ಪ್ರಯಾಣಿಕರ ಮೊಬೈಲ್, ಹಣ ಮರಳಿಸಿ ಪ್ರಾಮಾಣಿಕತೆ ಮೆರೆದ ಆಟೋ ಚಾಲಕ

ಮಣಿಪಾಲ : ಆಟೋ ಚಾಲಕರೊಬ್ಬರು ಆಟೋ ರಿಕ್ಷಾದಲ್ಲಿ ಪ್ರಯಾಣಿಕರು ಮರೆತು ಬಿಟ್ಟು ಹೋದ ಮೊಬೈಲ್ ಹಾಗೂ ಹಣವನ್ನು ಮರಳಿಸಿ ಪ್ರಾಮಾಣಿಕತೆ ಮೆರೆದ ಘಟನೆ ಮಣಿಪಾಲದಲ್ಲಿ ನಡೆದಿದೆ.

ಆಟೋ ಚಾಲಕರೆಂದರೆ ಸ್ವಲ್ಪ ದೂರ ಸಂಚಾರ ಮಾಡಲು ಸಾಕಷ್ಟು ದುಡ್ಡು ಕೇಳುತ್ತಾರೆ ಎನ್ನುವ ಮಾತುಗಳು ಸಾರ್ವಜನಿಕ ವಲಯದಲ್ಲಿ ಕೇಳಿ ಬರುವುದು ಸಹಜ. ಆದರೆ ಖಾಕಿ ತೊಟ್ಟು ಆಟೋ ಚಾಲನೆ ಮಾಡುವ ಚಾಲಕರಲ್ಲಿಯೂ ಒಬ್ಬ ಸಹೃದಯಿ ಸೇವಕ ಇರುತ್ತಾರೆ ಎಂಬ ಮಾತು ಸಹ ಅಕ್ಷರಶಃ ಸತ್ಯ. ಅದೇ ರೀತಿ ಮಣಿಪಾಲ ಕೆನರಾ ಬ್ಯಾಂಕ್ ಮ್ಯಾನೇಜ್‌ಮೆಂಟ್ ಕಾಲೇಜು (ಎಸ್.ಐ.ಬಿ.ಎಂ.) ಆಟೋ ನಿಲ್ದಾಣದಿಂದ ರೈಲ್ವೆ ಸ್ಟೇಷನ್‌ಗೆ ಆಟೋ ರಿಕ್ಷಾದಲ್ಲಿ ಪ್ರಯಾಣಿಸುವ ವೇಳೆ ಕೇರಳದ ಪ್ರಯಾಣಿಕರು ಆಟೋ ರಿಕ್ಷಾದಲ್ಲಿ ಬಿಟ್ಟು ಹೋಗಿದ್ದ 35 ಸಾವಿರ ರೂ. ಬೆಲೆಯ ಮೊಬೈಲ್ ಹಾಗೂ ನಗದು 3000 ರೂಪಾಯಿಯನ್ನು ಪ್ರಾಮಾಣಿಕತೆಯಿಂದ ಮರಳಿಸುವ ಮೂಲಕ ಆಟೋ ಚಾಲಕ ವಿಜಯ ಪುತ್ರನ್ ಹಿರೇಬೆಟ್ಟು ಎಲ್ಲರ ಪ್ರೀತಿ ಹಾಗೂ ಪ್ರಶಂಸೆಗೆ ಪಾತ್ರರಾಗಿದ್ದಾರೆ. ವಿಜಯ ಪುತ್ರನ್ ಹಿರೇಬೆಟ್ಟು ಅವರು ಮಣಿಪಾಲ ಆಟೋ ರಿಕ್ಷಾ ಚಾಲಕರ ಮತ್ತು ಮಾಲಕರ ಸಂಘದ ಮಾಜಿ ಅಧ್ಯಕ್ಷ ಹಾಗೂ ಸಾಮಾಜಿಕ ಕಾರ್ಯಕರ್ತರಾಗಿದ್ದಾರೆ.

Related posts

ಕರ್ನಾಟಕ ಕ್ರೀಡಾಕೂಟದಲ್ಲಿ ಸಮರಾಗೆ ಚಿನ್ನದ ಪದಕ

ಪ್ರಥಮ ಬಾರಿಗೆ ಯಕ್ಷ ರಂಗದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ

ಯಕ್ಷಗಾನ ಪ್ರದರ್ಶನಕ್ಕೆ ಅಡ್ಡಿ – ಬ್ರಿಟಿಷ್ ಆಡಳಿತವನ್ನೂ ಮೀರಿಸಿದ ಸಿದ್ಧರಾಮಯ್ಯ ಸರ್ಕಾರ : ಯಶ್‌ಪಾಲ್ ಸುವರ್ಣ