178
ಮಣಿಪಾಲ : ಹಲ್ಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸುಮಾರು 32 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಣಿಪಾಲ ಪೊಲೀಸರು ಕೊನೆಗೂ ಬಂಧಿಸಿದ್ದಾರೆ.
ಗಣೇಶ್ ಪ್ರಭು (54) ಬಂಧಿತ ಆರೋಪಿ. ಮಣಿಪಾಲ ಠಾಣೆ ವ್ಯಾಪ್ತಿಯಲ್ಲಿ 1992ರಲ್ಲಿ 12 ಜನರ ಮೇಲೆ ಹಲ್ಲೆ ನಡೆಸಿದ ಆರೋಪ ಈತನ ಮೇಲಿದೆ. ಬೆಂಗಳೂರಿನಲ್ಲಿ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿ ಕರೆತರಲಾಗಿದ್ದು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ.