ಲಾರಿ ಚಲಾಯಿಸುತ್ತಿದ್ದಾಗಲೇ ಹೃದಯಾಘಾತವಾಗಿ ಚಾಲಕ ಸಾವು

ಸಿದ್ದಾಪುರ : ಕಲ್ಲಿದ್ದಲು ತುಂಬಿಸಿಕೊಂಡು, ಬಳ್ಳಾರಿ ಕಡೆಗೆ ಹೋಗುತ್ತಿದ್ದ ಲಾರಿಯ ಚಾಲಕನೊಬ್ಬ ಅಂಪಾರು ಗ್ರಾಮದ ನೆಲ್ಲಿಕಟ್ಟೆ ಬಳಿ ಚಾಲನೆಯಲ್ಲಿಯೇ ಮೃತಪಟ್ಟ ಘಟನೆ ಸಂಭವಿಸಿದೆ.

ಲಾರಿ ಚಾಲಕ ವಿಶಾಂತ್‌(29) ಮೃತಪಟ್ಟ ದುದೈವಿಯಾಗಿದ್ದಾರೆ. ಲಾರಿಯು ಮಂಗಳೂರಿನ ಇರ್ಪಾನ್‌ ಎಂಬುವವರ ಮಾಲಿಕತ್ವದ ಲಾರಿಯನ್ನು ವಿಶಾಂತ್‌ ಅವರು ಚಲಾಯಿಸುತ್ತಿದ್ದು, ಅಂಪಾರು ಗ್ರಾಮದ ನೆಲ್ಲಿಕಟ್ಟೆ ಬಳಿ ಎದೆ ನೋವು ಕಾಣಿಸಿಕೊಂಡಿತ್ತು. ಕೂಡಲೆ 108 ವಾಹನದ ಮೂಲಕ ಕುಂದಾಪುರ ತಾಲೂಕು ಸರಕಾರಿ ಆಸ್ಪತ್ರೆಗೆ ಕರೆಕೊಂಡು ಹೋಗಿದ್ದು, ಪರೀಕ್ಷಿಸಿದ ವೈದ್ಯರು ಮೃತಪಟ್ಟಿದ್ದಾರೆ ಎಂದು ತಿಳಿಸಿದರು.

ಸಹೋದರ ನವಿನ್‌ (27) ಅವರು ಪೊಲೀಸರಿಗೆ ದೂರು ನೀಡಿದರು. ಶಂಕರನಾರಾಯಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ನೆಕ್ಲಾಜೆ ಶ್ರೀ ಕಾಳಿಕಾಂಬೆಗೆ ಸ್ವರ್ಣ ಪಾದುಕೆ ಸಮರ್ಪಣೆ

ಮೂಡುಬಿದಿರೆಯಲ್ಲಿ ಲ್ಯಾಪ್‌ ಟಾಪ್‌ ಕಳ್ಳತನ: ಅಂತರ್ ಜಿಲ್ಲಾ ಕಳ್ಳ ಅರೆಸ್ಟ್

ಶಾಸ್ತ್ರೀಪಾರ್ಕ್‌ ಫ್ಲೈಓವರ್‌ ತಳಭಾಗಕ್ಕೆ ಪೊಲೀಸ್‌ ನಿಯೋಜನೆ