ನಾಪತ್ತೆಯಾಗಿದ್ದ ವ್ಯಕ್ತಿಯ ಮೃತ ದೇಹ ನದಿಯಲ್ಲಿ ಪತ್ತೆ

ಉಡುಪಿ : ಮನೆಯಿಂದ ನಾಪತ್ತೆಯಾಗಿದ್ದ ಯುವಕನ ಮೃತದೇಹವು ಕಲ್ಯಾಣಪುರದ ಸ್ವರ್ಣ ನದಿಯಲ್ಲಿ ಪತ್ತೆಯಾದ ಘಟನೆ ಸಂಭವಿಸಿದೆ.

ಮೃತ ವ್ಯಕ್ತಿ ಸುಮನೇಶ್ ಹೆಗ್ಡೆ (42) ಮಧ್ವನಗರ ಮೂಡಬೆಟ್ಟು ನಿವಾಸಿಯಾಗಿದ್ದಾರೆ. ವಿವಾಹಿತರಾಗಿದ್ದು, ಖಾಸಗಿ ಬಸ್ಸಿನಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ಮನೆಯಿಂದ ಕಳೆದ ಮೂರು ದಿನಗಳಿಂದ ಕಾಣೆಯಾಗಿದ್ದರೆಂದು ತಿಳಿದುಬಂದಿದೆ. ಇವರು ಆತ್ಮಹತ್ಯೆಗೈದಿರುವ ಶಂಕೆ ವ್ಯಕ್ತವಾಗಿದೆ. ಬ್ರಹ್ಮಾವರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

ಇವರು ಮೃತದೇಹವು ನದಿಯಲ್ಲಿ ತೇಲಿ ಬರುತ್ತಿರುವುದನ್ನು ಗಮನಿಸಿದ ಮಾಜಿ ನಗರಸಭೆ ಸದಸ್ಯ ಚಿನ್ಮಯಮೂರ್ತಿ ಮತ್ತು ಅವರ ತಂಡವು ಶವವನ್ನು ದಡಕ್ಕೆ ಸೇರಿಸಿತು.

Related posts

ಅಲೈನ್ಸ್ ಕ್ಲಬ್ ಉಡುಪಿಯಿಂದ ವೈದ್ಯರ ದಿನಾಚರಣೆ : ಪ್ರಸಿದ್ಧ ವೈದ್ಯ ಡಾ.ಆರ್.ಎನ್.ಭಟ್ ಅವರಿಗೆ ಸನ್ಮಾನ

ಶತಾವಧಾನಿ ಡಾ. ಆರ್. ಗಣೇಶ್ ಅವರಿಗೆ ತಲ್ಲೂರು ಕನಕ ಅಣ್ಣಯ್ಯ ಶೆಟ್ಟಿ ಪ್ರಶಸ್ತಿ ಪ್ರದಾನ

ರಂಗೋಲಿ ಕಲಾ ಸಾಧಕಿ, ಭಾರತಿ ಮರವಂತೆಗೆ ‘ಮಧುರಚೆನ್ನ ರಾಜ್ಯ ಪ್ರಶಸ್ತಿ’ ಪ್ರದಾನ