ಸಾಮಾಜಿಕ ಜಾಲತಾಣದಲ್ಲಿ ತಲವಾರು ಪ್ರದರ್ಶನ; ಇಬ್ಬರು ಆರೋಪಿಗಳ ಬಂಧನ

ಪುತ್ತೂರು : ಸಾಮಾಜಿಕ ಜಾಲತಾಣದಲ್ಲಿ ಮಾರಕಾಯುಧವಾದ ತಲವಾರು ಹಿಡಿದುಕೊಂಡು ಭಾವಚಿತ್ರವನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರಸಾರ ಮಾಡಿದ ಆರೋಪದಲ್ಲಿ ಪುತ್ತೂರು ಗ್ರಾಮಾಂತರ ಪೊಲೀಸರು ಆರೋಪಿಗಳ ವಿರುದ್ಧ ಸುಮೊಟೋ ಕೇಸ್ ದಾಖಲಿಸಿ ಬಂಧಿಸಿರುವ ಘಟನೆ ನಡೆದಿದೆ.

ಬಂಧಿತ ಆರೋಪಿಗಳನ್ನು ಪುತ್ತೂರು ಕುರಿಯ ಗ್ರಾಮದ ನಿವಾಸಿ ಸುಜಿತ್‌ (36) ಹಾಗೂ ಪುತ್ತೂರು ಆರ್ಯಾಪು ಗ್ರಾಮದ ನಿವಾಸಿ ಪುಟ್ಟಣ್ಣ (32) ಎಂದು ಗುರುತಿಸಲಾಗಿದೆ.

ಆರೋಪಿಗಳು ತಲವಾರು ಹಿಡಿದಿರುವ ಫೋಟೋ ಹಾಕಿ ಸಮಯ ಎಂದು ಶೀರ್ಷಿಕೆ ಬರೆದು ಸಾರ್ವಜನಿಕರಲ್ಲಿ ಭಯ ಹುಟ್ಟಿಸಿದ್ದರು.

ಆರೋಪಿಗಳು ತಲವಾರು ಹಿಡಿದು ಫೋಟೋ ತೆಗೆದು ಅದನ್ನು ವಾಟ್ಸಪ್‌ನಲ್ಲಿ ಬುಧವಾರ ಸಂಜೆ ಅಪ್ಲೋಡ್ ಮಾಡಿದ್ದರು. ಈ ಫೊಟೋ ಸಾಕಷ್ಟು ವೈರಲ್ ಆಗಿತ್ತು. ಮಾರಕಾಯುಧವಾದ ತಲವಾರನ್ನು ಪ್ರದರ್ಶಿಸಿರುವ ಫೊಟೋ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿರುವುದರ ಪುತ್ತೂರು ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಸುಮೊಟೋ ಪ್ರಕರಣ ದಾಖಲಿಸಲಾಗಿತ್ತು. ಬಳಿಕ ತಡರಾತ್ರಿ ಅವರಿಬ್ಬರನ್ನೂ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

Related posts

National Fame Award of India Books of Award – Sushanth Brahmavar

ಯಕ್ಷಗಾನ ಹಾಸ್ಯಗಾರ ಮುಖ್ಯಪ್ರಾಣ ಕಿನ್ನಿಗೋಳಿ ನಿಧನಕ್ಕೆ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಸಂತಾಪ

ಸಿಪಿಎಂ ಕಾರ್ಯದರ್ಶಿ ಮೇಲೆ ದುರುದ್ದೇಶಪೂರಿತ ಎಫ್ಐಆರ್ – ಖಂಡನೆ