ಉಡುಪಿಯಲ್ಲಿ ನಾಪತ್ತೆಯಾಗಿದ್ದ ಬಾಲಕ ಕೇರಳದಲ್ಲಿ ಪತ್ತೆ

ಉಡುಪಿ : ಕಡಿಯಾಳಿಯ ಕೋಚಿಂಗ್ ಸೆಂಟರ್‌‌ವೊಂದಕ್ಕೆ ಹೋಗಿದ್ದ ವೇಳೆ ನಾಪತ್ತೆಯಾಗಿದ್ದ ಬ್ರಹ್ಮಾವರ ಹಂದಾಡಿ ಬಾರಕೂರು ರಸ್ತೆಯ ನಿವಾಸಿ ಪ್ರಕಾಶ್ ಎಂಬವರ ಪುತ್ರ ಆರ್ಯ(13) ಇಂದು ಬೆಳಗ್ಗೆ ಕೇರಳದ ಪಾಲ್ಘಾಟ್ ರೈಲ್ವೆ ನಿಲ್ದಾಣದಲ್ಲಿ ಪತ್ತೆಯಾಗಿರುವುದಾಗಿ ವರದಿಯಾಗಿದೆ.

ರವಿವಾರ ಬೆಳಗ್ಗೆ ಉಡುಪಿ ಕಡಿಯಾಳಿಯಲ್ಲಿರುವ ಕೋಚಿಂಗ್ ಇನ್‌ಸ್ಟಿಟ್ಯೂಟ್‌ಗೆಂದು ಹೋಗಿದ್ದ ಎಂಟನೇ ತರಗತಿಯ ವಿದ್ಯಾರ್ಥಿ ಆರ್ಯ, ಮನೆಗೆ ಹಿಂದಿರುಗದೆ ನಾಪತ್ತೆಯಾಗಿದ್ದ. ಈ ಬಗ್ಗೆ ಉಡುಪಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ತನಿಖೆ ನಡೆಸಿದ ಪೊಲೀಸರು ಸಿಸಿಟಿವಿ ಕ್ಯಾಮರಾ ಪರಿಶೀಲಿಸಿದಾಗ ಆರ್ಯ, ಇಂದ್ರಾಳಿ ರೈಲು ನಿಲ್ದಾಣದಿಂದ ರೈಲಿನ ಮೂಲಕ ಕೇರಳದ ಕಡೆ ತೆರಳಿರುವುದು ಕಂಡುಬಂತು. ಅತ್ತ ಟಿಕೆಟ್ ಇಲ್ಲದೆ ಪ್ರಯಾಣಿಸಿದ ಆರ್ಯನನ್ನು ಪಾಲ್ಘಾಟ್ ರೈಲ್ವೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎನ್ನಲಾಗಿದೆ. ಈ ಮಾಹಿತಿ ತಿಳಿದ ಉಡುಪಿ ಪೊಲೀಸರು ಪಾಲ್ಘಾಟ್‌ಗೆ ತೆರಳಿದ್ದಾರೆಂದು ತಿಳಿದುಬಂದಿದೆ.

Related posts

ಅಲೈನ್ಸ್ ಕ್ಲಬ್ ಉಡುಪಿಯಿಂದ ವೈದ್ಯರ ದಿನಾಚರಣೆ : ಪ್ರಸಿದ್ಧ ವೈದ್ಯ ಡಾ.ಆರ್.ಎನ್.ಭಟ್ ಅವರಿಗೆ ಸನ್ಮಾನ

ಶತಾವಧಾನಿ ಡಾ. ಆರ್. ಗಣೇಶ್ ಅವರಿಗೆ ತಲ್ಲೂರು ಕನಕ ಅಣ್ಣಯ್ಯ ಶೆಟ್ಟಿ ಪ್ರಶಸ್ತಿ ಪ್ರದಾನ

ರಂಗೋಲಿ ಕಲಾ ಸಾಧಕಿ, ಭಾರತಿ ಮರವಂತೆಗೆ ‘ಮಧುರಚೆನ್ನ ರಾಜ್ಯ ಪ್ರಶಸ್ತಿ’ ಪ್ರದಾನ