ಪದವಿಪೂರ್ವ ಕಾಲೇಜುಗಳ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ : ಆಳ್ವಾಸ್‌ಗೆ ಅವಳಿ ಪ್ರಶಸ್ತಿ

ಮೂಡುಬಿದಿರೆ : ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ದಕ್ಷಿಣ ಕನ್ನಡ ಹಾಗೂ ರೋಟರಿ ಪದವಿ ಪೂರ್ವ ಕಾಲೇಜಿನ ಆಶ್ರಯದಲ್ಲಿ ಮೂಡುಬಿದಿರೆಯಲ್ಲಿ ನಡೆದ ತಾಲೂಕು ಮಟ್ಟದ ಪದವಿಪೂರ್ವ ಕಾಲೇಜುಗಳ ಬಾಲಕ – ಬಾಲಕಿಯರ ವಾಲಿಬಾಲ್ ಪಂದ್ಯಾಟದಲ್ಲಿ ಆಳ್ವಾಸ್‌ ಕಾಲೇಜು ಅವಳಿ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು.

ಬಾಲಕರ ವಿಭಾಗದ ವಾಲಿಬಾಲ್ ಪಂದ್ಯಾಟದಲ್ಲಿ ಆಳ್ವಾಸ್ ಪದವಿಪೂರ್ವ ಕಾಲೇಜು, ರೋಟರಿ ಪದವಿ ಪೂರ್ವ ಕಾಲೇಜು ತಂಡವನ್ನು 2-0 ಅಂತರದಿಂದ ಸೋಲಿಸಿ ಪ್ರಶಸ್ತಿಯನ್ನು ಪಡೆಯಿತು.

ಬಾಲಕಿಯರ ವಾಲಿಬಾಲ್ ಪಂದ್ಯಾಟದಲ್ಲಿಯೂ ಕೂಡ ಆಳ್ವಾಸ್ ಪದವಿಪೂರ್ವ ಕಾಲೇಜು, ರೋಟರಿ ಪದವಿ ಪೂರ್ವ ಕಾಲೇಜಿನ ತಂಡವನ್ನು 2-1 ಅಂತರದಿಂದ ಸೋಲಿಸಿ ಪ್ರಶಸ್ತಿಯನ್ನು ಪಡೆಯಿತು.

Related posts

ಜನಿವಾರ ತೆಗೆಸಿದ ಪ್ರಕರಣ – ಒಂದು ಸಮಾಜದ ಮೇಲೆ ದಬ್ಬಾಳಿಕೆ ಸರಿಯಲ್ಲ : ಕೋಟ

ನೇತ್ರಾವತಿ ಹೋರಾಟಕ್ಕೆ ಸಜ್ಜು – ತೋನ್ಸೆ ಜಯಕೃಷ್ಣ ಶೆಟ್ಟಿ

ಕೋಟದಲ್ಲಿ ಎರಡು ದಿನಗಳ ಯಕ್ಷ ತ್ರಿವಳಿ ಮಕ್ಕಳ ಯಕ್ಷೋತ್ಸವ ಉದ್ಘಾಟನೆ