29 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

ಮಣಿಪಾಲ : 29 ವರ್ಷಗಳ ಹಿಂದಿನ‌ ಪ್ರಕರಣವೊಂದರಲ್ಲಿ ಪೊಲೀಸರಿಗೆ ಬೇಕಾಗಿದ್ದ ಆರೋಪಿಯನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ. ಕೃಷ್ಣ ಭಂಡಾರಿ ಬಂಧಿತ ಆರೋಪಿ.

ಈತ 1995ರಲ್ಲಿ ವ್ಯಕ್ತಿಯೋರ್ವನಿಗೆ ಅಡ್ಡಗಟ್ಟಿ ಕಬ್ಬಿಣದ ಸರಳುಗಳಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದ ಆರೋಪಿಗಳ ಪೈಕಿ ಓರ್ವನಾಗಿದ್ದಾನೆ. ಆರೋಪಿಯನ್ನು ಪೊಲೀಸ್ ನಿರೀಕ್ಷಕ ದೇವರಾಜ್ ಟಿ.ವಿ ಯವರ ಮಾರ್ಗದರ್ಶನದಲ್ಲಿ ಸಿಬ್ಬಂದಿಗಳಾದ ಪ್ರಸನ್ನ ಸಿ. ಹಾಗೂ ಇಮ್ರಾನ್ ಮಾಹಿತಿಯನ್ನು ಕಲೆಹಾಕಿ ಕುಂದಾಪುರದಿಂದ ವಶಕ್ಕೆ ಪಡೆದಿದ್ದಾರೆ. ಆರೋಪಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ.

Related posts

ಅಲೈನ್ಸ್ ಕ್ಲಬ್ ಉಡುಪಿಯಿಂದ ವೈದ್ಯರ ದಿನಾಚರಣೆ : ಪ್ರಸಿದ್ಧ ವೈದ್ಯ ಡಾ.ಆರ್.ಎನ್.ಭಟ್ ಅವರಿಗೆ ಸನ್ಮಾನ

ಶತಾವಧಾನಿ ಡಾ. ಆರ್. ಗಣೇಶ್ ಅವರಿಗೆ ತಲ್ಲೂರು ಕನಕ ಅಣ್ಣಯ್ಯ ಶೆಟ್ಟಿ ಪ್ರಶಸ್ತಿ ಪ್ರದಾನ

ರಂಗೋಲಿ ಕಲಾ ಸಾಧಕಿ, ಭಾರತಿ ಮರವಂತೆಗೆ ‘ಮಧುರಚೆನ್ನ ರಾಜ್ಯ ಪ್ರಶಸ್ತಿ’ ಪ್ರದಾನ