ಆಕಸ್ಮಿಕವಾಗಿ ಬೆಂಕಿ ತಗುಲಿ ಫ್ಯಾನ್ಸಿ ಸ್ಟೋರ್ ಭಸ್ಮ

ಬೈಂದೂರು : ತಾಲೂಕಿನ ನಾವುಂದ ಜಂಕ್ಷನ್ ಪ್ಲಾಜಾ ಗ್ರೋ ಕಾಂಪ್ಲೆಕ್ಸ್‌ನಲ್ಲಿರುವ ಪ್ರತೀಮಾ ಆಚಾರ್ಯ ಅವರಿಗೆ ಸಂಬಂಧಿಸಿದ ಫ್ಯಾನ್ಸಿ ಸ್ಟೋರ್‌ಗೆ ಆಕಸ್ಮಿಕವಾಗಿ ಬೆಂಕಿ ತಗುಲಿದ ಪರಿಣಾಮ ಅಂಗಡಿಯಲ್ಲಿನ ವಸ್ತುಗಳು ಸುಟ್ಟು ಕರಕಲಾದ ಘಟನೆ ಶುಕ್ರವಾರ ನಡೆದಿದೆ.

ಶ್ರೀಮತಿ ಪ್ರತಿಭಾ ವಿಜೇಂದ್ರ ಅರೆಹೊಳೆ ಎಂಬವರು ಟೈಲರಿಂಗ್ ಜೊತೆಯಲ್ಲಿ ಬಟ್ಟೆ ಹಾಗೂ ಸ್ಟೇಶನರಿಯೊಂದಿಗೆ ಅಂಗಡಿ ನಡೆಸಿಕೊಂಡಿದ್ದರು.

ಅಂಗಡಿಯಲ್ಲಿ ಹೊಲಿಗೆ ಯಂತ್ರ, ಫ್ರಿಡ್ಜ್, ಬಟ್ಟೆ, ಪುಸ್ತಕಗಳು, ಸ್ಟೇಶನರಿ ವಸ್ತುಗಳು, ಕಪಾಟು, ಫ್ಯಾನ್ಸಿ ಐಟಂಗಳು, ಸುಮಾರು 5000 ಹಣ ಇದ್ದಿತ್ತು. ಅಂಗಡಿ ಮಾಲಕಿ ಪ್ರತಿಭಾ ವಿಜೇಂದ್ರ ಅವರು ಮಧ್ಯಾಹ್ನ 12.00ರವರೆಗೆ ಅಂಗಡಿಯಲ್ಲಿ ಕೆಲಸ ಮಾಡಿಕೊಂಡಿದ್ದು ನಂತರ ದೇವಸ್ಥಾನಕ್ಕೆ ತೆರಳಿದ್ದರು. ಸುಮಾರು 12.45ರ ಹೊತ್ತಿಗೆ ಹೊಗೆ ತುಂಬಿಕೊಂಡದ್ದನ್ನು ಆಸುಪಾಸಿನ ಅಂಗಡಿಯವರು ಹಾಗೂ ಸ್ಥಳಿಯರು ನೋಡಿ ಅಗ್ನಿಶಾಮಕ ಹಾಗೂ ಪೋಲೀಸರಿಗೆ ಫೋನ್ ಮಾಡಿದ್ದರು.

ಅಗ್ನಿ ಶಾಮಕದವರು ಆಗಮಿಸಿ ಬೆಂಕಿ ನಂದಿಸುವ ಹೊತ್ತಿಗೆ ಸಂಪೂರ್ಣ ಸುಟ್ಟು ಹೋಗಿದ್ದು ಅಂದಾಜು 3 ಲಕ್ಷಕ್ಕೂ ಮಿಕ್ಕಿ ನಷ್ಟ ಆಗಿದೆ ಎಂದು ಅಂದಾಜಿಸಲಾಗಿದೆ. ಘಟನಾ ಸ್ಥಳಕ್ಕೆ ಬೈಂದೂರು ಪೋಲೀಸರು ಆಗಮಿಸಿ ಸ್ಥಳ ಪರಿಶೀಲನೆ ನಡೆಸಿದ್ದಾರೆ.

Related posts

ಕರ್ನಾಟಕ ಕ್ರೀಡಾಕೂಟದಲ್ಲಿ ಸಮರಾಗೆ ಚಿನ್ನದ ಪದಕ

ಯಕ್ಷಗಾನ ಪ್ರದರ್ಶನಕ್ಕೆ ಅಡ್ಡಿ – ಬ್ರಿಟಿಷ್ ಆಡಳಿತವನ್ನೂ ಮೀರಿಸಿದ ಸಿದ್ಧರಾಮಯ್ಯ ಸರ್ಕಾರ : ಯಶ್‌ಪಾಲ್ ಸುವರ್ಣ

ಮಾರಿದ ಹಳೆಯ ಬಸ್ಸನ್ನು ಕದ್ದು ತಂದ ಆರೋಪ – ತಂದೆ ಮಗನ ವಿರುದ್ಧ ದೂರು ದಾಖಲು !