ಚಾಲಕನ ನಿಯಂತ್ರಣ ತಪ್ಪಿ ತೋಡಿಗೆ ಬಿದ್ದ ಬಸ್; ವಿದ್ಯಾರ್ಥಿಗಳಿಗೆ ಗಾಯ

ಉಡುಪಿ : ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ಸೊಂದು ಚರಂಡಿಗಿಳಿದ ಪರಿಣಾಮ ಹಲವು ವಿದ್ಯಾರ್ಥಿಗಳು ಗಾಯಗೊಂಡ ಘಟನೆ ಕೊಲ್ಲೂರು ಸಮೀಪದ ದಳಿಮುರ್ಕ್ಕು ಬಳಿ ಇಂದು ಬೆಳಿಗ್ಗೆ ಘಟನೆ ನಡೆದಿದೆ.

ಬಸ್ ಶಿವಮೊಗ್ಗ ಕಡೆಯಿಂದ ಬೈಂದೂರು ಕಡೆಗೆ ಪ್ರಯಾಣಿಸುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ. ಈ ಕುರಿತು ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಸ್ಸಿನಲ್ಲಿ ಕೊಲ್ಲೂರು ಮೂಕಾಂಬಿಕ ಹೈಸ್ಕೂಲ್‌ನ 6 ವಿದ್ಯಾರ್ಥಿಗಳು ಹಾಗೂ ಪಿಯುಸಿಯ 11 ವಿದ್ಯಾರ್ಥಿಗಳಿಗೆ ಗಾಯಗಳಾಗಿದ್ದು, ಕುಂದಾಪುರ ತಾಲೂಕು ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿದ್ದಾರೆ. ಈ ಪೈಕಿ ಐವರು ವಿದ್ಯಾರ್ಥಿಗಳಿಗೆ ಗಂಭೀರ ಗಾಯವಾಗಿದೆ.

ಘಟನಾ ಸ್ಥಳಕ್ಕೆ ಉಡುಪಿ ಜಿಲ್ಲಾ ಹೆಚ್ಚುವರಿ ಎಸ್ಪಿ ಎಸ್.ಟಿ. ಸಿದ್ದಲಿಂಗಪ್ಪ, ಕೊಲ್ಲೂರು ಠಾಣೆಯ ಪಿಎಸ್‌ಐಗಳಾದ ವಿನಯ್ ಎಂ. ಕೊರ್ಲಹಳ್ಳಿ, ಸುಧಾರಾಣಿ ಹಾಗೂ ಸಿಬ್ಬಂದಿಗಳು ಭೇಟಿ ನೀಡಿದ್ದಾರೆ.

ಬೈಂದೂರು ಬಿಇಒ ನಾಗೇಶ್ ನಾಯಕ್ ಹಾಗೂ ಹೆಚ್ಚುವರಿ ಎಸ್ಪಿ ಶಾಲೆಗೆ ಭೇಟಿ ನೀಡಿ ವಿದ್ಯಾರ್ಥಿಗಳಿಗೆ ಧೈರ್ಯ ತುಂಬಿದ್ದಾರೆ.

Related posts

ನೆಕ್ಲಾಜೆ ಶ್ರೀ ಕಾಳಿಕಾಂಬೆಗೆ ಸ್ವರ್ಣ ಪಾದುಕೆ ಸಮರ್ಪಣೆ

ಮೂಡುಬಿದಿರೆಯಲ್ಲಿ ಲ್ಯಾಪ್‌ ಟಾಪ್‌ ಕಳ್ಳತನ: ಅಂತರ್ ಜಿಲ್ಲಾ ಕಳ್ಳ ಅರೆಸ್ಟ್

ಶಾಸ್ತ್ರೀಪಾರ್ಕ್‌ ಫ್ಲೈಓವರ್‌ ತಳಭಾಗಕ್ಕೆ ಪೊಲೀಸ್‌ ನಿಯೋಜನೆ