ಭಾರೀ ಮಳೆಗೆ ಮನೆ ಮೇಲೆ ಕುಸಿದ ಪೊಲೀಸ್ ವಸತಿ ಗೃಹದ ತಡೆಗೋಡೆ

ಮಂಗಳೂರು : ಕಳೆದ ರಾತ್ರಿಯಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ವಿಟ್ಲ ಪೊಲೀಸ್ ಠಾಣೆಯ ವಸತಿಗೃಹದ ತಡೆಗೋಡೆ ಕುಸಿದ ಘಟನೆ ವಿಟ್ಲದ ಪೊನ್ನೋಟ್ಟು ಎಂಬಲ್ಲಿ ನಡೆದಿದೆ.

ವಿಟ್ಲ ಪೊಲೀಸ್ ಠಾಣೆಯ ಸಿಬ್ಬಂದಿಗಳು ವಾಸವಿರುವ ವಸತಿಗೃಹದ ಹಿಂಬದಿಯಲ್ಲಿದ್ದ ತಡೆಗೋಡೆ ಮತ್ತು ಗುಡ್ಡ ಒಮ್ಮೆಲೇ ಪಕ್ಕದಲ್ಲಿ ವಾಸ ಇರುವ ಆಯಿಷಾ ಪೊನ್ನೋಟ್ಟು ಅವರ ಮನೆಯ ಮೇಲೆ ಬಿದ್ದಿದೆ. ಇದರಿಂದ ಮನೆಗೆ ಹಾನಿಯಾಗಿದೆ. ಇನ್ನಷ್ಟು ಮಣ್ಣು ಕುಸಿಯುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ಪೊಲೀಸ್ ವಸತಿಗೃಹದ ಆವರಣದಲ್ಲಿ ಮುಟ್ಟುಗೋಲು ಹಾಕಲಾದ ವಾಹನಗಳನ್ನು ನಿಲ್ಲಿಸಲಾಗಿದ್ದು, ಅವುಗಳು ಕೂಡಾ ಮನೆ ಮೇಲೆ ಬೀಳುವ ಸಾಧ್ಯತೆಗಳಿವೆ. ಈ ಬಗ್ಗೆ ಈ ಹಿಂದೆಯೇ ಪಟ್ಟಣ ಪಂಚಾಯತ್‌ಗೆ ಆಯಿಷಾ ಅವರು ಮನವಿ ಸಲ್ಲಿಸಿದ್ದರು. ಆದರೆ ಯಾರೂ ಸ್ಪಂದನೆ ನೀಡಿರುವುದಿಲ್ಲ ಎಂದು ಸ್ಥಳೀಯರು ದೂರಿದ್ದಾರೆ.

Related posts

ಮೂಡುಬಿದಿರೆಯಲ್ಲಿ ಲ್ಯಾಪ್‌ ಟಾಪ್‌ ಕಳ್ಳತನ: ಅಂತರ್ ಜಿಲ್ಲಾ ಕಳ್ಳ ಅರೆಸ್ಟ್

ಶಾಸ್ತ್ರೀಪಾರ್ಕ್‌ ಫ್ಲೈಓವರ್‌ ತಳಭಾಗಕ್ಕೆ ಪೊಲೀಸ್‌ ನಿಯೋಜನೆ

ಕಾರು ಕಳವು ಗೈದ ಆರೋಪಿ ಪೊಲೀಸ್ ವಶಕ್ಕೆ