ತಂಡದಿಂದ ಯುವಕರಿಬ್ಬರ ಮೇಲೆ ಮಾರಕಾಸ್ತ್ರಗಳಿಂದ ದಾಳಿ

ಬಂಟ್ವಾಳ : ಯುವಕರಿಬ್ಬರ ಮೇಲೆ ತಂಡವೊಂದು ಮಾರಕಾಸ್ತ್ರಗಳಿಂದ ದಾಳಿ ಮಾಡಿ ಮಾರಣಾಂತಿಕವಾಗಿ ಗಾಯಗೊಳಿಸಿರುವ ಘಟನೆ ಪುದು ಗ್ರಾಮದ ಅಮ್ಮೆಮಾರ್ ಎಂಬಲ್ಲಿ ಮಂಗಳವಾರ ತಡರಾತ್ರಿ ನಡೆದಿದೆ.

ಪ್ರಕರಣದಲ್ಲಿ ತಸ್ಲಿಂ ಹಾಗೂ ಮಹಮ್ಮದ್ ಶಾಕಿರ್ ಎಂಬವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಇಬ್ಬರೂ ಮಂಗಳೂರಿನ ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸ್ಥಳೀಯ ನಿವಾಸಿಗಳಾದ ಮನ್ಸೂ‌ರ್, ಪಲ್ಟಿ ಇಮ್ರಾನ್, ಮುಸ್ತಾಕ್ ಯಾನೆ ಮಿಚ್ಚ ಶರ್ಫುದ್ದೀನ್, ಅಶ್ರಫ್, ರಿಝಾನ್, ಸಫಾನ್, ಅಸ್ನಾನ್, ನಿಸಾಕ್, ಯಾಸಿರ್, ಸುಹೈಲ್, ಜಾಹೀದ್, ಸಾದಿಕ್, ಲತೀಫ್ ಎಂಬವರು ಹಲ್ಲೆ ಆರೋಪಿಗಳೆಂದು ಪೊಲೀಸ್ ದೂರಿನಲ್ಲಿ ತಿಳಿಸಲಾಗಿದೆ.

ಪೂರ್ವ ದ್ವೇಷದ ಹಿನ್ನೆಲೆಯಲ್ಲಿ ಈ ಕೃತ್ಯ ನಡೆದಿದೆ ಎನ್ನಲಾಗಿದೆ. ಆರೋಪಿಗಳು ತಸ್ಲೀಂಗೆ ಫೋನ್ ಕರೆ ಮಾಡಿ ಅವಾಚ್ಯವಾಗಿ ನಿಂದಿಸಿ ಅಮ್ಮೆಮಾ‌ರ್ ಶಾಲೆ ಬಳಿ ಬರುವಂತೆ ಸವಾಲೆಸೆದಿದ್ದರು ಎನ್ನಲಾಗಿದೆ. ಅದರಂತೆ ತಸ್ಲಿಮ್ ಅಲ್ಲಿಗೆ ಶಾಕಿ‌ರ್ ಎಂಬಾತನೊಂದಿಗೆ ತೆರಳಿದಾಗ ದುಷ್ಕರ್ಮಿಗಳು ಮಾರಕಾಯುಧಗಳಿಂದ ದಾಳಿ ನಡೆಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಮಂಗಳೂರು ವಿವಿಯಿಂದ ಯಕ್ಷ ಮಂಗಳ ಪ್ರಶಸ್ತಿ ಪ್ರದಾನ

National Fame Award of India Books of Award – Sushanth Brahmavar

ಯಕ್ಷಗಾನ ಹಾಸ್ಯಗಾರ ಮುಖ್ಯಪ್ರಾಣ ಕಿನ್ನಿಗೋಳಿ ನಿಧನಕ್ಕೆ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಸಂತಾಪ