ಕಾಂತಮಂಗಲ ಶಾಲಾ ಜಗಲಿಯಲ್ಲಿ ಕೊಲೆಗೈದ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ

ಸುಳ್ಯ : ಯುವಕ‌ನೋರ್ವನ ಮೃತದೇಹ ಕೊಲೆಗೈದ ಸ್ಥಿತಿಯಲ್ಲಿ ಸುಳ್ಯ ಸಮೀಪದ ಶಾಲಾ ಜಗಲಿಯಲ್ಲಿ ಸೋಮವಾರ ಬೆಳಗ್ಗೆ ಪತ್ತೆಯಾಗಿದೆ.

ಸುಳ್ಯ ತಾಲೂಕಿನ ಅಜ್ಜಾವರ ಗ್ರಾಮದ ಕಾಂತಮಂಗಲ ಸರಕಾರಿ ಶಾಲಾ ಜಗಲಿಯಲ್ಲಿ ಯುವಕನ ಮೃತದೇಹ ಪತ್ತೆಯಾಗಿದೆ. ತಲೆಗೆ ಕಲ್ಲು ಎತ್ತಿ ಹಾಕಿ ಕೊಲೆಗೈದಿರುವುದು ಕಂಡುಬಂದಿದೆ. ಸುಮಾರು 25 – 30 ವರ್ಷದ ಅಪರಿಚಿತ ಯುವಕನ ಶವ ಎಂದು ಅಂದಾಜಿಸಲಾಗಿದೆ. ಸುಳ್ಯ ವೃತ್ತ ನಿರೀಕ್ಷಕ ಸತ್ಯನಾರಾಯಣ, ಸೇರಿದಂತೆ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿಗಳು ಘಟನಾ ಸ್ಥಳದಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ. ಕಳೆದ ರವಿವಾರ ಬೆಳ್ಳಾರೆ ಠಾಣಾ ವ್ಯಾಪ್ತಿಯಲ್ಲಿ ಮಹಿಳೆಯ ಕೊಲೆ ನಡೆದಿತ್ತು. ಇದು ಕೂಡ ತಲೆಗೆ ಕಲ್ಲು ಎತ್ತಿ ಹಾಕಿ ಕೃತ್ಯ ಎಸಗಲಾಗಿತ್ತು. ಆರೋಪಿಯ ಬಂಧನ ನಡೆದಿತ್ತು.

Related posts

ಮೂಡುಬಿದಿರೆಯಲ್ಲಿ ಲ್ಯಾಪ್‌ ಟಾಪ್‌ ಕಳ್ಳತನ: ಅಂತರ್ ಜಿಲ್ಲಾ ಕಳ್ಳ ಅರೆಸ್ಟ್

ಶಾಸ್ತ್ರೀಪಾರ್ಕ್‌ ಫ್ಲೈಓವರ್‌ ತಳಭಾಗಕ್ಕೆ ಪೊಲೀಸ್‌ ನಿಯೋಜನೆ

ಕಾರು ಕಳವು ಗೈದ ಆರೋಪಿ ಪೊಲೀಸ್ ವಶಕ್ಕೆ