ಎರಡನೇ ಬಾರಿ ಕಮಲಶಿಲೆಯ ದುರ್ಗಾಪರಮೇಶ್ವರಿಯ ಪಾದ ತೊಳೆದ ಕುಬ್ಜಾ ನದಿ

ಕುಂದಾಪುರ : ಉಡುಪಿ ಜಿಲ್ಲೆಯಲ್ಲಿ ಮಳೆ ಮತ್ತೆ ಅಬ್ಬರಿಸತೊಡಗಿದೆ. ಈಗಾಗಲೇ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಹಿನ್ನಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಜಿಲ್ಲೆಯಲ್ಲಿ ಹರಿಯುವ ನದಿಗಳು ಮತ್ತೆ ಪ್ರವಾಹ ಪರಿಸ್ಥಿತಿಯನ್ನು ನಿರ್ಮಾಣ ಮಾಡಿದೆ.

ಉಡುಪಿ ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿದೆ. ಪಶ್ಚಿಮ ಘಟ್ಟದ ತಪ್ಪಲು ಹೆಬ್ರಿ-ಕಾರ್ಕಳ‌ದಲ್ಲಿ ನಿರಂತರ ಮಳೆಯಾಗುತ್ತಿದೆ. ಕುಬ್ಜಾ ನದಿ ಮತ್ತೆ ತುಂಬಿ ಹರಿಯುತ್ತಿದೆ. ಕಮಲಶಿಲೆ ಬ್ರಾಹ್ಮೀ ದುರ್ಗಾಪರಮೇಶ್ವರಿ ದೇಗುಲಕ್ಕೆ ನೀರು ನುಗ್ಗಿದ್ದು. ಈ ವರ್ಷದಲ್ಲಿ ಎರಡನೇ ಬಾರಿಗೆ ನದಿ ನೀರು ದೇಗುಲದ ಗರ್ಭಗುಡಿಗೆ ಪ್ರವೇಶಿಸಿದೆ. ನಿನ್ನೆ ರಾತ್ರಿ 12.30 ರಿಂದ 2 ಗಂಟೆಯವರೆಗೆ ದೇಗುಲಕ್ಕೆ ನದಿ ನೀರು ಪ್ರವೇಶಿಸಿ ದುರ್ಗಾಪರಮೇಶ್ವರಿ ದೇವಿಯ ಪಾದ ಸ್ಪರ್ಶಿಸಿದೆ. ಈ ವೇಳೆ ವಿಶೇಷ ಪೂಜೆ ಸಲ್ಲಿಸಲಾಯಿತು. ಬಳಿಕ ನದಿಯ ಮಟ್ಟ ಇಳಿಕೆಯಾಗಿ ನೀರು ಸಂಪೂರ್ಣ ಇಳಿದು ಹೋಗಿದೆ.

Related posts

ಅಲೈನ್ಸ್ ಕ್ಲಬ್ ಉಡುಪಿಯಿಂದ ವೈದ್ಯರ ದಿನಾಚರಣೆ : ಪ್ರಸಿದ್ಧ ವೈದ್ಯ ಡಾ.ಆರ್.ಎನ್.ಭಟ್ ಅವರಿಗೆ ಸನ್ಮಾನ

ಶತಾವಧಾನಿ ಡಾ. ಆರ್. ಗಣೇಶ್ ಅವರಿಗೆ ತಲ್ಲೂರು ಕನಕ ಅಣ್ಣಯ್ಯ ಶೆಟ್ಟಿ ಪ್ರಶಸ್ತಿ ಪ್ರದಾನ

ರಂಗೋಲಿ ಕಲಾ ಸಾಧಕಿ, ಭಾರತಿ ಮರವಂತೆಗೆ ‘ಮಧುರಚೆನ್ನ ರಾಜ್ಯ ಪ್ರಶಸ್ತಿ’ ಪ್ರದಾನ