರು ಕನಕ ಅಣ್ಣಯ್ಯ ಶೆಟ್ಟಿ ಪ್ರಶಸ್ತಿ ಪ್ರದಾನ

ರಂಗೋಲಿ ಕಲಾ ಸಾಧಕಿ, ಭಾರತಿ ಮರವಂತೆಗೆ ‘ಮಧುರಚೆನ್ನ ರಾಜ್ಯ ಪ್ರಶಸ್ತಿ’ ಪ್ರದಾನ