ಚಾಲಕನ ನಿಯಂತ್ರಣ ತಪ್ಪಿ ಗೂಡ್ಸ್ ಲಾರಿ ಪಲ್ಟಿ; ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ವ್ಯತ್ಯಯ

ಗಂಗೊಳ್ಳಿ : ಸಕ್ಕರೆ ತುಂಬಿದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಮಲ್ಲಿಕಟ್ಟೆ ರಾಷ್ಟ್ರೀಯ ಹೆದ್ದಾರಿ 66ರ ಮಧ್ಯೆಯೇ ಪಲ್ಟಿಯಾದ ಘಟನೆ ಇಂದು ಬೆಳಗ್ಗೆ 7ಗಂಟೆಗೆ ನಡೆದಿದೆ.

ಮಹಾರಾಷ್ಟ್ರದ ಸೋಲಾಪುರದಿಂದ ಕೇರಳಕ್ಕೆ ಸಕ್ಕರೆ ಸಾಗಿಸುತ್ತಿದ್ದ ಲಾರಿಯು ಚಾಲಕ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಹೆದ್ದಾರಿ ಮಧ್ಯೆಯೇ ಉರುಳಿ ಬಿದ್ದ ಪರಿಣಾಮ ಕೆಲಕಾಲ ಸಂಚಾರದಲ್ಲಿ ವ್ಯತ್ಯಯ ಉಂಟಾಯಿತು. ಚಾಲಕ ಯಾವುದೇ ಗಾಯಗಳಾಗದೆ ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಗಂಗೊಳ್ಳಿ ಪೊಲೀಸರು, ಹೆದ್ದಾರಿ ಗಸ್ತು ಸಿಬ್ಬಂದಿ ಆಗಮಿಸಿ ವಾಹನ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟರು. ಮುಳ್ಳಿಕಟ್ಟೆ ಜಂಕ್ಷನ್ ಸದಾ ಸಮಸ್ಯೆಗಳ ತಾಣವಾಗಿದ್ದು, ಹಲವು ಅಪಘಾತಗಳು ಇಲ್ಲಿ ಸಂಭವಿಸಿವೆ. ಆದುದರಿಂದ ಈ ಸಮಸ್ಯೆಯನ್ನು ಬಗೆಹರಿಸುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ.

Related posts

ಸಿಬ್ಬಂದಿಗಳಿಗೆ ಝೂನೋಟಿಕ್ ರೋಗಗಳ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಕುರಿತ ತರಬೇತಿ ಸಾಧನಗಳನ್ನು ಪ್ರಾರಂಭಿಸಿದ ಪ್ರಸನ್ನ ಸ್ಕೂಲ್ ಆಫ್ ಪಬ್ಲಿಕ್ ಹೆಲ್ತ್

ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಉಡುಪಿ ಜಿಲ್ಲೆಯ ಪ್ರತಿಭಾವಂತ ವಿದ್ಯಾರ್ಥಿ ದೀಪೇಶ್ ದೀಪಕ್ ಶೆಣೈ ದ್ವಿತೀಯ

ನೇಜಾರಿನ ತಾಯಿ ಮತ್ತು ಮೂವರು ಮಕ್ಕಳ ಕೊಲೆ ಪ್ರಕರಣ – ತಮ್ಮ ವಕಾಲತ್ತನ್ನು ವಾಪಾಸು ಪಡೆದ ಆರೋಪಿ ಪ್ರವೀಣ್ ಚೌಗುಲೆ ಪರ ವಕೀಲರು