ಮ್ಯಾನೇಜರ್‌, ಸಿಬ್ಬಂದಿ ಸೇರಿ ಫೈನಾನ್ಸ್ ಕಂಪೆನಿಗೆ 4 ಲಕ್ಷಕ್ಕೂ ಅಧಿಕ ಹಣ ವಂಚನೆ

ಉಡುಪಿ : ಖಾಸಗಿ ಫೈನಾನ್ಸ್‌ ಸಂಸ್ಥೆಯೊಂದಕ್ಕೆ ಮ್ಯಾನೇಜರ್‌ ಹಾಗೂ ಲೋನ್‌ ಆಫೀಸರ್‌‌ಗಳು 4 ಲಕ್ಷ ರೂಪಾಯಿಗೂ ಅಧಿಕ ಹಣ ವಂಚಿಸಿರುವ ಘಟನೆ ಬಗ್ಗೆ ಉಡುಪಿ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ.

ಖಾಸಗಿ ಫೈನಾನ್ಸ್ ಸಂಸ್ಥೆಯ ಉಡುಪಿ ಶಾಖೆಯಲ್ಲಿ ಕಳೆದ ಒಂದು ವರ್ಷದಿಂದ ಮ್ಯಾನೇಜರ್‌ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಅಬ್ದುಲ್‌ ಲತೀಫ್‌ ಖಾಸಿಂ ಮುಲ್ಲಾ ಸಂಘದ ಸದಸ್ಯರಿಂದ ಕಂತಿನ ಪ್ರಕಾರ ಸಾಲದ ಹಣವನ್ನು ವಸೂಲಿ ಮಾಡುತ್ತಿದ್ದು, ಸಾಲದ ಹಣದಲ್ಲಿ 1,25,787 ರೂಪಾಯಿ ಹಣವನ್ನು ಫೈನಾನ್ಸಿಯಲ್‌ ಲಿಮಿಟೆಡ್‌ ಸಂಸ್ಥೆಗೆ ಪಾವತಿಸದೇ ತನ್ನ ಸ್ವಂತಕ್ಕೆ ಉಪಯೋಗಿಸಿಕೊಂಡಿದ್ದಾನೆ. ಅದೇ ರೀತಿ ಲೋನ್‌ ಆಫೀಸರ್‌‌ಗಳಾದ ಅಕ್ಷಯ್‌ 49,000 ರೂಪಾಯಿ ಹಾಗೂ ದೀಕ್ಷಿತ್‌ 3 ಲಕ್ಷ ರೂಪಾಯಿ ಹಣವನ್ನು ತಮ್ಮ ಸ್ವಂತಕ್ಕೆ ಉಪಯೋಗಿಸಿಕೊಂಡು ಸಂಸ್ಥೆಯ ಮ್ಯಾನೇಜರ್‌ ಜತೆ ಸೇರಿ ಈ ಮೂವರು ಒಟ್ಟು 4,74,787 ರೂಪಾಯಿ ಹಣವನ್ನು ಸಂಸ್ಥೆಗೆ ಕಟ್ಟದೇ ವಂಚಿಸಿರುವುದಾಗಿ ಸಂಸ್ಥೆಯ ಹಿರಿಯ ಅಧಿಕಾರಿ ಬಸವರಾಜ ಪೊಲೀಸ್‌ ಠಾಣೆಗೆ ದೂರು ನೀಡಿರುವುದಾಗಿ ಉಡುಪಿ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ.

Related posts

ಮಣಿಪಾಲದಲ್ಲಿ ಸಂಚಾರ ನಿಯಮ ಉಲ್ಲಂಘನೆ: ಐವರು ವಿದ್ಯಾರ್ಥಿಗಳು ಒಂದೇ ದ್ವಿಚಕ್ರ ವಾಹನದಲ್ಲಿ!

ಗ್ಯಾಸ್ ಹಚ್ಚುವಾಗ ಬೆಂಕಿ ತಗುಲಿ ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು

ಜನಿವಾರ ತೆಗೆಸಿದ ಪ್ರಕರಣ – ಒಂದು ಸಮಾಜದ ಮೇಲೆ ದಬ್ಬಾಳಿಕೆ ಸರಿಯಲ್ಲ : ಕೋಟ