ಎಳವೆಯಲ್ಲಿಯೇ ಓದಿನ ಹವ್ಯಾಸ ಬೆಳೆಸ ಬೇಕು – ನೀಲಾವರ ಸುರೇಂದ್ರ ಅಡಿಗ

ಉಡುಪಿ : ಮಕ್ಕಳಿಗೆ ಎಳವೆಯಲ್ಲಿಯೇ ಓದಿನ ಹವ್ಯಾಸ ಬೆಳೆಸಬೇಕು ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಹೆತ್ತವರಿಗೆ ಕಿವಿಮಾತು ಹೇಳಿದರು.

ಉಡುಪಿ ಡಿವೈಎಸ್ಪಿ ಡಿ. ಟಿ. ಪ್ರಭು ಪುತ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿನಿ ಪ್ರಿಯದರ್ಶಿನಿ ಪಿ. ವಿರಚಿತ `ಕೀಕಾ’ ಪುಸ್ತಕವನ್ನು ಶುಕ್ರವಾರ ನಗರದ ಪುರಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅನಾವರಣಗೊಳಿಸಿ ಮಾತನಾಡಿದರು. ಈಚಿನ ದಿನಗಳಲ್ಲಿ ಬರೆಯುವವರ ಸಂಖ್ಯೆ ಹೆಚ್ಚಾಗಿದೆ. ಆದರೆ, ಓದುವವರ ಸಂಖ್ಯೆ ವಿರಳವಾಗಿದೆ. ಆದ್ದರಿಂದ ಓದಿನ ಹವ್ಯಾಸ ಹೆಚ್ಚಿಸುವ ಕಾರ್ಯಕ್ರಮ ಆಯೋಜಿಸಬೇಕು ಎಂದವರು ಸಲಹೆ ನೀಡಿದರು.

ಇಂಜಿನಿಯರಿಂಗ್ ವಿದ್ಯಾರ್ಥಿನಿಯಾದರೂ ಪ್ರಿಯದರ್ಶಿನಿ ಅವರು ಈ ಪುಸ್ತಕದಲ್ಲಿ ಪರಿಸರ, ಸ್ವಾತಂತ್ರ್ಯ ಹೋರಾಟ, ಹೆಚ್ಚಾಗಿ ರಾಣಾ ಪ್ರತಾಪಸಿಂಹ ಬಗೆಗೆ ಅನೇಕರಿಗೆ ಗೊತ್ತಿಲ್ಲದ ವಿಚಾರಗಳನ್ನು ದಾಖಲಿಸಿದ್ದಾರೆ. ಇದು ಶಿಕ್ಷಕ ಕೈಪಿಡಿಯಾಗಲು ಯೋಗ್ಯವಾಗಿದೆ ಎಂದರು.

ಹೂವಿನ ಗಿಡಕ್ಕೆ ನೀರೆರೆಯುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದ ಹಾಸ್ಯ ಸಾಹಿತಿ ಶಾಂತರಾಜ ಐತಾಳ್, ಮೊಬೈಲ್ ಯುಗದಲ್ಲಿ ಜನರಿಗೆ ಓದಿನ ಬಗ್ಗೆ ಆಸಕ್ತಿ ಕಡಿಮೆಯಾಗುತ್ತಿದೆ ಎಂದು ವಿಷಾದಿಸಿದರು.

Related posts

ಕರ್ನಾಟಕ ಕ್ರೀಡಾಕೂಟದಲ್ಲಿ ಸಮರಾಗೆ ಚಿನ್ನದ ಪದಕ

ಪ್ರಥಮ ಬಾರಿಗೆ ಯಕ್ಷ ರಂಗದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ

ಯಕ್ಷಗಾನ ಪ್ರದರ್ಶನಕ್ಕೆ ಅಡ್ಡಿ – ಬ್ರಿಟಿಷ್ ಆಡಳಿತವನ್ನೂ ಮೀರಿಸಿದ ಸಿದ್ಧರಾಮಯ್ಯ ಸರ್ಕಾರ : ಯಶ್‌ಪಾಲ್ ಸುವರ್ಣ