ಕೆಎಂಸಿ ಉದ್ಯೋಗಿಯ ಮಾಂಗಲ್ಯ ಸರ ಎಗರಿಸಿದ ಆರೋಪಿ ಅರೆಸ್ಟ್

ಮಣಿಪಾಲ : ಕೆಲಸ ಮುಗಿಸಿ ಮನೆಗೆ ಹೋಗುತ್ತಿದ್ದ ಕೆಎಂಸಿ ಆಸ್ಪತ್ರೆಯ ಸಿಬ್ಬಂದಿ, ಹೆರ್ಗಾ ನಿವಾಸಿ ವಸಂತಿ ಅವರನ್ನು ಹಿಂಬಾಲಿಸಿ 45 ಗ್ರಾಂ ಚಿನ್ನದ ಮಾಂಗಲ್ಯ ಸರವನ್ನು ಎಗರಿಸಿದ ಆರೋಪಿಯನ್ನು ಮಣಿಪಾಲ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಶ್ವಾನದಳ ನೀಡಿದ ಸುಳಿವನ್ನು ಆದರಿಸಿ ಮಣಿಪಾಲ ಪೊಲೀಸರು ಇಂದು ಸರಳಬೆಟ್ಟಿನ ನಿವಾಸಿ ಸಂತೋಷ್‌ (29),ಎಂಬಾತನನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದಾಗ ಆರೋಪಿ 3.5 ಲಕ್ಷ ಮೌಲ್ಯದ ಚಿನ್ನದ ಮಾಂಗಲ್ಯ ಸರವನ್ನು ಸುಲಿಗೆ ಮಾಡಿದ್ದಾಗಿ ಒಪ್ಪಿಕೊಂಡಿದ್ದಾನೆ.

ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

Related posts

ಗ್ರಾಮೀಣ ಬಂಟರ ಸಂಘದ ಸ್ಕಿಲ್ ಡೆವೆಲಪ್ಮೆಂಟ್ ಕೇಂದ್ರದಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ

ಉಗ್ರರನ್ನು ಸದೆಬಡಿಯಲು ಎಲ್ಲರೂ ಒಗ್ಗಟ್ಟಾಗಿ ಹೋರಾಡಬೇಕು : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಪತ್ರಕರ್ತ ಸಂದೀಪ್ ಪೂಜಾರಿಗೆ ಶ್ರದ್ಧಾಂಜಲಿ ಸಭೆ