ಪರಾರಿಯಾಗಲು ಯತ್ನಿಸಿದ ಆರೋಪಿಯ ರಾದ್ಧಾಂತ : ಸರಣಿ ಅಪಘಾತ, ಪೊಲೀಸರಿಂದ ಸಿನಮೀಯ ಶೈಲಿಯಲ್ಲಿ ಬಂಧನ

ಮಣಿಪಾಲ : ಪರಾರಿಯಾಗಲು ಯತ್ನಿಸಿದ ಆರೋಪಿಯೊಬ್ಬ ರಾದ್ಧಾಂತ ನಡೆಸಿ ಸರಣಿ ಅಪಘಾತಕ್ಕೆ ಕಾರಣನಾಗಿದ್ದು ಆತನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ಗರುಡ ಗ್ಯಾಂಗ್ ಸದಸ್ಯ ಇಸಾಕ್ ಎಂದು ತಿಳಿದುಬಂದಿದೆ.
ಆರೋಪಿ ಇಸಾಕ್ ಮಣಿಪಾಲದಲ್ಲಿ ಪೊಲೀಸರನ್ನು ನೋಡಿ ಕಾರಿನಲ್ಲಿ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ಈ ವೇಳೆ, ಜಿಲ್ಲಾಧಿಕಾರಿ ಕಚೇರಿ ರಸ್ತೆಯಲ್ಲಿ ನಾಲ್ಕು ಕಾರು ಹಾಗೂ ಒಂದು ದ್ವಿಚಕ್ರ ವಾಹನಕ್ಕೆ ಆರೋಪಿಯ ಕಾರು ಡಿಕ್ಕಿಯಾಗಿದೆ.

ಪ್ರಕರಣವೊಂದರ ಸಂಬಂಧ ಆರೋಪಿಯನ್ನು ಬಂಧಿಸಲು ನೆಲಮಂಗಲ ಪೊಲೀಸರು ಬಂದಿದ್ದರು. ಪೊಲೀಸರನ್ನು ಕಂಡು ಕಾರಿನಲ್ಲಿ ಪರಾರಿಯಾಗಲು ಆರೋಪಿ ಯತ್ನಿಸಿದ್ದಾನೆ. ಆರೋಪಿಯನ್ನು ಬೆಂಬಿಡದೆ ಚೇಸ್ ಮಾಡಿದ ನೆಲಮಂಗಲ ಪೊಲೀಸರು, ಮಣಿಪಾಲ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮಣಿಪಾಲ್ ಪೊಲೀಸ್‌ ಇನ್ಸ್‌ಪೆಕ್ಟರ್‌ ದೇವರಾಜ್, ಆರೋಪಿಯನ್ನು ಚೇಸ್‌ ಮಾಡಿ ಮಣ್ಣ ಪಳ್ಳದ ಬಳಿ ಬಂಧಿಸಿದ್ದಾರೆ.

ಮಣಿಪಾಲ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

Related posts

ಮಲ್ಪೆ ಆದಿ ಉಡುಪಿ ಹೆದ್ದಾರಿ ಕಾಮಗಾರಿ ಅಧಿಕಾರಿಗಳೊಂದಿಗೆ ಶಾಸಕ ಯಶ್‌ಪಾಲ್ ಸುವರ್ಣ ಸಭೆ

ಮಂಗಳೂರಿನಲ್ಲಿ ಸರ್ವೆ ಇಲಾಖೆಯ ಅಧಿಕಾರಿ ಮನೆ ಹಾಗೂ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳ ದಾಳಿ

ಕೇರಳದಿಂದ ಕೊಲ್ಲೂರಿಗೆ ಹೊರಟಿದ್ದ ಟಿಟಿ ವಾಹನ ಪಲ್ಟಿ – ಹಲವರಿಗೆ ಗಾಯ