ಚಾಲಕನ ನಿಯಂತ್ರಣ ತಪ್ಪಿ ಗದ್ದೆಗೆ ಬಿದ್ದ ಬಸ್

ಬಂಟ್ವಾಳ : ಚಾಲಕನ ನಿಯಂತ್ರಣ ತಪ್ಪಿದ ಬಸ್ಸೊಂದು ಗದ್ದೆಗೆ ಬಿದ್ದ ಘಟನೆ ಬಂಟ್ವಾಳ ತಾಲೂಕಿನ ಮಣಿನಾಲ್ಕೂರು ಗ್ರಾಮದ ಕೊಟ್ಟುಂಜದಲ್ಲಿ ನಡೆದಿದೆ.

ಸರಪಾಡಿ- ಬಿ.ಸಿ.ರೋಡು ನಡುವೆ ಸಂಚರಿಸುವ ಖಾಸಗಿ ಬಸ್ಸು ಕೊಟ್ಟುಂಜಕ್ಕೆ ಬರುತ್ತಿದ್ದಂತೆ ವಿಪರೀತ ಮಳೆ ಸುರಿಯುತ್ತಿತ್ತು. ಪರಿಣಾಮ ಚಾಲಕನಿಗೆ ರಸ್ತೆ ಕಾಣಿಸದೆ ನಿಯಂತ್ರಣ ತಪ್ಪಿದ ಬಸ್ ನೇಜಿ ನಾಟಿ ಮಾಡಿದ್ದ ಗದ್ದೆಗೆ ಬಿದ್ದಿದೆ.

ಬಸ್‌ನಲ್ಲಿದ್ದ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಆದರೆ ಬಸ್ ಬಿದ್ದು ಭತ್ತದ ಕೃಷಿಗೂ ಹಾನಿಯಾಗಿದೆ.

Related posts

ಮಂಗಳೂರಿನಲ್ಲಿ ಸರ್ವೆ ಇಲಾಖೆಯ ಅಧಿಕಾರಿ ಮನೆ ಹಾಗೂ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳ ದಾಳಿ

ಕೇರಳದಿಂದ ಕೊಲ್ಲೂರಿಗೆ ಹೊರಟಿದ್ದ ಟಿಟಿ ವಾಹನ ಪಲ್ಟಿ – ಹಲವರಿಗೆ ಗಾಯ

ತೆಕ್ಕಟ್ಟೆಯಲ್ಲಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಯತ್ನ – ತಂದೆ, ಮಗ ಸಾವು; ತಾಯಿ ಸ್ಥಿತಿ ಗಂಭೀರ