ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿಯಾದ ಕಾರು : ಮಾನವೀಯತೆ ಮೆರೆದ ಕಾಪು ಶಾಸಕ ಸುರೇಶ್ ಶೆಟ್ಟಿ ಗುರ್ಮೆ

ಕಾಪು : ಉದ್ಯಾವರ ಸೇತುವೆ ಹತ್ತಿರದ ಡೈವರ್ಷನ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಡಿವೈಡರ್ ಏರಿದ ಪರಿಣಾಮ ಪ್ರಯಾಣಿಕರಿಗೆ ಗಾಯವಾದ ಘಟನೆ ಶನಿವಾರ ರಾತ್ರಿ ನಡೆದಿದೆ.

ಉದ್ಯಾವರದ ಖಾಸಗಿ ಶೋರೂಂ‌ ಮುಂಭಾಗ ಕಾರು ಚಾಲಕನ ನಿಯಂತ್ರಣ ತಪ್ಪಿ ಈ ಘಟನೆ ನಡೆದಿದೆ, ಘಟನೆಯಲ್ಲಿ ಕಾರಿನ ಮುಂಭಾಗ ನಜ್ಜುಗುಜ್ಜಾಗಿದೆ.

ಈ ಸಂದರ್ಭದಲ್ಲಿ ಮಾನವೀಯತೆ ಮೆರೆದ ಕಾಪು ಶಾಸಕ ಸುರೇಶ್ ಶೆಟ್ಟಿ ಗುರ್ಮೆ ಗಾಯಾಳುಗಳ ಸಹಾಯಕ್ಕೆ ಧಾವಿಸಿ ಸಮಾಜ ಸೇವಕ ನಿತ್ಯಾನಂದ ಒಳಕಾಡುವ ಅವರ ಸಹಾಯದೊಂದಿಗೆ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸುವಲ್ಲಿ ಸಹಕರಿಸಿದರು.

ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

Related posts

ಯುವನಿಧಿಯ ಫಲಾನುಭವಿಗಳಿಗೆ ಕೌಶಲ್ಯ ತರಬೇತಿ ನೀಡಿ : ರಮೇಶ್ ಕಾಂಚನ್

ದೆಹಲಿಗೆ ಮಹಿಳಾ ಮುಖ್ಯಮಂತ್ರಿ : ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಸಂಭ್ರಮಾಚರಣೆ

ನಿಲ್ಲಿಸಿದ್ದ ಮೀನುಗಾರಿಕಾ ಬೋಟ್‌ನಲ್ಲಿ ಅಗ್ನಿ ಅವಘಡ – 15 ಲಕ್ಷ ರೂ.ನಷ್ಟ