ದಂಪತಿ ಆತ್ಮಹತ್ಯೆಗೆ ಶರಣು

ಬೆಳ್ತಂಗಡಿ : ತಾಲೂಕಿನ ಕಾಶಿಪಟ್ಣ ಗ್ರಾಮದಲ್ಲಿ ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗುರುವಾರ ರಾತ್ರಿ ಸಂಭವಿಸಿದೆ.

ಕಾಶಿಪಟ್ಣ ಗ್ರಾಮ ನಿವಾಸಿಗಳಾದ ನೊಣಯ್ಯ ಪೂಜಾರಿ(63) ಹಾಗೂ ಅವರ ಪತ್ನಿ ಬೇಬಿ (46) ಆತ್ಮಹತ್ಯೆ ಮಾಡಿಕೊಂಡ ದಂಪತಿ.

ದಂಪತಿ ಮನೆಯ ಸಮೀಪದ ಕಾಡಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ. ನೊಣಯ್ಯ ಪೂಜಾರಿಯವರು ಕಳೆದ ಐದು ವರ್ಷಗಳಿಂದ ತಲೆನೋವಿನಿಂದ ಬಳಲುತ್ತಿದ್ದರು. ಪತ್ನಿ ಬೇಬಿ ಮಕ್ಕಳಿಲ್ಲದ ಕೊರಗಲ್ಲಿದ್ದರು. ಇದುವೇ ಆತ್ಮಹತ್ಯೆಗೆ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ.

ನೋಣಯ್ಯ ಪೂಜಾರಿಯವರಿಗೆ ಇದು 2ನೇ ಮದುವೆಯಾಗಿದೆ. ಅವರ ಮೊದಲ ಪತ್ನಿ 10ವರ್ಷದ ಹಿಂದೆ ಮೃತಪಟ್ಟಿದ್ದರು. ಕೆಲವು ವರ್ಷಗಳ ಹಿಂದೆ ಅವರು ಬೇಬಿಯವರನ್ನು 2ನೇ ವಿವಾಹವಾಗಿದ್ದರು. ಮೊದಲನೇ ಪತ್ನಿಗೆ ಐವರು ಪುತ್ರರು, ಓರ್ವ ಪುತ್ರಿ ಇದ್ದಾರೆ. ಈ ಬಗ್ಗೆ ವೇಣೂರು ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Related posts

ಕರ್ನಾಟಕ ಕ್ರೀಡಾಕೂಟದಲ್ಲಿ ಸಮರಾಗೆ ಚಿನ್ನದ ಪದಕ

ಮಾರಿದ ಹಳೆಯ ಬಸ್ಸನ್ನು ಕದ್ದು ತಂದ ಆರೋಪ – ತಂದೆ ಮಗನ ವಿರುದ್ಧ ದೂರು ದಾಖಲು !

ತಾಯಿ ಹಾಗೂ ಇಬ್ಬರು ಮಕ್ಕಳು ನಾಪತ್ತೆ