ಚಾಲಕನ ನಿಯಂತ್ರಣ ತಪ್ಪಿ ಎಲೆಕ್ಟ್ರಾನಿಕ್ಸ್ ಮಳಿಗೆಗೆ ನುಗ್ಗಿದ ಕಾರು

ಉಡುಪಿ : ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಎಲೆಕ್ಟ್ರಾನಿಕ್ಸ್ ಮಳಿಗೆಗೆ ನುಗ್ಗಿದ ಘಟನೆ ಸಂಭವಿಸಿದೆ.

ಉಡುಪಿ ನಗರದ ಹೃದಯ ಭಾಗದಲ್ಲಿರುವ ಕೆ.ಎಂ.ಮಾರ್ಗದಲ್ಲಿನ ಗೃಹೋಪಯೋಗಿ ಮಳಿಗೆಗೆ ಕಾರು ನುಗ್ಗಿದೆ. ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಎಡಮಗ್ಗಲಿಗೆ ಕಾರು ಹೋಗಿದೆ. ಶಾಪ್‌ನ ಮುಂಭಾಗದಲ್ಲಿರುವ ಮೆಟ್ಟಿಲನ್ನು ಏರಿ ನಿಂತಿದೆ. ಅದೃಷ್ಟವಶಾತ್ ಅಲ್ಲಿಂದ ಮುಂದೆ ಸಾಗದ ಕಾರಣ ಯಾವುದೇ ಅನಾಹುತ ಸಂಭವಿಸಿಲ್ಲ. ಕೂಡಲೇ ಸ್ಥಳದಲ್ಲಿ ಸೇರಿದ ಸಾರ್ವಜನಿಕರು ಒಟ್ಟಾಗಿ ಕಾರನ್ನು ರಸ್ತೆಗೆ ಎಳೆದು ತಂದಿದ್ದಾರೆ. ಒಳಗಿದ್ದವರು ಕೂಡ ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ.

Related posts

ಗ್ರಾಮೀಣ ಬಂಟರ ಸಂಘದ ಸ್ಕಿಲ್ ಡೆವೆಲಪ್ಮೆಂಟ್ ಕೇಂದ್ರದಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ

ಉಗ್ರರನ್ನು ಸದೆಬಡಿಯಲು ಎಲ್ಲರೂ ಒಗ್ಗಟ್ಟಾಗಿ ಹೋರಾಡಬೇಕು : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಪತ್ರಕರ್ತ ಸಂದೀಪ್ ಪೂಜಾರಿಗೆ ಶ್ರದ್ಧಾಂಜಲಿ ಸಭೆ