ಚಾಲಕನ ನಿಯಂತ್ರಣ ತಪ್ಪಿ ಅಡಿಕೆ ತೋಟಕ್ಕೆ ಬಿದ್ದ ಕಾರು..! ಮಹಿಳೆ ಮೃತ್ಯು

ಬಂಟ್ವಾಳ : ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಆಳೆತ್ತರದಲ್ಲಿರುವ ಅಡಿಕೆ ತೋಟಕ್ಕೆ ಬಿದ್ದು ಮಹಿಳೆ ಮೃತಪಟ್ಟು, ಚಾಲಕ ಗಂಭೀರವಾಗಿ ಗಾಯಗೊಂಡ ಘಟನೆ ಬಿ.ಸಿ ರೋಡು – ಬೆಳ್ತಂಗಡಿ ರಾಜ್ಯ ಹೆದ್ದಾರಿಯ ಬಾಂಬಿಲ ಎಂಬಲ್ಲಿ ನಡೆದಿದೆ.

ಮೃತಪಟ್ಟ ಮಹಿಳೆಯನ್ನು ಕೊಡಿಯಾಲ್ ಬೈಲು ನಿವಾಸಿ ಭಾಗೀರಥಿ (58) ಎಂದು ಗುರುತಿಸಲಾಗಿದೆ. ಮೂಲತಃ ಮಂಗಳೂರು ಕೊಡಿಯಾಲ್ ಬೈಲು ನಿವಾಸಿಯಾದ ಪಿಡಬ್ಲೂಡಿ ಇಂಜಿನಿಯರ್ ಗೋಪಾಲ ಸಹೋದರಿ ಭಾಗೀರಥಿ ಅವರು ಮೃತಪಟ್ಟಿದ್ದಾರೆ.

ಚಾಲಕ ರೂಪೇಶ್ (40) ಅವರಿಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕಾರಿನಲ್ಲಿ ಮೂವರು ಪ್ರಯಾಣಿಸುತ್ತಿದ್ದರು. ಕಾರನ್ನು ಚಲಾಯಿಸುತ್ತಿದ್ದ ರೂಪೇಶ್ ಅವರ ಪತ್ನಿ ಸುಚಿತ್ರ (33) ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದುಬಂದಿದೆ.

ಪುಂಜಾಲಕಟ್ಟೆ ಕಡೆಯಿಂದ ಬರುತ್ತಿದ್ದ ಚವರ್‌ಲೆಟ್ ಸ್ಪಾರ್ಕ್ ಕಾರು ಬೆಳಿಗ್ಗಿನ ಜಾವ ಸುಮಾರು 4.30 ಗಂಟೆಗೆ ಬಾಂಬಿಲ ಮಸೀದಿ ಮುಂಭಾಗದ ತಿರುವಿನಲ್ಲಿ ಅಪಘಾತಕ್ಕೀಡಾಗಿದೆ.

ಘಟನಾ ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಎಸ್. ಐ.ಸುತೇಶ್ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಭಾಗೀರಥಿ ಅವರ ಮಗಳು ಸುಚಿತ್ರ ಅವರ ಪತಿ ರೂಪೇಶ್ ಅವರು ತುಮಕೂರು ಜಿಲ್ಲೆಯವರಾಗಿದ್ದು, ದಸರಾ ರಜೆಯಲ್ಲಿ ಅಳಿಯ ಮಗಳ ಜೊತೆ ತುಮಕೂರಿಗೆ ಹೋಗಿ ವಾಪಾಸ್ಸು ಮಂಗಳೂರಿಗೆ ಬರುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.

Related posts

ಕರ್ನಾಟಕ ಕ್ರೀಡಾಕೂಟದಲ್ಲಿ ಸಮರಾಗೆ ಚಿನ್ನದ ಪದಕ

ಮಾರಿದ ಹಳೆಯ ಬಸ್ಸನ್ನು ಕದ್ದು ತಂದ ಆರೋಪ – ತಂದೆ ಮಗನ ವಿರುದ್ಧ ದೂರು ದಾಖಲು !

ನಾಪತ್ತೆಯಾಗಿರುವ ಮೀನುಗಾರನ ಕುಟುಂಬಕ್ಕೆ ಪರಿಹಾರ ಒದಗಿಸಲು ಗಂಟಿಹೊಳೆ ಆಗ್ರಹ