ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ – ಹಲವು ವಾಹನಗಳು ಜಖಂ; ಸಿಸಿಕ್ಯಾಮೆರಾದಲ್ಲಿ ಭೀಕರ ದೃಶ್ಯ ಸೆರೆ

ಉಡುಪಿ : ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ನಗರದ ಕಡಿಯಾಳಿ ಓಕುಡೆ ಟವರ್ಸ್ ಬಳಿ ಸಂಭವಿಸಿದೆ. ಘಟನೆಯಲ್ಲಿ ಹಲವು ವಾಹನಗಳು ಜಖಂಗೊಂಡಿದ್ದು ಓರ್ವ ವೃದ್ಧನಿಗೆ ಗಂಭೀರ ಗಾಯಗಳಾಗಿವೆ.

ಮಣಿಪಾಲದಿಂದ ಮಂಗಳೂರಿಗೆ ತೆರಳುತ್ತಿದ್ದ ಕಾರಿನಲ್ಲಿ ಓರ್ವ ಯುವಕ ಮತ್ತು ಯುವತಿ ಇದ್ದರು ಎನ್ನಲಾಗಿದೆ. ಕಾರಿನಲ್ಲಿ ಸಿಲುಕಿಕೊಂಡಿದ್ದ ಇಬ್ಬರನ್ನೂ ಸ್ಥಳೀಯರು ಹೊರತೆಗೆದು ಬಚಾವ್ ಮಾಡಿದ್ದಾರೆ. ಸಂಚಾರಿ ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿದ್ದಾರೆ.

ಅಪಘಾತಗೊಂಡ ಕಾರು ವೇಗವಾಗಿ ಬಂದು ಪಲ್ಟಿಯಾಗಿ ರಸ್ತೆ ಬದಿ ನಿಲ್ಲಿಸಿದ್ದ ವಾಹನಗಳನ್ನು ತಳ್ಳಿಕೊಂಡು ಹೋಗಿದ್ದು ವಾಹನಗಳು ಜಖಂಗೊಂಡಿವೆ.

Related posts

ಕರ್ನಾಟಕ ಕ್ರೀಡಾಕೂಟದಲ್ಲಿ ಸಮರಾಗೆ ಚಿನ್ನದ ಪದಕ

ಯಕ್ಷಗಾನ ಪ್ರದರ್ಶನಕ್ಕೆ ಅಡ್ಡಿ – ಬ್ರಿಟಿಷ್ ಆಡಳಿತವನ್ನೂ ಮೀರಿಸಿದ ಸಿದ್ಧರಾಮಯ್ಯ ಸರ್ಕಾರ : ಯಶ್‌ಪಾಲ್ ಸುವರ್ಣ

ಮಾರಿದ ಹಳೆಯ ಬಸ್ಸನ್ನು ಕದ್ದು ತಂದ ಆರೋಪ – ತಂದೆ ಮಗನ ವಿರುದ್ಧ ದೂರು ದಾಖಲು !