ಚಲಿಸುತ್ತಿದ್ದ ಶಾಲಾ ಬಸ್‌ನಲ್ಲೇ ಹೃದಯಾಘಾತವಾಗಿದ್ದ ಚಾಲಕ‌ ಮೃತ್ಯು

ಉಡುಪಿ : ಚಲಿಸುತ್ತಿದ್ದ ಶಾಲಾ ಬಸ್‌ನಲ್ಲೇ ಹೃದಯಾಘಾತವಾಗಿ ಆಸ್ಪತ್ರೆಗೆ ದಾಖಲಾಗಿದ್ದ ಖಾಸಗಿ ಶಾಲಾ ಬಸ್ ಚಾಲಕ ಇಂದು ಮುಂಜಾನೆ ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ.

ಮೃತ ಶಾಲಾ ಬಸ್ ಚಾಲಕನನ್ನು ಪೇತ್ರಿ ನಿವಾಸಿ ಆಲ್ವಿನ್‌ ಡಿ’ಸೋಜಾ (53) ಎಂದು ಗುರುತಿಸಲಾಗಿದೆ.

ಆಲ್ವಿನ್‌ ಡಿ’ಸೋಜಾ ಬ್ರಹ್ಮಾವರದ ಖಾಸಗಿ ಶಾಲೆಯಿಂದ ಪೆರಂಪಳ್ಳಿ ಮಾರ್ಗವಾಗಿ ಮಣಿಪಾಲದತ್ತ ವಿದ್ಯಾರ್ಥಿಗಳನ್ನು ಕರೆದುಕೊಂಡು ಹೋಗುತ್ತಿದ್ದರು. ಈ ವೇಳೆ ಅವರಿಗೆ ಲಘು ಹೃದಯಾಘಾತವಾಗಿತ್ತು. ಅವರು ಇಂದು ಕೆಎಂಸಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

Related posts

ನೆಕ್ಲಾಜೆ ಶ್ರೀ ಕಾಳಿಕಾಂಬೆಗೆ ಸ್ವರ್ಣ ಪಾದುಕೆ ಸಮರ್ಪಣೆ

ಶಾಸ್ತ್ರೀಪಾರ್ಕ್‌ ಫ್ಲೈಓವರ್‌ ತಳಭಾಗಕ್ಕೆ ಪೊಲೀಸ್‌ ನಿಯೋಜನೆ

ಕಾರು ಕಳವು ಗೈದ ಆರೋಪಿ ಪೊಲೀಸ್ ವಶಕ್ಕೆ