ಉಡುಪಿ : ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಾದ ಯಕ್ಷಗಾನ ಮತ್ತು ಕೋಳಿ ಅಂಕಗಳಿಗೆ ಅನುಮತಿ ನೀಡಬೇಕೆಂದು ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಅವರು ವಿಧಾನಸಭೆಯಲ್ಲಿ ಧ್ವನಿ ಎತ್ತಿದ ಬಳಿಕ ಈ ವಿಷಯವು ತೀವ್ರ ಚರ್ಚೆಗೆ ಗ್ರಾಸವಾಗಿದೆ.
ಜಿಲ್ಲೆಯ ಪ್ರಮುಖ ಸಮಸ್ಯೆಗಳ ಬಗ್ಗೆ ಗಮನಹರಿಸುವುದನ್ನು ಬಿಟ್ಟು ಶಾಸಕರು ಕೋಳಿ ಅಂಕದ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಟೀಕಿಸಿತ್ತು. ಇದರ ಮುಂದುವರಿದ ಭಾಗವಾಗಿ ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್ ಅವರು ಕಲ್ಸಂಕ ವೃತ್ತದ ಬಳಿ ಟ್ಯಾಬ್ಲೋ ಕೋಳಿಗಳೊಂದಿಗೆ ಕೋಳಿ ಅಂಕವನ್ನು ಪ್ರದರ್ಶಿಸುವ ಮೂಲಕ ಶಾಸಕರಿಗೆ ತಿರುಗೇಟು ನೀಡಿದ್ದಾರೆ.
ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದ್ದು, ಪರ-ವಿರೋಧ ಅಭಿಪ್ರಾಯಗಳು ವ್ಯಕ್ತವಾಗುತ್ತಿವೆ.