ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು : ಪ್ರಯಾಣಿಕರು ಅಪಾಯದಿಂದ ಪಾರು

ಸುಳ್ಯ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿರುವ ಘಟನೆ ತಡರಾತ್ರಿ ಸುಳ್ಯದ ಕಾರ್ಯತೋಡಿ ದೇವಸ್ಥಾನಕ್ಕೆ ಹೋಗುವ ಜಂಕ್ಷನ್ ಬಳಿ ನಡೆದಿದೆ.

ಕಾರು‌ ಮಡಿಕೇರಿ ಕಡೆಯಿಂದ ಸುಳ್ಯದತ್ತ ಬರುತ್ತಿದ್ದಾಗ ದುರ್ಘಟನೆ ಸಂಭವಿಸಿದೆ. ದುರ್ಘಟನೆಯಲ್ಲಿ ಯಾರಿಗೂ ಯಾವುದೇ ಅಪಾಯಗಳಾಗಿಲ್ಲ. ಕಾರು ಗುದ್ದಿದರ ಪರಿಣಾಮ ವಿದ್ಯುತ್ ಕಂಬ ತುಂಡಾಗಿ ಕೆಳಕ್ಕೆ ಬಿದ್ದಿದೆ. ಕೆಲವು ಕಡೆಗೆ ವಿದ್ಯುತ್ ವ್ಯತ್ಯಯ ಉಂಟಾಗಿದೆ.

ಕೇರಳ ರಿಜಿಸ್ಟ್ರೇಶನ್ ಹೊಂದಿರುವ ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

Related posts

ಮೂಡುಬಿದಿರೆಯಲ್ಲಿ ಲ್ಯಾಪ್‌ ಟಾಪ್‌ ಕಳ್ಳತನ: ಅಂತರ್ ಜಿಲ್ಲಾ ಕಳ್ಳ ಅರೆಸ್ಟ್

ಶಾಸ್ತ್ರೀಪಾರ್ಕ್‌ ಫ್ಲೈಓವರ್‌ ತಳಭಾಗಕ್ಕೆ ಪೊಲೀಸ್‌ ನಿಯೋಜನೆ

ಕಾರು ಕಳವು ಗೈದ ಆರೋಪಿ ಪೊಲೀಸ್ ವಶಕ್ಕೆ