ತೆಂಕು ತಿಟ್ಟಿನ ಹಿರಿಯ ಯಕ್ಷಗಾನ ಕಲಾವಿದ ಮುಂಡ್ಕೂರು ವಸಂತ ಶೆಟ್ಟಿ ನಿಧನ

ತೆಂಕು ತಿಟ್ಟಿನ ಹಿರಿಯ ಯಕ್ಷಗಾನ ಕಲಾವಿದ ಮುಂಡ್ಕೂರು ವಸಂತ ಶೆಟ್ಟಿ(83) ನಿಧನ ಹೊಂದಿದರು.

ಮುಂಡ್ಕೂರು ಕೃಷ್ಣ ಶೆಟ್ಟಿಯವರಲ್ಲಿ ಹೆಜ್ಜೆಗಾರಿಕೆ ಕಲಿತು ಮುಂಡ್ಕೂರು ಮೇಳದಲ್ಲಿ ಹವ್ಯಾಸಿ ವೇಷಧಾರಿಯಾಗಿ, ಮುಂದೆ ಉದ್ಯೋಗ ನಿಮಿತ್ತ ಮುಂಬಯಿ ಸೇರಿ ಯಕ್ಷಗಾನಾಸಕ್ತಿಯಿಂದ ಮತ್ತೆ ಊರಿಗೆ ಬಂದು ಕಟೀಲು ಮೇಳ ಸೇರಿದರು. ಬೆಳ್ಮಣ್ಣು ಮತ್ತು ಬಪ್ಪನಾಡು ಮೇಳಗಳಲ್ಲೂ ಕೆಲವು ತಿರುಗಾಟ ಮಾಡಿದ್ದರು. ಪೀಠಿಕಾ ಮತ್ತು ಒಡ್ಡೋಲಗದ ಪಾತ್ರಗಳಿಂದ ಆರಂಭಗೊಂಡ ಇವರ ಯಕ್ಷಪಯಣ ಮುಂದೆ ಹವ್ಯಾಸಿ ಸಂಘಸಂಸ್ಥೆಗಳ ಆಟಗಳಲ್ಲಿ ಅತಿಕಾಯ, ರಕ್ತಬೀಜದಂತಹ ಪ್ರಮುಖ ಪಾತ್ರಗಳನ್ನು ಸಮರ್ಥವಾಗಿ ನಿರ್ವಹಿಸುವಷ್ಟು ಪ್ರೌಢತೆ ಸಾಧಿಸಿತ್ತು. ಅವರು ಪತ್ನಿ ನಾಲ್ವರು ಪುತ್ರಿಯರನ್ನು ಅಗಲಿದ್ದಾರೆ. ಕಳೆದ ವರ್ಷ ಸಂಸ್ಥೆ ಕಟೀಲಿನಲ್ಲಿ ಆಯೋಜಿಸಿದ್ದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅವರಿಗೆ ‘ಯಕ್ಷಗಾನಕಲಾರಂಗ ಪ್ರಶಸ್ತಿ’ ನೀಡಿ ಗೌರವಿಸಿತ್ತು. ವಸಂತ ಶೆಟ್ಟಿಯವರ ನಿಧನಕ್ಕೆ ಸಂಸ್ಥೆಯ ಅಧ್ಯಕ್ಷ ಎಂ. ಗಂಗಾಧರ ರಾವ್ ಮತ್ತು ಕಾರ್ಯದರ್ಶಿ ಮುರಲಿ ಕಡೆಕಾರ್ ಸಂತಾಪ ವ್ಯಕ್ತಪಡಿಸಿದ್ದಾರೆ.

Related posts

ವಿಶ್ವದ ವೇಗದ ಭಗವದ್ಗೀತಾ ಲೇಖಕ : ಕೇವಲ 5.30 ಗಂಟೆಗಳಲ್ಲಿ 18 ಅಧ್ಯಾಯ ಮತ್ತು 700 ಶ್ಲೋಕಗಳ ಬರಹ ಪೂರ್ಣಗೊಳಿಸಿದ ಅದ್ಭುತ ಸಾಧನೆ!

Worlds Fastest Bhagvad Gita Writer Completing 18 Chapters & 700 Verses in Just 5.30 Hours

ಮೀನುಗಾರರ ಪ್ರತಿಭಟನೆಯಲ್ಲಿ ಪ್ರಚೋದನಕಾರಿ ಭಾಷಣ-ಹಿಂದೂ ಯುವಸೇನೆ ಮುಖಂಡನ ವಿರುದ್ಧ ಸುಮೊಟೋ ಕೇಸ್