ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ‌ ಕಚೇರಿ ಉದ್ಘಾಟಿಸಿದ ಸಚಿವೆ

ಉಡುಪಿ : ಕರ್ನಾಟಕದಲ್ಲಿ ಜಾರಿಗೆ ತರಲಾಗಿರುವ ಪಂಚ ಗ್ಯಾರಂಟಿ ಯೋಜನೆಗಳನ್ನು ಬೇರೆ ರಾಜ್ಯಗಳು ಕೂಡ ಅನುಸರಿಸುತ್ತಿವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.

ತಾಲೂಕು ಪಂಚಾಯತ್ ಕಟ್ಟಡದಲ್ಲಿ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಕಚೇರಿಯನ್ನು ಉದ್ಘಾಟಿಸಿ ಮಾತನಾಡಿದ ಸಚಿವರು, ಭಾರತ ದೇಶದ ಇತಿಹಾಸದಲ್ಲಿ ಇಂಥ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದ ಹೆಮ್ಮೆ ನಮ್ಮ ಸರ್ಕಾರದ್ದು ಎಂದರು.

ಬೇರೆ ರಾಜ್ಯಗಳಲ್ಲೂ ನಮ್ಮ ಗ್ಯಾರಂಟಿ ಯೋಜನೆಗಳ ಮಾದರಿಯನ್ನು ‌ಜಾರಿಗೆ ತರಲಾಗುತ್ತಿದೆ. ಭಾರತದ ಬದಲಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಕೊಡುಗೆ ಅಪಾರ. ಮಹಿಳಾ ಸಬಲೀಕರಣಕ್ಕೆ ಕಾಂಗ್ರೆಸ್ ಸರ್ಕಾರ ಉತ್ತಮ ಕೆಲಸ ಮಾಡುತ್ತಿದೆ. ಪಂಚ ಗ್ಯಾರಂಟಿ ಯೋಜನೆಗಳ ಮಹತ್ವವನ್ನು ಅನುಷ್ಠಾನ ಸಮಿತಿಗಳು ಜನರಿಗೆ ಮುಟ್ಟಿಸಲಿ, ರಾಜ್ಯದ ಯೋಜನೆಗಳು ಜನರಿಗೆ ತಲುಪುವಂತಾಗಲಿ ಎಂದರು.

ಈ ವೇಳೆ ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆ, ಉಡುಪಿ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ರಮೇಶ್ ಕಾಂಚನ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕೊಡವೂರು ಮತ್ತಿತರರಿದ್ದರು.

Related posts

ಅಲೈನ್ಸ್ ಕ್ಲಬ್ ಉಡುಪಿಯಿಂದ ವೈದ್ಯರ ದಿನಾಚರಣೆ : ಪ್ರಸಿದ್ಧ ವೈದ್ಯ ಡಾ.ಆರ್.ಎನ್.ಭಟ್ ಅವರಿಗೆ ಸನ್ಮಾನ

ಶತಾವಧಾನಿ ಡಾ. ಆರ್. ಗಣೇಶ್ ಅವರಿಗೆ ತಲ್ಲೂರು ಕನಕ ಅಣ್ಣಯ್ಯ ಶೆಟ್ಟಿ ಪ್ರಶಸ್ತಿ ಪ್ರದಾನ

ರಂಗೋಲಿ ಕಲಾ ಸಾಧಕಿ, ಭಾರತಿ ಮರವಂತೆಗೆ ‘ಮಧುರಚೆನ್ನ ರಾಜ್ಯ ಪ್ರಶಸ್ತಿ’ ಪ್ರದಾನ