ಆರೋಗ್ಯ ತಪಾಸಣೆಗೆ ಆಸ್ಪತ್ರೆಗೆ ತಂದ ಆರೋಪಿ ಪೊಲೀಸರನ್ನು ದೂಡಿ ಪರಾರಿ

ಮಂಗಳೂರು : ಸುಳ್ಯದ ಸರಕಾರಿ ಆಸ್ಪತ್ರೆಗೆ ತಪಾಸಣೆಗೆ ಕರೆ ತಂದಿದ್ದ ವೇಳೆ ಆರೋಪಿ ಪೋಲೀಸರ ಕೈಯಿಂದ ತಪ್ಪಿಸಿಕೊಂಡು ಓಡಿ ಹೋಗಿರುವ ಘಟನೆ ನಡೆದಿದೆ.

ಈ ವ್ಯಕ್ತಿಯನ್ನು ಪತ್ತೆ ಹಚ್ಚಲು ಸಹಕರಿಸುವಂತೆ ಪೋಲೀಸರು ಸಾರ್ವಜನಿಕರಲ್ಲಿ ವಿನಂತಿಸಿಕೊಂಡಿದ್ದಾರೆ. ಸುಳ್ಯದ ಸಂಪಾಜೆಯ ಮನೆಯೊಂದರಿಂದ ದರೋಡೆ ನಡೆಸಿದ ಪ್ರಕರಣದಲ್ಲಿ ಆರೋಪಿಯಾಗಿದ್ದು ನ್ಯಾಯಾಲಯಕ್ಕೆ ಹಾಜರಾಗದೆ ತಪ್ಪಿಸಿಕೊಳ್ಳುತ್ತಿದ್ದ ತಮಿಳುನಾಡಿನ ಈ ವ್ಯಕ್ತಿಯನ್ನು ಪೋಲೀಸರು ತಮಿಳುನಾಡಿನಲ್ಲಿ ಹಿಡಿದು ಸುಳ್ಯಕ್ಕೆ ತಂದಿದ್ದರು.

ದರೋಡೆ ಪ್ರಕರಣದಲ್ಲಿ ತಮಿಳುನಾಡು ಮೂಲದ ಕಾರ್ತಿಕ್ (38), ನರಸಿಂಹನ್ (40), ಹಾಸನ ಮೂಲದ ಯದುಕುಮಾರ್ (33), ದೀಕ್ಷಿತ್ (26) ಬಂಧಿತ ಆರೋಪಿಗಳಾಗಿದ್ದರು. ಈ ಪೈಕಿ ಕಾರ್ತಿಕ್ ತಪ್ಪಿಸಿಕೊಂಡಿದ್ದಾನೆ.

ನ್ಯಾಯಾಲಯಕ್ಕೆ ಹಾಜರುಪಡಿಸುವ ಮೊದಲು ಈತನನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಬೇಕಾಗಿರುವುದರಿಂದ ಸಂಜೆ ಸರಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಅಲ್ಲಿ ಒಬ್ಬರು ಪೋಲೀಸ್ ಕಾನ್‌ಸ್ಟೇಬಲ್ ಚೀಟಿ ಮಾಡಿಸುತ್ತಿರುವಾಗ ತನ್ನನ್ನು ಹಿಡಿದುಕೊಂಡಿದ್ದ ಇನ್ನೊಬ್ಬ ಪೋಲೀಸ್ ಕಾನ್‌ಸ್ಟೇಬಲ್‌ರನ್ನು ದೂಡಿ ಹಾಕಿ ಆರೋಪಿ ಓಡಿಹೋಗಿದ್ದಾಬೆ. ತಕ್ಷಣ ಪೋಲೀಸರು ಆತನನ್ನು ಬೆನ್ನಟ್ಟಿದರೂ ಆರೋಪಿ ಓಡಿ ತಪ್ಪಿಸಿಕೊಂಡಿದ್ದಾನೆ. ಸಾರ್ವಜನಿಕರಿಗೆ ಈತನು ಪತ್ತೆಯಾದಲ್ಲಿ ಸುಳ್ಯ ಪೊಲೀಸ್ ಠಾಣೆ 9480805365 ನಂಬರಿಗೆ ಮಾಹಿತಿ ನೀಡುವಂತೆ ಪೊಲೀಸರು ಮನವಿ ಮಾಡಿದ್ದಾರೆ.

Related posts

ನೇಜಾರಿನ ತಾಯಿ ಮತ್ತು ಮೂವರು ಮಕ್ಕಳ ಕೊಲೆ ಪ್ರಕರಣ – ತಮ್ಮ ವಕಾಲತ್ತನ್ನು ವಾಪಾಸು ಪಡೆದ ಆರೋಪಿ ಪ್ರವೀಣ್ ಚೌಗುಲೆ ಪರ ವಕೀಲರು

ಪ್ರೊಡಕ್ಷನ್ ನಂಬರ್ 1 ತುಳು ಸಿನಿಮಾದ ಭಾಗ 1ರ ಮುಹೂರ್ತ ಸಮಾರಂಭ