ಪ್ರೇಯಸಿ ಮನೆಗೆ ಬಂದಿದ್ದ ಪ್ರಿಯಕರನಿಗೆ ಯುವಕರ ತಂಡದಿಂದ ಕಂಬಕ್ಕೆ ಕಟ್ಟಿ ಅಮಾನುಷ ಹಲ್ಲೆ – ವೀಡಿಯೋ ವೈರಲ್

ಪುತ್ತೂರು : ಪ್ರೇಯಸಿಯ ಮನೆಗೆ ಬಂದಿದ್ದ ಪ್ರಿಯಕರನಿಗೆ ಯುವಕರ ತಂಡವೊಂದು ಕಂಬಕ್ಕೆ ಕಟ್ಟಿ ಅಮಾನುಷವಾಗಿ ಹಲ್ಲೆ ನಡೆಸಿದ ಘಟನೆ ಬಂಟ್ವಾಳದ ಸಜಿಪನಡು ಎಂಬಲ್ಲಿ ನಡೆದಿದೆ. ಈ ಘಟನೆ ಎರಡು ದಿನಗಳ ಹಿಂದೆ ನಡೆದಿದ್ದು, ಇದೀಗ ವೀಡಿಯೋ ವೈರಲ್ ಆದ ಬಳಿಕ ಪ್ರಕರಣ ಬೆಳಕಿಗೆ ಬಂದಿದೆ.

ಮಂಗಳೂರಿನ ಬೆಂಗರೆ ನಿವಾಸಿ ಮಹಮ್ಮದ್ ಮುಸ್ತಫಾ ಹಲ್ಲೆಗೊಳಗಾದ ಯುವಕ. ಈತನಿಗೆ ಸಜಿಪನಡುವಿನ ಮುಸ್ಲಿಂ ಯುವತಿಯೊಂದಿಗೆ ಪ್ರೇಮವಿತ್ತು. ಆದ್ದರಿಂದ ಆಕೆಯನ್ನು ಭೇಟಿಯಾಗಲು ಸಜಿಪನಡುವಿಗೆ ಬಂದಿದ್ದ. ಈ ವೇಳೆ ಯುವಕರ ತಂಡವೊಂದು ಮಹಮ್ಮದ್ ಮುಸ್ತಫಾನನ್ನು ಅರೆಬೆತ್ತಲೆ ಮಾಡಿ ಕಂಬಕ್ಕೆ ಕಟ್ಟಿ ಹಲ್ಲೆ ಮಾಡಿದ್ದಾರೆ. ಹಲ್ಲೆ ಮಾಡುವುದನ್ನು ವೀಡಿಯೋ ಮಾಡಿ ವೈರಲ್ ಮಾಡಿದ್ದಾರೆ. ಹಲ್ಲೆಗೊಳಗಾದ ಯುವಕ ಪೋಲೀಸ್ ದೂರು ನೀಡಿದ್ದು, ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಕರ್ನಾಟಕ ಕ್ರೀಡಾಕೂಟದಲ್ಲಿ ಸಮರಾಗೆ ಚಿನ್ನದ ಪದಕ

ಮಾರಿದ ಹಳೆಯ ಬಸ್ಸನ್ನು ಕದ್ದು ತಂದ ಆರೋಪ – ತಂದೆ ಮಗನ ವಿರುದ್ಧ ದೂರು ದಾಖಲು !

ತಾಯಿ ಹಾಗೂ ಇಬ್ಬರು ಮಕ್ಕಳು ನಾಪತ್ತೆ