ಮನೆಗೆ ನುಗ್ಗಿ ಸೊತ್ತು ಕಳ್ಳತನಗೈದ ಬಾಲಕ ಬಾಲ ನ್ಯಾಯ ಮಂಡಳಿ ವಶಕ್ಕೆ

ಶಂಕರನಾರಾಯಣ : ಅಂಪಾರು ಎಂಬಲ್ಲಿ ಮನೆಯಲ್ಲಿ ಯಾರೂ ಇಲ್ಲದ ಸಂದರ್ಭ ಮನೆಗೆ ನುಗ್ಗಿ ಸೊತ್ತು ಕಳ್ಳತನ ಮಾಡಿದ್ದ ಬಾಲಕನನ್ನು ಬಾಲ ನ್ಯಾಯ ಮಂಡಳಿಯ ವಶಕ್ಕೆ ಒಪ್ಪಿಸಲಾಗಿದೆ. ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿತ್ತು.

ಪ್ರಕರಣದ ತನಿಖೆ ನಡೆಸಿದ ಶಂಕರನಾರಾಯಣ ಠಾಣೆ ಪಿ.ಎಸ್.ಐ ನಾಸೀರ್ ಹುಸೇನ್ ಮತ್ತು ಶಂಭುಲಿಂಗಯ್ಯ ಹಾಗೂ ಸಿಬ್ಬಂದಿ ಈ ಕಳ್ಳತನ ನಡೆಸಿದ ಪ್ರಕರಣದಲ್ಲಿ ಭಾಗಿಯಾಗಿದ್ದ ಕಾನೂನು ಸಂಘರ್ಷಕ್ಕೆ ಒಳಗಾಗಿದ್ದ ಬಾಲಕನನ್ನು ವಶಕ್ಕೆ ಪಡೆದು ವಿಚಾರಣೆ ಮಾಡಿ ಆತನಿಂದ ಮೊಬೈಲ್ ಪೋನ್‌ಗಳು, ನಗದು ರೂ.2500, ಕಿವಿ ಓಲೆ, ಉಂಗುರ ಸಹಿತ ಒಟ್ಟು ರೂ. 87,890 ಮೌಲ್ಯದ ಸೊತ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಕಾನೂನು ಸಂಘರ್ಷಕ್ಕೆ ಒಳಗಾದ ಬಾಲಕನನ್ನು ಬಾಲ ನ್ಯಾಯ ಮಂಡಳಿ ಮುಂದೆ ಹಾಜರುಪಡಿಸಲಾಗಿದೆ.

Related posts

ಯುವನಿಧಿಯ ಫಲಾನುಭವಿಗಳಿಗೆ ಕೌಶಲ್ಯ ತರಬೇತಿ ನೀಡಿ : ರಮೇಶ್ ಕಾಂಚನ್

ದೆಹಲಿಗೆ ಮಹಿಳಾ ಮುಖ್ಯಮಂತ್ರಿ : ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಸಂಭ್ರಮಾಚರಣೆ

ನಿಲ್ಲಿಸಿದ್ದ ಮೀನುಗಾರಿಕಾ ಬೋಟ್‌ನಲ್ಲಿ ಅಗ್ನಿ ಅವಘಡ – 15 ಲಕ್ಷ ರೂ.ನಷ್ಟ