ಡಾ.ಅರುಣ್ ಉಳ್ಳಾಲ ವಿರುದ್ಧ ಕೇಸು ದಾಖಲಿಸಿದ್ದು ಖಂಡನೀಯ – ರಮಿತಾ ಶೈಲೇಂದ್ರ

ಉಡುಪಿ : ಸಾಮಾಜಿಕ ಧಾರ್ಮಿಕ ಸಾಂಸ್ಕೃತಿಕ ಚಟುವಟಿಕೆಗಳನ್ನು ನಡೆಸುವ ಮೂಲಕ ಸಮಾಜದಲ್ಲಿ ಶಾಂತಿ ನೆಮ್ಮದಿಯ ಜತೆಗೆ ಧರ್ಮ ಶಿಕ್ಷಣದ ಮೂಲಕ ಮಕ್ಕಳಲ್ಲಿ ಜಾಗೃತಿ ಮೂಡಿಸುತ್ತಿರುವ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಡಾ| ಅರುಣ್‌ ಉಳ್ಳಾಲ ಅವರ ವಿರುದ್ಧ ಸುಮೊಟೊ ಪ್ರಕರಣ ದಾಖಲಿಸಿರುವುದು ಖಂಡನೀಯ.

ಉಳ್ಳಾಲ ತಾಲೂಕಿನ ಕಿನ್ಯ ಬೆಳರಿಂಗೆಯ ಕೇಶವ ಶಿಶುಮಂದಿರದಲ್ಲಿ ನವದಂಪತಿಗಳ ಸಮಾವೇಶದಲ್ಲಿ ಹಿಂದೂ ವಿಚಾರ ಪದ್ಧತಿಗಳ ಮತ್ತು ಕೌಟುಂಬಿಕ ಸಂಗತಿಗಳ ಬಗ್ಗೆ ಬೋಧನೆ ಮಾಡುತ್ತ, ಹಿಂದೂ ಸಮಾಜದ ಮಕ್ಕಳು ಹಿಂದೂ ಸಂಸ್ಕೃತಿಯ ಸಂಸ್ಕಾರ ನೀಡುವ ಶಾಲೆಗಳಿಗೆ ಹೋದರೆ ಒಳ್ಳೆಯದು ಎನ್ನುವ ಅಭಿಪ್ರಾಯ ವ್ಯಕ್ತಪಡಿಸುವುದನ್ನು ನೆಪ ಮಾಡಿಕೊಂಡು ಅವರ ಮೇಲೆ ಕೇಸು ದಾಖಲಿಸಲಾಗಿದೆ. ಹಿಂದೂ ಸಂಸ್ಕೃತಿ ಬಗ್ಗೆ ಮಾತನಾಡಿದ ಉಪನ್ಯಾಸಕರ ಮೇಲೆ ಕೇಸು ದಾಖಲು ಮಾಡುವ ಮೂಲಕ, ಸರಕಾರ ಕೂಡ ಸಮಾಜದಲ್ಲಿ ಅಶಾಂತಿ, ಅಸಮಾನತೆಗೆ ಪ್ರೋತ್ಸಾಹಿಸುವವರ ಪರ ನಿಂತಿರುವುದು ಇದರಿಂದ ಸ್ಪಷ್ಟವಾಗಿದೆ, ದಾಖಲಿಸಿಕೊಂಡ ಕೇಸ್‌ ಅನ್ನು ತಕ್ಷಣವೇ ವಾಪಸ್ ತೆಗೆದುಕೊಳ್ಳಬೇಕು.
ಮಂಗಳೂರು ಪೊಲೀಸರು ಸ್ವಯಂ ಪ್ರೇರಿತ ಕೇಸನ್ನು ದಾಖಲಿಸುವ ಮೂಲಕ ರಾಜ್ಯ ಸರಕಾರಕ್ಕೆ ಖುಷಿ ಪಡಿಸುವ ಉದ್ದೇಶ ಹೊಂದಿದೆ. ಈ ಹಿಂದೆ ವಿಧಾನ ಪರಿಷತ್ ಶಾಸಕ ಐವನ್ ಡಿಸೋಜ ರಾಜ್ಯಪಾಲರನ್ನು ಬಾಂಗ್ಲಾ ಮಾದರಿಯಲ್ಲಿ ಓಡಿಸುತ್ತೇವೆ, ರಾಜ‌ಭವನಕ್ಕೆ ನುಗ್ಗುತ್ತೇವೆ ಎಂದು ಹೇಳಿಕೆ ಕೊಟ್ಟರೂ ಅವರ ಮೇಲೆ ಪ್ರಕರಣ ದಾಖಲಿಸಿಕೊಳ್ಳದೆ, ಈಗ ಹಿಂದೂ ಧರ್ಮದ ಬಗ್ಗೆ ಮಾತನಾಡುವವರ ಬಗ್ಗೆ ಕೇಸು ದಾಖಲಿಸಲು ತೋರಿಸುವ ಆಸಕ್ತಿ, ಹಿಂದೂಗಳನ್ನು ಗುರಿಯಾಗಿಸಿಕೊಂಡು ನಿರಂತರ ಕೇಸು ದಾಖಲಿಸುತ್ತಿರುವ ಹಿಂದೂ ವಿರೋಧಿ ರಾಜ್ಯ ಸರ್ಕಾರಕ್ಕೆ ನನ್ನ ದಿಕ್ಕಾರವಿದೆ. ಡಾ ಅರುಣ್ ಉಳ್ಳಾಲ ಅವರ ಮೇಲೆ ಕೇಸು ದಾಖಲಿಸಿದನ್ನು ಬಲವಾಗಿ ಖಂಡಿಸುತ್ತೇನೆ ಎಂದು ಸಾಮಾಜಿಕ ಕಾರ್ಯಕರ್ತೆ ರಮಿತಾ ಶೈಲೇಂದ್ರ ಕಾರ್ಕಳ ಅವರು ತಿಳಿಸಿದ್ದಾರೆ.

Related posts

ಅಲೈನ್ಸ್ ಕ್ಲಬ್ ಉಡುಪಿಯಿಂದ ವೈದ್ಯರ ದಿನಾಚರಣೆ : ಪ್ರಸಿದ್ಧ ವೈದ್ಯ ಡಾ.ಆರ್.ಎನ್.ಭಟ್ ಅವರಿಗೆ ಸನ್ಮಾನ

ಶತಾವಧಾನಿ ಡಾ. ಆರ್. ಗಣೇಶ್ ಅವರಿಗೆ ತಲ್ಲೂರು ಕನಕ ಅಣ್ಣಯ್ಯ ಶೆಟ್ಟಿ ಪ್ರಶಸ್ತಿ ಪ್ರದಾನ

ರಂಗೋಲಿ ಕಲಾ ಸಾಧಕಿ, ಭಾರತಿ ಮರವಂತೆಗೆ ‘ಮಧುರಚೆನ್ನ ರಾಜ್ಯ ಪ್ರಶಸ್ತಿ’ ಪ್ರದಾನ