ಕೆಎಸ್‌ಆರ್‌ಟಿಸಿ ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಮೂವರ ದುರ್ಮರಣ

ಹೊನ್ನಾವರ: ಕೆಎಸ್‌ಆರ್‌ಟಿಸಿ ಬಸ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್‌ನಲ್ಲಿದ್ದ ಮೂವರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಡಿ.31 ರಂದು ಮಂಗಳವಾರ ಮುಂಜಾನೆ ಹೊನ್ನಾವರ ಶರಾವತಿ ಸೇತುವೆಯ ಮೇಲೆ ಸಂಭವಿಸಿದೆ.

ಮೃತಪಟ್ಟ ಬೈಕ್ ಸವಾರರನ್ನು ರಾಘವೇಂದ್ರ ಸೋಮಯ್ಯ ಗೌಡ ಮಾವಿನಕುರ್ವಾ(34), ಗೌರೀಶ್ ನಾಯ್ಕ, ಸಂಶಿ(25) ಹಾಗೂ ರಮೇಶ್ ನಾಯ್ಕ ಮಾವುವಿನಕುರ್ವ(22) ಎಂದು ಗುರುತಿಸಲಾಗಿದೆ.

ಬಿಜಾಪುರದಿಂದ ಮಂಗಳೂರಿಗೆ ಹೊರಟಿದ್ದ ಕೆಎಸ್‌ಆ‌ರ್‌ಟಿಸಿ ಬಸ್ ಶರಾವತಿ ಸೇತುವೆ ಮೇಲೆ ಚಲಿಸುತ್ತಿದ್ದ ವೇಳೆ ಮಂಕಿ ಕಡೆಯಿಂದ ಹೊನ್ನಾವರ ಕಡೆಗೆ ಬರುತ್ತಿದ್ದ ಬೈಕ್‌ಗೆ ಡಿಕ್ಕಿ ಹೊಡೆಯಿತು. ಬೈಕ್‌ನಲ್ಲಿದ್ದ ಮೂವರು ಯುವಕರು ಸ್ಥಳದಲ್ಲೇ‌ ಮೃತಪಟ್ಟಿದ್ದಾರೆ.

ಘಟನಾ ಸ್ಥಳಕ್ಕೆ ಹೊನ್ನಾವರ ಪಿಎಸ್ಐ ಮಂಜುನಾಥ ಗೌಡ ಹಾಗೂ ಸಿಬ್ಬಂದಿ ಭೇಟಿ ನೀಡಿ‌ ಪರಿಶೀಲನೆ ನಡೆಸಿದ್ದಾರೆ. ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಹೊತ್ತಿಕೊಂಡ ಬೆಂಕಿ..!

ವೇಶ್ಯಾವಾಟಿಕೆ ನಡೆಸುತ್ತಿದ್ದ ಮನೆಗೆ ದಾಳಿ : ಇಬ್ಬರ ಬಂಧನ; ಯುವತಿಯ ರಕ್ಷಣೆ

ಬೈಕ್‌ನಲ್ಲಿ ಅಪಾಯಕಾರಿ ವೀಲಿಂಗ್‌ ಮಾಡುತ್ತಿದ್ದ ವ್ಯಕ್ತಿ ಪೊಲೀಸ್ ವಶಕ್ಕೆ