ಚಲಿಸುತ್ತಿದ್ದ ಬಸ್‌ನಲ್ಲೇ ಮೂರ್ಛೆಹೋದ ಚಾಲಕ; ಕೂದಲೆಳೆಯ ಅಂತರದಲ್ಲಿ ಅಪಾಯದಿಂದ ಪಾರಾದ ಪ್ರಯಾಣಿಕರು

ಉಡುಪಿ : ಚಾಲಕನೋರ್ವ ಮೂರ್ಛೆಹೋದ ಪರಿಣಾಮ ಸಿಟಿ ಬಸ್‌ವೊಂದು ಹಿಂಮುಖವಾಗಿ ಚಲಿಸಿ ರಸ್ತೆ ಬದಿಯ ಕಂದಕಕ್ಕೆ ಬಿದ್ದ ಘಟನೆ ಉಡುಪಿಯ ಕೆಳಪರ್ಕಳದ ಬಳಿ ನಿನ್ನೆ ಸಂಜೆ ವೇಳೆ ಸಂಭವಿಸಿದೆ.

ಎಚ್‌ಎಂಟಿ ಸಿಟಿ ಬಸ್ ಪರ್ಕಳದಿಂದ ಮಣಿಪಾಲದ ಕಡೆಗೆ ಪ್ರಯಾಣಿಕರನ್ನು ಕೊಂಡೊಯ್ಯುತ್ತಿತ್ತು. ಬಸ್ ಕೆಳಪರ್ಕಳದ ಏರಿನಲ್ಲಿ ಬರುತ್ತಿದ್ದಂತೆ ಚಾಲಕ ಕೃಷ್ಣ ಎಂಬವರಿಗೆ ಹಠಾತ್ ಆಗಿ ಫಿಟ್ಸ್ ಬಂದಿದೆ. ಇದರಿಂದ ಏಕಾಏಕಿಯಾಗಿ ಬಸ್ ಹಿಂದಕ್ಕೆ ಚಲಿಸಿ ಕಂದಕಕ್ಕೆ ನುಗ್ಗಿದೆ.

ಕೆಲವು ಪ್ರಯಾಣಿಕರು ಬಸ್ ನಿಂದ ಜಿಗಿದು ತಮ್ಮ ಪ್ರಾಣವನ್ನು ರಕ್ಷಿಸಿಕೊಂಡರು. ಅದೃಷ್ಟವಶಾತ್ ಭಾರೀ ಅನಾಹುತವೊಂದು ಕೂದಲೆಳೆಯ ಅಂತರದಲ್ಲಿ ತಪ್ಪಿದೆ. ಚಾಲಕ ಕೃಷ್ಣ‌ ಅವರನ್ನು ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ.

Related posts

ರಂಗೋಲಿ ಕಲಾ ಸಾಧಕಿ, ಭಾರತಿ ಮರವಂತೆಗೆ ‘ಮಧುರಚೆನ್ನ ರಾಜ್ಯ ಪ್ರಶಸ್ತಿ’ ಪ್ರದಾನ

ಮೂಡಲಪಾಯ ಯಕ್ಷಗಾನದ ಅಭ್ಯುದಯವನ್ನು ಬೆಂಬಲಿಸಲು ಅಕಾಡೆಮಿ ಬದ್ಧವಾಗಿದೆ : ಡಾ. ತಲ್ಲೂರು

ಕರವೇ ಕಾಪು ತಾಲೂಕು ಘಟಕದ ನೂತನ ಪದಾಧಿಕಾರಿಗಳ ಆಯ್ಕೆ