Friday, November 22, 2024
Banner
Banner
Banner
Home » ರಾಜ್ಯಪಾಲರು ಕೇಂದ್ರ ಸರಕಾರದ ಕೈಗೊಂಬೆಯಂತೆ ವರ್ತಿಸುತ್ತಿದ್ದಾರೆ – ವೆರೋನಿಕಾ ಕರ್ನೆಲಿಯೋ

ರಾಜ್ಯಪಾಲರು ಕೇಂದ್ರ ಸರಕಾರದ ಕೈಗೊಂಬೆಯಂತೆ ವರ್ತಿಸುತ್ತಿದ್ದಾರೆ – ವೆರೋನಿಕಾ ಕರ್ನೆಲಿಯೋ

by NewsDesk

ಉಡುಪಿ : ರಾಜ್ಯಪಾಲರು ಕೇಂದ್ರ ಸರಕಾರದ ಕೈಗೊಂಬೆಯಂತೆ ವರ್ತಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದು ಆಪರೇಶನ್ ಕಮಲದ ಮೂಲಕ ಸರಕಾರವನ್ನು ಪತನಗೊಳಿಸುವ ಷಡ್ಯಂತ್ರದ ಒಂದು ಭಾಗವಾಗಿದೆ ಎಂದು ಕೆಪಿಸಿಸಿ ವಕ್ತಾರರಾದ ವೆರೋನಿಕಾ ಕರ್ನೆಲಿಯೋ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಿಜೆಪಿಯೇತರ ಸರಕಾರಗಳು ಇರುವ ರಾಜ್ಯಗಳಲ್ಲಿ ಕೇಂದ್ರದ ಬಿಜೆಪಿ ನೇತೃತ್ವದ ನರೇಂದ್ರ ಮೋದಿ ಸರಕಾರ ರಾಜ್ಯಪಾಲರ ಮೂಲಕ ಷಡ್ಯಂತ್ರಗಳನ್ನು ರಚಿಸಿ ಅಲ್ಲಿನ ಸರಕಾರಗಳನ್ನು ಅಸ್ಥಿರಗೊಳಿಸುವ ಕೆಲಸ ಮಾಡುತ್ತಿರುವುದು ಇದೇನು ಮೊದಲಲ್ಲ. ಕೇರಳ, ಪಶ್ಚಿಮ ಬಂಗಾಳ, ದೆಹಲಿ ಇನ್ನಿತರ ರಾಜ್ಯಗಳಲ್ಲಿ ಇದರ ಅನುಭವ ಈಗಾಗಲೇ ಆಗಿದ್ದು, ಜನರಿಂದ ಬಹುಮತದೊಂದಿಗೆ ಆಯ್ಕೆಯಾಗಿದ್ದ ಕರ್ನಾಟಕದ ಸಿದ್ದರಾಮಯ್ಯ ನೇತೃತ್ವದ ಸರಕಾರದ ಜನಪರ ಗ್ಯಾರಂಟಿ ಯೋಜನೆಗಳಿಂದ ಹತಾಶರಾಗಿರುವ ಬಿಜೆಪಿಗರು ರಾಜ್ಯಪಾಲರನ್ನು ದಾಳವಾಗಿರಿಸಿಕೊಂಡು ಯಾವುದೋ ಸಾಮಾಜಿಕ ಕಾರ್ಯಕರ್ತ ಎಂಬ ವ್ಯಕ್ತಿಯ ಸುಳ್ಳು ದೂರಿನ ಮೇಲೆ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದು ಕಾನೂನು ಬಾಹಿರವಾಗಿದೆ.

ಟಿ.ಜೆ. ಅಬ್ರಹಾಂ ಅವರು ಸಿಎಂ ವಿರುದ್ಧ ದೂರು ಕೊಟ್ಟ ಬಳಿಕ ರಾಜ್ಯಪಾಲರು ನೀಡಿದ ನೋಟಿಸಿಗೆ ಸರಕಾರದ ಮುಖ್ಯ ಕಾರ್ಯದರ್ಶಿಗಳು ರಾಜಭವನಕ್ಕೆ ಸಮರ್ಪಕ ಮಾಹಿತಿ ಕೊಟ್ಟಿದ್ದಾರೆ. ಅದರ ಬಳಿಕವೂ ಬಿಜೆಪಿಗರ ಹಾಗೂ ಕೇಂದ್ರ ಸರಕಾರದ ಒತ್ತಡದೊಂದಿಗೆ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದಾರೆ. ಎಚ್ ಡಿ ಕುಮಾರಸ್ವಾಮಿ, ಶಶಿಕಲಾ ಜೊಲ್ಲೆ ಮುಂತಾದವರ ವಿರುದ್ಧ ಪ್ರಾಸಿಕ್ಯೂಷನ್ ಅನುಮತಿ ಕೋರಿ ಎಂಟು ಹತ್ತು ತಿಂಗಳಿನಿಂದಲೂ ರಾಜ್ಯಪಾಲರ ಮುಂದೆ ಕೋರಿಕೆಗಳಿವೆ. ಅವುಗಳನ್ನು ಉದಾಸೀನ ಮಾಡಿರುವ ಅವರು, ಯಾವ ಹುರುಳೂ ಇಲ್ಲದ ಮುಡಾ ಹಗರಣದ ಬಗ್ಗೆ ವಿಪರೀತ ಆಸಕ್ತಿ ತಾಳಿರುವುದು ಅವರಿಗೆ ಕೇಂದ್ರದ ಮೋದಿ ಸರಕಾರ ನೀಡುತ್ತಿರುವ ಸೂಚನೆ ಎನ್ನುವುದು ಸ್ಪಷ್ಠವಾಗಿ ಗೋಚರಿಸುತ್ತದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

You may also like

Leave a Comment

Maax-Media-Logo

Maax News covers major news and events of Udupi district. This channel provides detailed reports on the political, social, economic, and cultural life of Udupi district.

Maax News, equipped with the most sophisticated studio in Udupi, assures people comprehensive news coverage.

Copyrights © maaxmedia.in All Rights Reserved. Designed by Sabweb