ಮದರಂಗಿಯಂದೇ ಓಡಿ ಹೋದ ಮದುಮಗ – ಮದುವೆ ರದ್ದು

ಉಪ್ಪುಂದ : ಮದುಮಗ ಓಡಿ ಹೋದ ಕಾರಣ ಸೋಮವಾರ ನಡೆಯಬೇಕಿದ್ದ ಮದುವೆ ರದ್ದಾದ ಘಟನೆ ಬೆಳಕಿಗೆ ಬಂದಿದೆ.
ಅಳಿವೆಕೋಡಿ ಗ್ರಾಮದ ವ್ಯಕ್ತಿಯೊಂದಿಗೆ ಉಪ್ಪುಂದ ಗ್ರಾಮದ ಯುವತಿಯ ಮದುವೆ ಸೋಮವಾರ ನಾಗೂರಿನಲ್ಲಿ ನಿಶ್ಚಯವಾಗಿತ್ತು. ಹುಡುಗ ಖಾಸಗಿ ಸಂಸ್ಥೆಯಲ್ಲಿ ಕೆಲಸದಲ್ಲಿದ್ದ. ಈ ಹಿಂದೆ ಎರಡು ಕಡೆಯ ಮನೆಯವರು ಸೇರಿ ಮದುವೆ ನಿಶ್ಚಯಿಸಿದ್ದರು.

ಆ.18 ರಂದು ಹುಡುಗನ ಮನೆಯಲ್ಲಿ ಮೆಹಂದಿ ಕಾರ್ಯಕ್ರಮ ನಡೆಸಲು ಸಿದ್ಧತೆ ನಡೆದಿತ್ತು. ಮದುಮಗ ಆ.18ರಂದು ಮದುವೆಗೆ ಅಗತ್ಯವಿರುವ ಚಿನ್ನಾಭರಣಗಳನ್ನು ಅಂಗಡಿಯಿಂದ ಪಡೆದು, ಚಿನ್ನಾಭರಣಗಳನ್ನು ಮನೆಯಲ್ಲಿಟ್ಟು ಕೆಲವು ವಸ್ತುಗಳನ್ನು ತರಲು ಇದೆ ಎಂದು ಮನೆಯವರಲ್ಲಿ ಹೇಳಿ, ಮೊಬೈಲ್, ಕೈಯಲ್ಲಿದ್ದ ಚಿನ್ನದ ಬ್ರಾಸ್‌ಲೇಟ್ ಅನ್ನು ಮನೆಯಲ್ಲೇ ಬಿಟ್ಟು ಹೋಗಿದ್ದಾನೆ. ಮೆಹಂದಿಯ ಸಂಭ್ರಮದಲ್ಲಿ ಇದ್ದ ಮನೆಯವರು ಹುಡುಗ ಮನೆಗೆ ಬಾರದೆ ಇರುವುದರಿಂದ ಗಾಬರಿಯಿಂದ ಹುಡುಕಾಟದಲ್ಲಿ ತೊಡಗಿದರು. ಹುಡುಗ ನಾಪತ್ತೆ ವಿಷಯ ತಿಳಿದು ಅತಿಥಿಗಳೆಲ್ಲರೂ ವಾಪಸು ತೆರಳಿದ್ದಾರೆ.

Related posts

40 ಮರಾಠ ವಟುಗಳಿಗೆ ಸಾಮೂಹಿಕ ಬ್ರಹ್ಮೋಪದೇಶ

ವ್ಯಾಸರಾಜ ಶ್ರೀಗಳಿಂದ ಸಂಸ್ಥಾನ ಪೂಜೆ

ಮೀನು ವ್ಯಾಪಾರಿಗೆ 90 ಲಕ್ಷ ರೂ.ವಂಚನೆ – ದೂರು ದಾಖಲು