18 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಉಡುಪಿ : ಕಳೆದ 18 ವರ್ಷಗಳಿಂದ ಅಪರಾಧ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಕೊನೆಗೂ ಬಂಧಿಸಿದ್ದಾರೆ. ಅಬ್ದುಲ್ ಹಮೀದ್ (48) ಬಂಧಿತ ಆರೋಪಿ.

ಉಡುಪಿ ನಗರ ಪೊಲೀಸ್ ಠಾಣೆಯ ಅಪರಾಧ ಕ್ರಮಾಂಕ: 338/2007 ಕಲಂ. 406, 420, 465,471 ಜತೆಗೆ 34 ಐಪಿಸಿ ಪ್ರಕರಣದ LPC No.03/2010 ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಮೂಲತಃ ಚಿಕ್ಕಮಗಳೂರು ಜಿಲ್ಲೆಯವನು. ಉಡುಪಿ ನಗರ ಠಾಣೆಯ ಸಿಬ್ಬಂದಿಗಳಾದ ಸಂಜಯ್ ಹೆಚ್ ಸಿ ಹಾಗೂ ಹೇಮಂತ್ ಕುಮಾರ್ ಎಂ. ಆರೋಪಿಯನ್ನು ಮಂಡ್ಯ ಜಿಲ್ಲೆಯ ತಾವರೆಗೆರೆ ಎಂಬಲ್ಲಿ ಬಂಧಿಸಿ ಉಡುಪಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಆರೋಪಿಯನ್ನು ಫೆಬ್ರವರಿ 25ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿದೆ.

Related posts

ಆಕಸ್ಮಿಕವಾಗಿ ಬೆಂಕಿ – ಗೋಣಿ ಚೀಲ ಗೋದಾಮು ಸುಟ್ಟು ಭಸ್ಮ…!

ಉಡುಪಿಯಿಂದ ಮಹಾಕುಂಭ ಮೇಳಕ್ಕೆ ರೈಲು – ಸಂಸದ ಕೋಟ ಮನವಿ

ಶಿಕ್ಷಣತಜ್ಞ ಸೀತಾರಾಮ ಶೆಟ್ಟಿ ನಿಧನ