ತಾಲೂಕು ಮಟ್ಟದ ಕ್ರೀಡಾಕೂಟ: ಕಲ್ಯ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳ ಸಾಧನೆ

ಕಾರ್ಕಳ : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಶಿರ್ಲಾಲ್ ಸೂಡಿ ಇಲ್ಲಿ ಜರಗಿದ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಲ್ಯ ಇಲ್ಲಿಯ ವಿದ್ಯಾರ್ಥಿ ಸಿಹಾನ್ ಹರ್ಡಲ್ಸ್, ಎತ್ತರ ಜಿಗಿತ ಪ್ರಥಮ, 600ಮೀ ತೃತೀಯ ಸ್ಥಾನ ಪಡೆದು ವೈಯಕ್ತಿಕ ಚಾಂಪಿಯನ್ ಪ್ರಶಸ್ತಿಯನ್ನು ಪಡೆದಿರುತ್ತಾನೆ.

ಬಾಲಕಿಯರ ತಂಡ ರಿಲೇ ಓಟದಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷರಾದ ಶಂಕರ್ ಆಚಾರ್ಯ ಮತ್ತು ಬೋಧ ಬೋಧಕೇತರರು ದೈಹಿಕ ಶಿಕ್ಷಕ ವಸಂತ್ ನಾಯ್ಕ್ ಸಾಧಕ ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ.

Related posts

ಅನುಮಾನಾಸ್ಪದ ವ್ಯಕ್ತಿಗಳು, ಬೋಟ್‌ಗಳು ಕಂಡುಬಂದಲ್ಲಿ‌ ಮಾಹಿತಿ ನೀಡುವಂತೆ ಮೀನುಗಾರರಿಗೆ ಸೂಚನೆ

‘ಉಡುಪಿ ಸಂಜೀವಿನಿ’ ಉತ್ಪನ್ನ ಮಾರುಕಟ್ಟೆಗೆ ಬಿಡುಗಡೆ

ನೆಕ್ಲಾಜೆ ಶ್ರೀ ಕಾಳಿಕಾಂಬೆಗೆ ಸ್ವರ್ಣ ಪಾದುಕೆ ಸಮರ್ಪಣೆ