ವಿದ್ಯುತ್ ಹರಿದು ವ್ಯಕ್ತಿ ಸ್ಥಳದಲ್ಲೇ ಸಾವು

ಶಿರ್ವ : ಇಲ್ಲಿನ ನಡಿಬೆಟ್ಟು ಸಮೀಪ ವ್ಯಕ್ತಿಯೊಬ್ಬರು ಸಿಯಾಳ ಕೊಯ್ಯಲು ಹೋಗಿ ವಿದ್ಯುತ್ ಹರಿದು ಸ್ಥಳದಲ್ಲೇ ಮೃತಪಟ್ಟ ಘಟನೆ ಇಂದು ಮುಂಜಾನೆ ಸಂಭವಿಸಿದೆ.

ಶಿರ್ವದ ನಡಿಬೆಟ್ಟು ಸಮೀಪದ ಪನಿಯಾರ ಮನೆಯ ಕೆಲಸಗಾರ ಸುರೇಶ್ ಶೆಟ್ಟಿ (68) ಮೃತಪಟ್ಟ ದುರ್ದೈವಿಯಾಗಿದ್ದಾರೆ. ಮನೆಯ ಯಜಮಾನ ದೇವಸ್ಥಾನಕ್ಕೆ ಹೋಗಿದ್ದ ಸಂದರ್ಭದಲ್ಲಿ ತೋಟದಲ್ಲಿದ್ದ ಕಬ್ಬಿಣದ ಸಲಾಕೆಯನ್ನು ಉಪಯೋಗಿಸಿ ತೆಂಗಿನ ಮರದಿಂದ ಸೀಯಾಳ ತೆಗೆಯುತ್ತಿದ್ದ ಸಂದರ್ಭದಲ್ಲಿ ಈ ದುರ್ಘಟನೆ ನಡೆದಿದೆ.

ತೋಟದಲ್ಲಿ ಹಾದು ಹೋಗಿರುವ ಹೈ-ಟೆನ್ಶನ್ ತಂತಿಗೆ ಸುರೇಶ ಕೈಯಲ್ಲಿದ್ದ ಕಬ್ಬಿಣದ ಸಲಾಕೆ ತಗಲಿ ವಿದ್ಯುತ್ ಪ್ರವಹಿಸಿ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಶಿರ್ವ ಠಾಣೆ ಪೊಲೀಸರು ಮತ್ತು ಮೆಸ್ಕಾಂ ಇಲಾಖಾಧಿಕಾರಿಗಳು ಭೇಟಿ ನೀಡಿ ಮಹಜರು ನಡಸಿದ್ದಾರೆ. ಶಿರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಸಿಬ್ಬಂದಿಗಳಿಗೆ ಝೂನೋಟಿಕ್ ರೋಗಗಳ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಕುರಿತ ತರಬೇತಿ ಸಾಧನಗಳನ್ನು ಪ್ರಾರಂಭಿಸಿದ ಪ್ರಸನ್ನ ಸ್ಕೂಲ್ ಆಫ್ ಪಬ್ಲಿಕ್ ಹೆಲ್ತ್

ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಉಡುಪಿ ಜಿಲ್ಲೆಯ ಪ್ರತಿಭಾವಂತ ವಿದ್ಯಾರ್ಥಿ ದೀಪೇಶ್ ದೀಪಕ್ ಶೆಣೈ ದ್ವಿತೀಯ

ನೇಜಾರಿನ ತಾಯಿ ಮತ್ತು ಮೂವರು ಮಕ್ಕಳ ಕೊಲೆ ಪ್ರಕರಣ – ತಮ್ಮ ವಕಾಲತ್ತನ್ನು ವಾಪಾಸು ಪಡೆದ ಆರೋಪಿ ಪ್ರವೀಣ್ ಚೌಗುಲೆ ಪರ ವಕೀಲರು